Homeಮುಖಪುಟಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರದ ಆದೇಶ ಸಮಾನತೆಯ ವಿರೋಧಿ ಎಂದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.26) ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು, ಆದ್ಯತೆ ಹಂಚಿಕೆಯನ್ನು ಅನುಮತಿಸುವ ಸರ್ಕಾರದ ಆದೇಶ ‘ವಿಚಿತ್ರ ಮತ್ತು ತರ್ಕಬದ್ದವಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಇದು ಅಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಸಂವಿಧಾನದ 14ನೇ ವಿಧಿಯ (ಸಮಾನತೆ) ಉಲ್ಲಂಘನೆಯಾಗಿದೆ ಎಂದಿದೆ.

ಸಂಸದರು, ಶಾಸಕರು, ಅಖಿಲ ಭಾರತ ಸೇವಾ ಅಧಿಕಾರಿಗಳು, ರಾಜ್ಯ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಪತ್ರಕರ್ತರನ್ನು ಮೂಲ ದರದಲ್ಲಿ ಭೂ ಮಂಜೂರಾತಿಗೆ ಪ್ರತ್ಯೇಕ ವರ್ಗ ಎಂದು ವರ್ಗೀಕರಿಸಿ, ಆಗಿನ ಆಂಧ್ರ ಪ್ರದೇಶ ಸರ್ಕಾರ 2005ರಲ್ಲಿ ಹೊರಡಿಸಿದ್ದ ಜ್ಞಾಪಕ ಪತ್ರವನ್ನು ಬದಿಗೊತ್ತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಈ ವಿಭಾಗಗಳಿಗೆ ಮಂಜೂರು ಮಾಡಿ 2008ರಲ್ಲಿ ನೀಡಲಾದ ಆದೇಶವನ್ನೂ ಸರ್ಕಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಆದೇಶ ಒಂದು ಕೆಟ್ಟ ಕಾನೂನು ಮತ್ತು ಸಂವಿಧಾನದ ವಿಧಿ 14ರ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ.

2010ರಲ್ಲಿ ತೆಲಂಗಾಣ ಹೈಕೋರ್ಟ್ ಸರ್ಕಾರದ ಆದೇಶವನ್ನು ಭಾಗಶಃ ರದ್ದುಗೊಳಿಸಿತ್ತು. ಇದರ ವಿರುದ್ಧ ತೆಲಂಗಾಣ ಸರ್ಕಾರ, ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಾಲಯವು ವಜಾಗೊಳಿಸಿದೆ.

“ಸಮಾಜದ ಅರ್ಹ ವರ್ಗಗಳಿಗೆ ಭೂಮಿ ಮಂಜೂರು ಮಾಡುವುದಾಗಿ ಹೇಳಿಕೊಂಡು ನ್ಯಾಯಸಮ್ಮತತೆಯ ವೇಷದಲ್ಲಿ ನಡೆಸುತ್ತಿರುವ ನಿರಂಕುಶ ಆಡಳಿತದ ಒಂದು ಕ್ರಮವಾಗಿದ ಈ ಆದೇಶ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಸಮಾಜದ ಶ್ರೀಮಂತ ವರ್ಗಗಳಿಗೆ ಆದ್ಯತೆಯಲ್ಲಿ ಮನೆಗಳನ್ನು ನೀಡಲು ಉದ್ದೇಶಿಸಿರುವುದು ಅಧಿಕಾರದ ದುರುಪಯೋಗವಾಗಿದೆ. ಅಲ್ಲದೆ, ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದವರನ್ನು ದೂರವಿಡುವ ಮೂಲಕ, ಅವರ ಸಮಾನತೆಯ ಹಕ್ಕನ್ನು ನಿರಾಕರಿಸುವ ನಡೆಯಾಗಿದೆ. ಇದು ಆರ್ಥಿಕ-ಸಾಮಾಜಿಕ ನೆಲೆಗಟ್ಟಿನಲ್ಲಿ ಬಡವರು ಮತ್ತು ಶ್ರೀಮಂತರನ್ನು ಸಮಾಜದಲ್ಲಿ ಪ್ರತ್ಯೇಕಿಸುತ್ತದೆ” ಎಂದು ಹೇಳಿದೆ. ಈ ಮೂಲಕ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.

