Homeಮುಖಪುಟಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಸುಪ್ರೀಂ ತಡೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ‘ಕಾನೂನುಬಾಹಿರವಾಗಿ’ ನೇಮಕಗೊಂಡಿರುವ 25 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಆದರೆ, ಪ್ರಕರಣದ ತನಿಖೆ ವೇಳೆ ಇಡೀ ಸಚಿವ ಸಂಪುಟ ಬಂಧನಕ್ಕೊಳಗಾಗಬಹುದು ಎಂಬ ರಾಜ್ಯ ಸರ್ಕಾರದ ಭಯವನ್ನು ಸುಪ್ರೀಂ ಕೋರ್ಟ್ ನಿವಾರಿಸಿದೆ. ಶಿಕ್ಷಕರ ನೇಮಕಾತಿಯಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳನ್ನು ಸಿಬಿಐ ತನಿಖೆಗೆ ಒಳಪಡಿಸುವ ಹೈಕೋರ್ಟ್‌ನ ಆದೇಶವನ್ನು ತಡೆ ಹಿಡಿದಿದೆ.

ನೇಮಕಾತಿ ಪರೀಕ್ಷೆಯನ್ನು ನಡೆಸಿದ ಏಜೆನ್ಸಿ, ಒಎಂಆರ್‌ ಉತ್ತರ ಪತ್ರಿಕೆಗಳ ನಾಶ, ಫಲಿತಾಂಶಗಳ ಸಾಫ್ಟ್‌ವೇರ್ ಡೇಟಾ ಅಳಿಸುವಿಕೆ ಮತ್ತು ಆಯ್ಕೆ ಸಮಿತಿಯ ಭಾಗವಾಗಿರದ ಜನರನ್ನು ಸೇರಿಸಿಕೊಳ್ಳುವುದರ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. “ಹೈಕೋರ್ಟ್ ಹೇಗೆ ತಪ್ಪು ಮಾಡಿದೆ ಎಂಬುದನ್ನು ನೀವು ನಮಗೆ ಸಮರ್ಥಿಸಬೇಕು” ಎಂದು ಸಿಜೆಐ ಹೇಳಿದ್ದಾರೆ. ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.

ಕಳೆದ ವಾರ ಹೊರಡಿಸಿದ ಆದೇಶದಲ್ಲಿ, ಕಲ್ಕತ್ತಾ ಹೈಕೋರ್ಟ್ ರಾಜ್ಯದ ಮಾಧ್ಯಮಿಕ ಮತ್ತು ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ವಿವಿಧ ವರ್ಗಗಳ ಉದ್ಯೋಗಗಳಿಗಾಗಿ 2016 ರಲ್ಲಿ ನೇಮಕಾತಿ ಮಾಡಲಾದ ಎಲ್ಲಾ 25,753 ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿತ್ತು.

ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಶಬ್ಬರ್ ರಾಶೀದಿ ಅವರ ವಿಭಾಗೀಯ ಪೀಠವು ಆಯ್ಕೆಯಾದ ಅಭ್ಯರ್ಥಿಗಳು ಮುಂದಿನ ನಾಲ್ಕು ವಾರಗಳಲ್ಲಿ ಅವರು ಪಡೆದ ಸಂಪೂರ್ಣ ವೇತನವನ್ನು ಶೇ 12ರ ವಾರ್ಷಿಕ ಬಡ್ಡಿಯೊಂದಿಗೆ ಹಿಂದಿರುಗಿಸಬೇಕು ಎಂದು ಆದೇಶಿಸಿದೆ.

ಹೊಸದಾಗಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗಕ್ಕೆ (ಡಬ್ಲ್ಯುಬಿಎಸ್‌ಎಸ್‌ಸಿ) ನಿರ್ದೇಶನ ನೀಡುವುದರ ಜೊತೆಗೆ, ಈ ವಿಷಯದ ಬಗ್ಗೆ ತನಿಖೆ ಮುಂದುವರಿಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶಿಸಿತ್ತು.

ಸೂಪರ್ ನ್ಯೂಮರಿಕ್ ಹುದ್ದೆಗಳ ಸೃಷ್ಟಿಗೆ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು, ಅಗತ್ಯಬಿದ್ದರೆ ಖಾಲಿ ಹುದ್ದೆಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಸೃಷ್ಟಿಸಿದ ಮಾಸ್ಟರ್‌ಮೈಂಡ್‌ಗಳನ್ನು ಸಿಬಿಐ ಪ್ರಶ್ನಿಸಬಹುದು ಎಂದು ಹೈಕೋರ್ಟ್ ಹೇಳಿದೆ. ಮೊದಲಿನಿಂದಲೂ ಹಾಗೆಯೇ ಉಳಿದಿದ್ದ ಈ ಸೂಪರ್ ನ್ಯೂಮರಿಕ್ ಪೋಸ್ಟ್‌ಗಳು ಅಕ್ರಮವಾಗಿ ನೇಮಕಗೊಂಡಿರುವ ಅನರ್ಹ ಅಭ್ಯರ್ಥಿಗಳಿಗೆ ಜಾಗವನ್ನು ಒದಗಿಸುತ್ತವೆ ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ : ಅಮಿತ್ ಶಾ ಕುರಿತ ಎಡಿಟೆಡ್ ವಿಡಿಯೋ ಹಂಚಿಕೆ; ಆಂಧ್ರ ಸಿಎಂ ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರಿಂದ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...