Homeಕರ್ನಾಟಕಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

- Advertisement -
- Advertisement -

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ, ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು.

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಉಸ್ತುವಾರಿ ಸಮಿತಿಯ ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಗಿದೆ.

ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಮುಖ್ಯಮಂತ್ರಿಗಳು, ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಲು ಆದೇಶಿಸಿದ್ದಾರೆ.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ತಿಳಿಸಲಾಗಿದೆ.

ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿ ಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಜನಾಕ್ರೋಶಕ್ಕೆ ಮಣಿದ ಮೈಸೂರು ವಿವಿ; ಮಹಿಳಾ ವಿರೋಧಿ ಸುತ್ತೋಲೆ ವಾಪಾಸ್!

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಎಸ್.ಸಿ.ಪಿ/ ಟಿಎಸ್ ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿ ಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೇ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿಲಾಗಿದೆ.

ಆದರೆ, ಇತ್ತಿಚೆಗೆ ರಾಜ್ಯದಲ್ಲಿ ಪರಿಶಿಷ್ಟ ಕಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇವೆ. ಕೆಲವು ಪ್ರಕರಣಗಳು ಪೊಲೀಸ್ ಠಾಣೆ ಮೇಟ್ಟಿಲು ಕೂಡ ಹತ್ತುವುದಿಲ್ಲ. ಇಂತಹ ಪ್ರಕರಣಗಳ ಕಡೆಗೂ ಸರ್ಕಾರ ಗಮನ ಹರಿಸುವ ಅಗತ್ಯತೆ ಇದೆ.

ಕಳೆದ ವಾರ ಮೊಹರಂ ಹಬ್ಬದ ವೇಳೆ ಗಂಗಾವತಿಯ ಸಿಂಗನಾಳ ಗ್ರಾಮದಲ್ಲಿ ಸವರ್ಣಿಯರು ದಲಿತ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. 10ಕ್ಕೂ ಹೆಚ್ಚು ದಲಿತ ಸಮುದಾಯದವರಿಗೆ ಗಾಯಗಳಾಗಿದ್ದರೂ ಕೂಡ ಪೊಲೀಸರು ಎಫ್‌ಐಆರ್‌ನಲ್ಲಿ ಒಬ್ಬರಿಗೆ ಗಾಯ ಎಂದು ನಮೂದಿಸಿದ್ದಾರೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರದ ಇಂದಿನ ಸಭೆಯ ವಿಷಯಗಳು ಕೇವಲ ಸಭೆಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೂ ಬರಲಿ ಎಂಬುದು ದಲಿತಪರ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...