Homeಕರ್ನಾಟಕSC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

- Advertisement -
- Advertisement -

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವು ಮೀಸಲಾತಿಯ ಶೇ.50ರ ಮಿತಿಯನ್ನು ಮೀರಿ, ಒಟ್ಟು ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸುವ ತೀರ್ಮಾನ ಕೈಗೊಂಡಿತ್ತು. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು.

ಹಿಂದಿನ ಸರ್ಕಾರವು ಈ ಸಂಬಂಧ ಆದೇಶ ಹೊರಡಿಸಿ ಕ್ರಮಗಳನ್ನು ಕೈಗೊಂಡಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ಅನೇಕ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ ಪ್ರಮಾಣವನ್ನು ಅನುಸರಿಸಿದೆ. ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ವಿವಿಧ ವ್ಯಕ್ತಿಗಳು ನ್ಯಾಯಾಲಯದ ಮೊರೆ ಹೋದ ಸಂದರ್ಭದಲ್ಲಿ ರಾಜ್ಯ ಸರ್ಕಾರವೂ ತನ್ನ ನಿಲುವನ್ನು ಮಂಡಿಸಿ, ಮೀಸಲಾತಿ ಹೆಚ್ಚಳವನ್ನು ಎತ್ತಿಹಿಡಿಯುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಮೀಸಲಾತಿಯನ್ನು ಯಾವ ಉದ್ದೇಶಕ್ಕಾಗಿ ಜಾರಿಗೆ ತರಲಾಗಿದೆ ಎಂಬುದನ್ನು ಮೂಲಭೂತವಾಗಿ ಅರ್ಥಮಾಡಿಕೊಳ್ಳಬೇಕಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಮೀಸಲಾತಿಯನ್ನು ಕೇವಲ ಆಡಳಿತಾತ್ಮಕ ಆದೇಶಗಳ ಮೂಲಕ ಜಾರಿಗೊಳಿಸದೆ, ಸಂವಿಧಾನದಲ್ಲಿಯೇ ಅವಕಾಶ ಕಲ್ಪಿಸಿರುವುದರ ಹಿಂದೆ ಮಹತ್ವದ ಸಾಮಾಜಿಕ ಉದ್ದೇಶವಿದೆ.

ಸಾವಿರಾರು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಅವಕಾಶಗಳಿಂದ ವಂಚಿತರಾದ ಸಮುದಾಯಗಳಿಗೆ ನ್ಯಾಯ ಒದಗಿಸುವುದು ಮೀಸಲಾತಿಯ ಮೂಲ ಉದ್ದೇಶವಾಗಿದೆ. ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳು ದೊರೆಯಬೇಕು. ಹಿಂದುಳಿದ ಹಾಗೂ ಅವಕಾಶವಂಚಿತ ಸಮುದಾಯಗಳೂ ಸಮಾಜದ ಮುಖ್ಯವಾಹಿನಿಗೆ ಬಂದು ಅಭಿವೃದ್ಧಿ ಹೊಂದಬೇಕು ಎಂಬ ಉದ್ದೇಶದಿಂದ ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಡಿಸಿಎಂ ಬರೆದುಕೊಂಡಿದ್ದಾರೆ.

ಸಮಾಜದಲ್ಲಿ ಸಮಾನತೆಯನ್ನು ಸ್ಥಾಪಿಸುವುದೇ ಸಂವಿಧಾನದ ಆಶಯವಾಗಿದೆ. ಮೀಸಲಾತಿಗೆ ಸಂಬಂಧಿಸಿದ ಯಾವುದೇ ತೀರ್ಮಾನ ಕೈಗೊಳ್ಳುವಾಗ ಅದರ ಹಿಂದಿರುವ ಸಾಮಾಜಿಕ ನ್ಯಾಯದ ಉದ್ದೇಶ ಹಾಗೂ ಸಮುದಾಯಗಳ ಪರಿಸ್ಥಿತಿಯನ್ನು ಪರಿಗಣಿಸುವುದು ಮುಖ್ಯ ಎಂದಿದ್ದಾರೆ.

ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿಗೆ ಸಂವಿಧಾನ ತಿದ್ದುಪಡಿಯ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆ ರಾಜ್ಯಕ್ಕೆ ಅಂತಹ ಅವಕಾಶ ದೊರೆತಿರುವಾಗ, ಕರ್ನಾಟಕದಲ್ಲಿ ಶೇ.50ರ ಮಿತಿಗಿಂತ ಹೆಚ್ಚುವರಿಯಾಗಿ ಶೇ.6ರಷ್ಟು ಮೀಸಲಾತಿ ಕಲ್ಪಿಸಿರುವುದನ್ನೂ ಅದರ ಸಾಮಾಜಿಕ ಹಿನ್ನೆಲೆಯ ಆಧಾರದಲ್ಲಿ ವಿಶೇಷ ಪ್ರಕರಣವಾಗಿ ಪರಿಗಣಿಸಬಹುದಿತ್ತು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.

ಮೀಸಲಾತಿ ಹೆಚ್ಚಳದ ಹಿಂದಿರುವ ಸಾಮಾಜಿಕ ಉದ್ದೇಶ ಹಾಗೂ ಅವಕಾಶವಂಚಿತ ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ನ್ಯಾಯಾಲಯವು ಅಸಾಧಾರಣ ಸಂದರ್ಭದ ಆಧಾರದಲ್ಲಿ ತೀರ್ಮಾನ ಕೈಗೊಳ್ಳಬಹುದಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳವನ್ನು ತಿರಸ್ಕರಿಸಿರುವುದು ಸಮಂಜಸವಲ್ಲ ಎಂದು ತಿಳಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಸಂವಿಧಾನದ ಚೌಕಟ್ಟಿನಲ್ಲಿ ಬೇರೆ ಯಾವ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟವು ಎಲ್ಲ ಸಾಧಕ-ಬಾಧಕಗಳನ್ನು ಪರಿಗಣಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ನ್ಯಾಯಾಧೀಶರು ಕಾನೂನಿನ ಪ್ರಕಾರ ತಮ್ಮ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಸರ್ಕಾರವು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಿ ನಿರ್ದಿಷ್ಟ ತೀರ್ಪು ನೀಡುವಂತೆ ಹೇಳಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಪನ್ನು ಕಾನೂನಿನ ಚೌಕಟ್ಟಿನಲ್ಲಿ ಮೇಲ್ಮಟ್ಟದ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿದೆ. ಆ ಅವಕಾಶವನ್ನು ಬಳಸಿಕೊಳ್ಳುವ ಕುರಿತು ಸಚಿವ ಸಂಪುಟ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.

ಶೇ.56ರಷ್ಟು ಮೀಸಲಾತಿಯ ಆಧಾರದಲ್ಲಿ ಈಗಾಗಲೇ ನಡೆದಿರುವ ಶೈಕ್ಷಣಿಕ ಪ್ರವೇಶಾತಿ ಹಾಗೂ ಸರ್ಕಾರಿ ನೇಮಕಾತಿಗಳ ಮೇಲೆ ಹೈಕೋರ್ಟ್ ತೀರ್ಪು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಪರಿಶೀಲಿಸಬೇಕಿದೆ.

ಈಗಾಗಲೇ ನಡೆದಿರುವ ನೇಮಕಾತಿಗಳ ಪರಿಸ್ಥಿತಿ ಏನಾಗುತ್ತದೆ? ನ್ಯಾಯಾಲಯದ ಆದೇಶವು ಹಿಂದಿನ ದಿನಾಂಕದಿಂದ ಅನ್ವಯವಾಗುತ್ತದೆಯೇ ಅಥವಾ ಮುಂದಿನ ಪ್ರಕ್ರಿಯೆಗಳಿಗೆ ಮಾತ್ರ ಅನ್ವಯವಾಗುತ್ತದೆಯೇ? ಇಂತಹ ಎಲ್ಲ ಕಾನೂನಾತ್ಮಕ ಪ್ರಶ್ನೆಗಳು ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳನ್ನು ಸಮಗ್ರವಾಗಿ ಚರ್ಚಿಸಬೇಕಿದೆ.

ಈ ಕುರಿತು ಅಡ್ವೊಕೇಟ್ ಜನರಲ್ ಹಾಗೂ ಕಾನೂನು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾನೂನಿನ ಪ್ರಕಾರ ಯಾವ ಕ್ರಮಗಳು ಸಾಧ್ಯ ಎಂಬುದನ್ನು ಪರಿಶೀಲಿಸಿದ ನಂತರವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ವಿವರಿಸಿದ್ದಾರೆ.

ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಬೇಕಾದ ಪರಿಸ್ಥಿತಿ ಎದುರಾದರೆ ಒಳಮೀಸಲಾತಿ ಪ್ರಮಾಣಗಳನ್ನೂ ಅನುಪಾತದ ಆಧಾರದಲ್ಲಿ ಪರಿಷ್ಕರಿಸುವ ಸಾಧ್ಯತೆ ಇದೆ. ಗಣಿತದ ದೃಷ್ಟಿಯಿಂದ ಅಂತಹ ಪರಿಷ್ಕರಣೆ ಮಾಡುವುದು ಕಷ್ಟದ ವಿಚಾರವಲ್ಲ. ಆದರೆ ಇದರಿಂದ ವಿವಿಧ ಸಮುದಾಯಗಳಿಗೆ ದೊರೆಯಬೇಕಾದ ಅವಕಾಶಗಳು ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚು ಆತಂಕಕಾರಿ ವಿಷಯವಾಗಿದೆ.

ಹೈಕೋರ್ಟ್ ತೀರ್ಪಿನಿಂದ ಉದ್ಯೋಗಾಕಾಂಕ್ಷಿಗಳು ಹಾಗೂ ಮುಂದಿನ ನೇಮಕಾತಿ ಪ್ರಕ್ರಿಯೆಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನೂ ಪರಿಶೀಲಿಸಬೇಕಿದೆ. ಸಂವಿಧಾನದ ಚೌಕಟ್ಟಿನೊಳಗೆ ಕಾನೂನಾತ್ಮಕವಾಗಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಚರ್ಚಿಸಲಿದೆ ಎಂದು ಡಿಸಿಎಂ ಹೇಳಿದ್ದಾರೆ.

































ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಥನಾಲ್ ಪ್ರಮಾಣವನ್ನು ಶೇ. 20ರಿಂದ 30ಕ್ಕೆ ಏರಿಸಲು ಕೇಂದ್ರ ಸರ್ಕಾರದಲ್ಲಿ ಈ ಹಿಂದೆಯೇ ಚರ್ಚೆಯಾಗಿತ್ತು!: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಬೆಂಗಳೂರು: ಕರ್ನಾಟಕದಲ್ಲಿ E20 ಪೆಟ್ರೋಲ್‌ನಲ್ಲಿ ನಿಗದಿತ ಮಿತಿಗಿಂತಲೂ ಅಧಿಕ ಪ್ರಮಾಣದ ಎಥನಾಲ್ ಬೆರೆಸಿ ಸಾರ್ವಜನಿಕರಿಗೆ ವಂಚಿಸಲಾಗುತ್ತಿದೆ ಎನ್ನುವ ರಾಜ್ಯ ಸರ್ಕಾರದ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗೆ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ರಾಜೀನಾಮೆ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ಪಶ್ಚಿಮ ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗಳಿಗೆ ರಾಜೀನಾಮೆ ನೀಡಿದ್ದಾರೆ, ಒಂದು ತಿಂಗಳಲ್ಲಿ ಸಮಿತಿಯಿಂದ ಹೊರಗುಳಿದ 19 ಸದಸ್ಯರಲ್ಲಿ ನಾಲ್ಕನೇ ವ್ಯಕ್ತಿಯಾಗಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಿಂದ ಹೊರಗುಳಿದ...

‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ 'ನೋಟ್ ಬಂದ್' ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ 'ವೋಟ್ ಬಂದ್' ದೇಶದ ರಾಜಕೀಯ...

“ಪಟಾಕಿಗಳನ್ನು ಸಿಡಿಸುವುದರಿಂದ ಹಲವು ರೋಗ-ರುಜಿನಗಳು ಗುಣಮುಖವಾಗುತ್ತವೆ” – ಪಶ್ಚಿಮ ಬಂಗಾಳ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಹೇಳಿಕೆ!

ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ದ ನಿಯಂತ್ರಿಸಲು ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸುತ್ತಿರುವ ಬೆನ್ನಲ್ಲೇ, ಕೋಲ್ಕತ್ತಾದ ಟಾಲಿಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ...

ಎನ್‌ಡಿಎ ಪರೀಕ್ಷೆ; ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ

ಕರ್ನಾಟಕದ 18 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ...

