Homeಮುಖಪುಟಮಾನನಷ್ಟ ಮೊಕದ್ದಮೆ | ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಮಾನನಷ್ಟ ಮೊಕದ್ದಮೆ | ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಜ.20) ತಡೆ ನೀಡಿದೆ.

2019ರ ಲೋಕಸಭಾ ಚುನಾವಣೆಗೆ ಮುನ್ನ ಜಾರ್ಖಂಡ್‌ನ ಚೈಬಾಸಾದಲ್ಲಿ ನಡೆದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಉಲ್ಲೇಖಿಸಿದ ಆರೋಪವಿದೆ. ಈ ಸಂಬಂಧ ಬಿಜೆಪಿ ನಾಯಕ ನವೀನ್ ಝಾ ಅವರು ದೂರು ದಾಖಲಿಸಿದ್ದರು.

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ “ವಿಚಾರಣಾ ನ್ಯಾಯಾಲಯ ಪ್ರಕರಣದ ವಿಚಾರಣೆ ಮುಂದುವರೆಸುವುದಕ್ಕೆ ತಡೆಯಾಜ್ಞೆ ನೀಡಿದೆ ಎಂದು ವರದಿಗಳು ಹೇಳಿವೆ.

ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಗಾಂಧಿ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ನೀವು ನೊಂದ ವ್ಯಕ್ತಿಯಲ್ಲದಿರುವಾಗ ದೂರು ನೀಡಲು ಹೇಗೆ ಸಾಧ್ಯ ಎಂದು ನವೀನ್ ಝಾ ದೂರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಂಘ್ವಿ ಅವರ ಅರ್ಜಿಯನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಜಾರ್ಖಂಡ್ ಸರ್ಕಾರ ಮತ್ತು ದೂರುದಾರ (ಝಾ) ಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಜಾರ್ಖಂಡ್ ಹೈಕೋರ್ಟ್ ತಮ್ಮ ಅರ್ಜಿಯನ್ನು ವಜಾಗೊಳಿಸಿದ ನಂತರ, ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ 2018ರ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಹುಲ್ ಗಾಂಧಿಯವರ ಹೇಳಿಕೆಗಳು ‘ಪ್ರಥಮ ನೋಟಕ್ಕೆ ಮಾನನಷ್ಟಕರ’ ಎಂದು ಪರಿಗಣಿಸಿ, ಜಾರ್ಖಂಡ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಂಬುಜ್ ನಾಥ್ ಅವರು ಅರ್ಜಿಯನ್ನು ವಜಾಗೊಳಿಸಿದ್ದರು.

ಮಾರ್ಚ್ 18, 2018 ರಂದು ನಡೆದ ಕಾಂಗ್ರೆಸ್ ಸಮಗ್ರ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅಮಿತ್ ಶಾ ಅವರ ವಿರುದ್ದ ಮಾನನಷ್ಟದ ಹೇಳಿಕೆ ನೀಡಿದ್ದಾರೆ ಎಂದು ಝಾ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ರಾಹುಲ್ ಗಾಂಧಿ ಹೇಳಿಕೆ “ಭಾರತೀಯ ಜನತಾ ಪಕ್ಷ (ಬಿಜೆಪಿ) ಗಾಗಿ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿರುವ” ಎಲ್ಲಾ ಕಾರ್ಯಕರ್ತರು, ಬೆಂಬಲಿಗರು ಮತ್ತು ನಾಯಕರಿಗೆ ಮಾಡಿದ ಅವಮಾನ ಎಂದು ಅವರು ಹೇಳಿದ್ದರು.

ಇದನ್ನೂ ಓದಿ : ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...