Homeಮುಖಪುಟಹೈದರಾಬಾದ್ ವಿವಿ 'ಕಾಂಚ ಗಚಿಬೌಲಿ' ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯದ (ಯುಒಹೆಚ್‌) ಜಾಗಕ್ಕೆ ಹೊಂದಿಕೊಂಡಿರುವ ‘ಕಾಂಚ ಗಚಿಬೌಲಿ’ಯ 400 ಎಕರೆ ಅರಣ್ಯ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಏ.2) ನೀಡಿರುವ ಮಧ್ಯಂತರ ಆದೇಶವನ್ನು ತೆಲಂಗಾಣ ಗುರುವಾರ ಹೈಕೋರ್ಟ್ ವಿಸ್ತರಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ನಿಗದಿಪಡಿಸಿದೆ.

ಈ ನಡುವೆ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸರ್ವೋಚ್ಚ ನ್ಯಾಯಾಲಯ ಕೂಡ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ತಡೆ ನೀಡಿದೆ. ಮುಂದಿನ ಆದೇಶದವರೆಗೆ ಮರಗಳನ್ನು ಉರುಳಿಸದಂತೆ ನೋಡಿಕೊಳ್ಳಲು ತೆಲಂಗಾಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿರುವುದರಿಂದ ಹೈಕೋರ್ಟ್‌ ವಿಚಾರಣೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಬುಧವಾರ ತೆಲಂಗಾಣ ಹೈಕೋರ್ಟ್ ಕೂಡ ಮರಗಳ ತೆರವಿಗೆ ತಡೆ ನೀಡಿತ್ತು.

ತೆಲಂಗಾಣದ ಸರ್ಕಾರದ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘಿ ಅವರು, “ವಿವಾದಿತ ಭೂಮಿಯು ಅರಣ್ಯ ಎಂದು ಎಲ್ಲೂ ಉಲ್ಲೇಖಿಸಿಲ್ಲ. ಅದರ ಸುತ್ತಮುತ್ತಲಿನಲ್ಲಿ ಪ್ರದೇಶಗಳಲ್ಲಿ ಗಾಲ್ಫ್ ಕೋರ್ಸ್ ಮತ್ತು ಬಯೋ ಡೈವರ್ಸಿಟಿ ಪಾರ್ಕ್‌ನಂತಹ ಹಸಿರು ಸ್ಥಳಗಳಿವೆ. ಈ ಭೂಮಿಯನ್ನು ಐಎಂಜಿ ಭಾರತ್‌ ಎಂಬ ಸಂಸ್ಥೆಗೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ನಿರಂಜನ್ ರೆಡ್ಡಿ ವಾದ ಮಂಡಿಸಿ, “ಅರಣ್ಯನಾಶದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಲಾಗಿದೆ. ಪ್ರಕರಣ ನ್ಯಾಯಾಲಯದಲ್ಲಿದ್ದರೂ ಮರ ತೆರವು ಮುಂದುವರೆದಿದೆ. ಅದರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ವಾದ ಆಲಿಸಿದ ಸುಪ್ರೀಂ ಕೋರ್ಟ್, ಏಪ್ರಿಲ್ 7ರಂದು ನಡೆಯುವ ಮುಂದಿನ ವಿಚಾರಣೆಗೂ ಮೊದಲು ಮಧ್ಯಂತರ ಅರ್ಜಿ ಸಲ್ಲಿಸುವಂತೆ ತೆಲಂಗಾಣ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ವಿವಾದಿತ ಪ್ರದೇಶದಲ್ಲಿ ಮರಗಳನ್ನು ಕಡಿಯುವುದನ್ನು ತಡೆಹಿಡಿದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ದೊಡ್ಡ ಪ್ರಮಾಣದ ಅರಣ್ಯನಾಶದ ಆರೋಪದ ವರದಿಗಳನ್ನು ಗಮನಿಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು, ತೆಲಂಗಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ (ನ್ಯಾಯಾಂಗ) ಅವರಿಗೆ ಸ್ಥಳವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಏನಿದು ಅರಣ್ಯ ನಾಶ ವಿವಾದ?