ಗೂಗಲ್ ‘ರೀಯೂನಿಯನ್’ ಜಾಹೀರಾತು ಬಿಡುಗಡೆಯಾಗಿ 13 ವರ್ಷ: ಕುನಾಲ್ ಕಾಮ್ರಾ ಪೋಸ್ಟ್‌ನಿಂದ ಮತ್ತೆ ನೆನಪಾದ ಗಡಿ ಮೀರಿದ ಸೌಹಾರ್ದತೆ!

13 ವರ್ಷಗಳ ಹಿಂದೆ ಅಂದರೆ 2013ರ ನವೆಂಬರ್ 13ರಂದು ಗೂಗಲ್ ಇಂಡಿಯಾ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದ್ದ ಜಾಗತಿಕ ಪ್ರಸಿದ್ಧ ‘ರೀಯೂನಿಯನ್’ (Google Reunion) ಜಾಹೀರಾತು, ಇಂದು ಸಾಮಾಜಿಕ ಜಾಲತಾಣ...

ಕೇಂದ್ರ ಸಚಿವರ ಜೇಬು ತುಂಬಿಸಲು ಎಥನಾಲ್ ದಂಧೆ!: 130 ಕೋಟಿ ಜನರಿಗೆ 20% ಹೆಸರಲ್ಲಿ 40% ಎಥನಾಲ್ – ಪ್ರಿಯಾಂಕ್‌ ಖರ್ಗೆ!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು (OMCs) ಸರಬರಾಜು ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಯಮಾನುಸಾರ ಇರಬೇಕಾದ ಶೇಕಡಾ 20 ಕ್ಕಿಂತಲೂ ಅಧಿಕ ಪ್ರಮಾಣದ ಎಥನಾಲ್ ಮಿಶ್ರಣ ಮಾಡುತ್ತಿರುವುದು ಈಗ ರಾಜ್ಯ ಸರ್ಕಾರ ನಡೆಸಿದ ತನಿಖೆಯಿಂದ...

ಎಥೆನಾಲ್ ಅತಿಯಾದ ಮಿಶ್ರಣ: ಸಾವಿರಾರು ವಾಹನಗಳಿಗೆ ಸಮಸ್ಯೆ, ಎಂಜಿನ್‌ಗಳು ಸ್ಥಗಿತ; ಆರೋಪ ಮತ್ತಷ್ಟು ತೀವ್ರಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವಿವಾದ ಕರ್ನಾಟಕದಲ್ಲಿ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ವಿವಿಧೆಡೆ ಸಾವಿರಾರು ವಾಹನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿವೆ, ಎಂಜಿನ್‌ಗಳು ಪದೇಪದೇ ಸ್ಥಗಿತಗೊಳ್ಳುತ್ತಿವೆ ಮತ್ತು...

‘ಕಾಂಗ್ರೆಸಿಗರನ್ನು ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತೇವೆ’ ಎಂದಿದ್ದ ನಾರಾಯಣಸ್ವಾಮಿ ಮನೆಗೆ ಬ್ಲಿಂಕಿಟ್ ಮೂಲಕ 20 ಚಾಕುಗಳ ಆರ್ಡರ್: ದೂರು ದಾಖಲಿಸಿದ ಬಿಜೆಪಿ

ಬೆಂಗಳೂರು: ಕ್ವಿಕ್ ಕಾಮರ್ಸ್ ವೇದಿಕೆ ಬ್ಲಿಂಕಿಟ್ ಮೂಲಕ ತನಗೆ 20 ಚಾಕುಗಳನ್ನು ಕಳುಹಿಸಲಾಗಿದೆ. ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರೇ ಈ ಚಾಕುಗಳನ್ನು ಆರ್ಡರ್ ಮಾಡಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ...

ಫಿರೋಜಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ; ಬಹು ಅಂಗಾಂಗ ಹಾನಿಯಿಂದ 16 ವರ್ಷದ ದಲಿತ ಬಾಲಕಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನವೆಂಬರ್ 1 ರಂದು ಬರ್ಬರ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 16 ವರ್ಷದ ದಲಿತ ಬಾಲಕಿ, ಆಗ್ರಾದ ಆಸ್ಪತ್ರೆಯೊಂದರಲ್ಲಿ ಸುಮಾರು ಒಂದು ವಾರಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಆಕೆಯನ್ನು...