“ಸರ್ಕಾರಗಳು ಸವಲತ್ತು ಪಡೆದ ಕೆಲವರಿಗೆ ರಿಯಾಯಿತಿ ದರದಲ್ಲಿ ಭೂಮಿಯನ್ನು ಹಂಚಿದಾಗ, ಅದು ಅಸಮಾನತೆಯನ್ನು ಸೃಷ್ಟಿಸುತ್ತದೆ. ಇತರರು ಪ್ರವೇಶಿಸಲಾಗದ ಅನ್ಯಾಯದ ಪ್ರಯೋಜನವನ್ನು ಅವರಿಗೆ ನೀಡಿದಂತಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

“ಈ ಪ್ರಾಶಸ್ತ್ಯದ ಪರಿಗಣನೆಯು ಸಮಾಜದಲ್ಲಿ ಕೆಲವು ವ್ಯಕ್ತಿಗಳು ಮಾತ್ರ ಹೆಚ್ಚಿನದನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳು ಅವರು ಪಡೆಯುವ ಸೌಲಭ್ಯಗಳು ಸಮಾಜಕ್ಕೆ ಮಾಡಿದ ಕೆಲಸಗಳಿಗಲ್ಲ, ಅವರು ಹೊಂದಿರುವ ಸ್ಥಾನಮಾನ ದೊರೆತಿದೆ ಎಂಬ ಭಾವನೆಯನ್ನು ಮೂಡಿಸುತ್ತದೆ” ಎಂದಿದೆ.

“ಇಂತಹ ಕ್ರಮಗಳು ಸಾಮಾನ್ಯ ನಾಗರಿಕರಲ್ಲಿ ಅಸಮಾಧಾನ ಮತ್ತು ಭ್ರಮನಿರಸನವನ್ನು ಉಂಟುಮಾಡುತ್ತವೆ. ಇದನ್ನು ಅವರು ಭ್ರಷ್ಟಚಾರ ಅಥವಾ ಅನ್ಯಾಯವೆಂದು ನೋಡುತ್ತಾರೆ. ಅವರಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ದುರ್ಬಲಗೊಳ್ಳುತ್ತದೆ. ಒಗ್ಗಟ್ಟು ಮತ್ತು ಭ್ರಾತೃತ್ವವನ್ನು ಹಾಳು ಮಾಡುತ್ತದೆ. ಸಾಮಾಜದ ಶ್ರೇಣಿಕೃತ ವ್ಯವಸ್ಥೆಗಳನ್ನು ಕೆಡವುವ ಬದಲು, ಬಲಪಡಿಸುತ್ತದೆ” ಎಂದು ನ್ಯಾಯಾಲಯ ವಿವರಿಸಿದೆ.

“ಸರ್ಕಾರದ ಆದೇಶ ಪತ್ರ ಅಸಮಾನತೆಯನ್ನು ಪ್ರತಿಪಾದಿಸುತ್ತದೆ. ಸಂವಿಧಾನ ಸೂಚಿಸಿದ ಸಮಾನತೆ ಮತ್ತು ನ್ಯಾಯೋಚಿತ ಮಾನದಂಡಗಳನ್ನು ಪೂರೈಸುವುದಿಲ್ಲ” ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ನಿವೇಶನಕ್ಕಾಗಿ ಠೇವಣಿ ಮಾಡಿರುವ ಸಂಪೂರ್ಣ ಮೊತ್ತದ ವಾಪಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಹಣ ವಾಪಸ್ ನೀಡುವ ಬಗ್ಗೆ ತೆಲಂಗಾಣ ಸರ್ಕಾರ ಪರಿಶೀಲಿಸಿ ಹಂಚಿಕೆ ಮಾಡಬೇಕಿದೆ.

ಸೊಸೈಟಿಗಳು ಮತ್ತು ಅದರ ಸದಸ್ಯರ ಪರವಾಗಿ ರಾಜ್ಯ ಸರ್ಕಾರ ಕಾರ್ಯಗತಗೊಳಿಸಿದ ಗುತ್ತಿಗೆ ಕರಾರುಗಳನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...