ಹೈದರಾಬಾದ್ ಕೇಂದ್ರೀಯ ವಿವಿಯ ಜಮೀನಿಗೆ ಹೊಂದಿಕೊಂಡಿರುವ ನಗರದ ‘ಕಾಂಚಿ ಗಚಿಬೌಲಿ’ಯ 400 ಎಕರೆ ಅರಣ್ಯವನ್ನು ನಾಶ ಮಾಡಿ ಅಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರೋಪಿಸಲಾಗಿದೆ.

ವಿವಾದಿತ ಜಾಗವನ್ನು ಕಾಂಕ್ರೀಟ್ ಕಾಡಾಗಿ ಮಾರ್ಪಟ್ಟಿರುವ ಹೈದಾರಾಬಾದ್‌ನ ಐಟಿ ಹಬ್‌ ಫಿನಾಶಿಯಲ್ ಡಿಸ್ಟ್ರಿಕ್‌ನ ‘ಶ್ವಾಸಕೋಶ’ ಎಂದು ಕರೆಯಲಾಗುತ್ತದೆ. ಫಿನಾಶಿಯಲ್ ಡಿಸ್ಟ್ರಿಕ್‌ ಸಂಪೂರ್ಣ ಕಾಂಕ್ರೀಟ್ ಕಟ್ಟಡಗಳಿಂದ ತುಂಬಿದ್ದು, ಈ ವಿವಾದಿತ ಜಾಗ ಮಾತ್ರ ವನ್ಯ ಜೀವಿಗಳ ಏಕೈಕ ಅಶ್ರಯ ತಾಣವಾಗಿ ಉಳಿದಿದೆ.

ಈ ಜಾಗ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಂಕೆ, ನವಿಲು ಸೇರಿದಂತೆ ಅನೇಕ ವನ್ಯ ಜೀವಿಗಳ ಆಶ್ರಯ ತಾಣವಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಸರ್ಕಾರ ಬುಲ್ಡೋಜರ್‌ಗಳನ್ನು ತಂದು ರಾತ್ರೋ ರಾತ್ರಿ ಮರಗಳ ತೆರವಿಗೆ ಮುಂದಾಗಿತ್ತು. ಇದಕ್ಕೆ ಹೈದರಾಬಾದ್ ವಿವಿಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಮರಗಳ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ದಬ್ಬಾಳಿಕೆ ನಡೆಸಿದ್ದಾರೆ. ಬುಲ್ಡೋಜರ್ ತಂದು ಮರಗಳನ್ನು ಧರೆಗುಳಿಸುತ್ತಿರುವುದನ್ನು ವಿಡಿಯೋ ಮಾಡಿದ ವಿದ್ಯಾರ್ಥಿಯೊಬ್ಬರನ್ನು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿದೆ. ರಾತ್ರಿ ಹೊತ್ತು ಮರಗಳನ್ನು ಉರುಳಿಸುವಾಗ ನವಿಲುಗಳು ಚೀರಾಡುವ, ಎಲ್ಲಿಗೆ ಹೋಗಬೇಕೆಂದು ದಿಕ್ಕು ತೋಚದೆ ಓಡಾಡುವ ಜಿಂಕೆಗಳು ಹಾಗೂ ಮತ್ತಿತರ ವನ್ಯ ಜೀವಿಗಳ ಮನಕಲಕುವ ವಿಡಿಯೋಗಳು ಭಾರೀ ವೈರಲ್ ಆಗಿವೆ.

ವಿವಾದಿತ ಭೂಮಿ ಹೈದರಾಬಾದ್ ವಿವಿಯದ್ದಾ?

