Homeಮುಖಪುಟಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ- 2013ರ ಅಡಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದು ತೀರ್ಪು ನೀಡಿದ್ದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ (ಫೆ.20) ತಡೆ ನೀಡಿದೆ.

ಲೋಕಪಾಲ್ ಆದೇಶ ‘ತುಂಬಾ ಕಳವಳಕಾರಿ’ ಎಂದಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಲೋಕಪಾಲ್ ರಿಜಿಸ್ಟ್ರಾರ್‌ಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ವಿಶೇಷ ಪೀಠವು ನೋಟಿಸ್ ಜಾರಿಗೊಳಿಸಿ, ಕೇಂದ್ರ ಸರ್ಕಾರ, ಲೋಕಪಾಲ್ ರಿಜಿಸ್ಟ್ರಾರ್ ಮತ್ತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರು ದಾಖಲಿಸಿರುವ ವ್ಯಕ್ತಿಯಿಂದ ಪ್ರತಿಕ್ರಿಯೆ ಕೋರಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ನ್ಯಾಯಾಧೀಶರು ಎಂದಿಗೂ ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ-2013 ರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಅಭಯ್ ಎಸ್ ಓಕಾ ಅವರನ್ನೂ ಒಳಗೊಂಡ ಪೀಠವು, ದೂರುದಾರರು ನ್ಯಾಯಾಧೀಶರ ಹೆಸರನ್ನು ಬಹಿರಂಗಪಡಿಸದಂತೆ ತಡೆಯಾಜ್ಞೆ ನೀಡಿದೆ ಮತ್ತು ಅವರು ಸಲ್ಲಿಸಿದ ದೂರನ್ನು ಗೌಪ್ಯವಾಗಿಡಲು ನಿರ್ದೇಶಿಸಿದೆ. ಆಕ್ಷೇಪಾರ್ಹ ಆದೇಶಕ್ಕೆ ತಡೆಯಾಜ್ಞೆ ನೀಡುತ್ತಿದ್ದೇವೆ ಎಂದು ಹೇಳಿದೆ.

ಲೋಕಪಾಲ್ ಜನವರಿ 27 ರಂದು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ.

ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಈ ವಿಷಯವನ್ನು ನಿರ್ವಹಿಸುವಲ್ಲಿ ಪೀಠಕ್ಕೆ ಸಹಾಯ ಮಾಡಲು ಬಯಸುವುದಾಗಿ ಹೇಳಿದ್ದಾರೆ. ಲೋಕ್ ಪಾಲ್ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನ ಅನುಸಾರ ಮಾರ್ಚ್ 18 ರಂದು ಈ ವಿಷಯವನ್ನು ಮತ್ತೆ ವಿಚಾರಣೆಗೆ ನಡೆಸಲಾಗುವುದು ಎಂದು ಪೀಠ ತಿಳಿಸಿದೆ.

“ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಈ ವಿಷಯವು ಬಹಳ ಮಹತ್ವದ್ದಾಗಿರುವುದರಿಂದ” ಸಿಬಲ್ ಮತ್ತು ಮತ್ತೊಬ್ಬ ಹಿರಿಯ ವಕೀಲರು ನ್ಯಾಯಾಲಯಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

“ಲೋಕಪಾಲ್ ಅಧಿಕಾರಕ್ಕೆ ಮಿತಿ ಇದೆ. ಈ ಆದೇಶವನ್ನು ನಾವು ತಡೆಹಿಡಿದಿದ್ದೇವೆ. ಈ ಆದೇಶದ ಪರಿಣಾಮಗಳೇನು ಎಂದು ಅವರಿಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಇದು ಅರ್ಥವಾಗದಿದ್ದರೆ, ನಾವು ಇಲ್ಲಿದ್ದೇವೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ಹೈಕೋರ್ಟ್‌ನ ಹಾಲಿ ಹೆಚ್ಚುವರಿ ನ್ಯಾಯಾಧೀಶರ ವಿರುದ್ಧ ದಾಖಲಾಗಿದ್ದ ಎರಡು ದೂರುಗಳ ಮೇರೆಗೆ ಲೋಕಪಾಲ್ ಆದೇಶ ನೀಡಿತ್ತು.

ಖಾಸಗಿ ಕಂಪನಿಯೊಂದು ದೂರುದಾರರ ವಿರುದ್ಧ ಹೂಡಿದ್ದ ಮೊಕದ್ದಮೆಯನ್ನು ನಿರ್ವಹಿಸಬೇಕಿದ್ದ ರಾಜ್ಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಅದೇ ಹೈಕೋರ್ಟ್‌ನ ನ್ಯಾಯಾಧೀಶರ ಮೇಲೆ ಅವರು ಪ್ರಭಾವ ಬೀರಿ ಆ ಸಂಸ್ಥೆಯ ಪರವಾಗಿ ಕೆಲಸ ಮಾಡಿದ್ದಾರೆ ಎಂದು ದೂರುಗಳಲ್ಲಿ ಆರೋಪಿಸಲಾಗಿದೆ.

ಖಾಸಗಿ ಕಂಪನಿಯು ಈ ಹಿಂದೆ ಹೈಕೋರ್ಟ್ ನ್ಯಾಯಾಧೀಶರು ವಕೀಲರ ಸಂಘದ ಸದಸ್ಯರಾಗಿ ಅಭ್ಯಾಸ ಮಾಡುತ್ತಿದ್ದಾಗ ಅವರ ಕಕ್ಷಿದಾರರಾಗಿದ್ದರು ಎಂದು ಹೇಳಲಾಗಿದೆ.

ಕೇಂದ್ರದ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...