ಸರ್ಕಾರ ಅರಣ್ಯ ನಾಶ ಮಾಡಿ ಐಟಿ ಪಾರ್ಕ್‌ ಸ್ಥಾಪಿಸಲು ಹೊರಟಿರುವ 400 ಎಕರೆ ಭೂಮಿ ಹೈದರಾಬಾದ್ ವಿವಿಯದ್ದು ಎಂದು ವಿದ್ಯಾರ್ಥಿಗಳು ಮತ್ತು ಇತರ ಹೋರಾಟಗಾರರು ವಾದಿಸುತ್ತಿದ್ದಾರೆ. ಸರ್ಕಾರ ಐಟಿ ಪಾರ್ಕ್‌ ಮಾಡಲು ಮುಂದಾಗಿರುವ ಜಾಗ ಕಂದಾಯ ಇಲಾಖೆಯದ್ದಲ್ಲ ಎಂದಿದ್ದಾರೆ.

ಆದರೆ, ಸರ್ಕಾರ, ಅದು ವಿವಿಯ ಜಾಗವಲ್ಲ, ಸರ್ಕಾರದ ಜಾಗ. ಸರ್ವೆ ನಂಬರ್ 25ರ 400 ಎಕರೆ ಜಾಗವನ್ನು 2004 ರಲ್ಲಿ ಅವಿಭಜಿತ ಆಂಧ್ರಪ್ರದೇಶ ಸರ್ಕಾರ ಕ್ರೀಡಾ ಸೌಲಭ್ಯಗಳಿಗಾಗಿ ಖಾಸಗಿ ಸಂಸ್ಥೆಯಾದ ಐಎಂಜಿ ಅಕಾಡೆಮಿಸ್ ಭಾರತ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಿತ್ತು.

ನಂತರ, ಆ ಸಂಸ್ಥೆಯ ನಿಷ್ಕ್ರಿಯತೆಯ ಕಾರಣ 2006ರಲ್ಲಿ ಭೂಮಿ ಹಂಚಿಕೆಯನ್ನು ರದ್ದುಗೊಳಿಸಿತ್ತು. ಕಾನೂನು ಹೋರಾಟದ ನಂತರ ಸರ್ಕಾರ ಜಾಗವನ್ನು ಮರಳಿ ಪಡೆದುಕೊಂಡಿತು. ಸುಪ್ರೀಂ ಕೋರ್ಟ್ ಮೇ 2024ರಲ್ಲಿ ಸರ್ಕಾರದ ಮಾಲೀಕತ್ವವನ್ನು ಎತ್ತಿಹಿಡಿದಿದೆ.

ಕಂದಾಯ ದಾಖಲೆಗಳು ಇದನ್ನು “ಕಾಂಚ ಅಸ್ತಬಲ್ ಪೊರಂಬೋಕೆ ಸರ್ಕಾರಿ” (ಸರ್ಕಾರಿ ಭೂಮಿ) ಎಂದು ವರ್ಗೀಕರಿಸಿದೆ. ಜುಲೈ 19, 2024ರಂದು ವಿವಿ ಅಧಿಕಾರಿಗಳ ಸಮ್ಮುಖದಲ್ಲಿ ಸಮೀಕ್ಷೆ ನಡೆಸಿ ವಿವಿಯ ಭೂಮಿಯಿಂದ 400 ಎಕರೆಯನ್ನು ಬೇರ್ಪಡಿಸಿ ಗಡಿ ನಿರ್ಣಯಿಸಲಾಗಿದೆ.

ವಿವಿ ಜಾಗದಲ್ಲಿರುವ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳಿಗೆ ತೆಲಂಗಾಣ ಕೈಗಾರಿಕಾ ಮೂಲಸೌಕರ್ಯ ನಿಗಮ (ಟಿಜಿಐಐಸಿ) ಅಡಿಯಲ್ಲಿ ಕೈಗೊಳ್ಳುವ ಅಭಿವೃದ್ದಿ ಕಾಮಗಾರಿಗಳಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ವಾದಿಸಿದೆ.

ಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...