HomeUncategorizedದ್ವೇಷ ಭಾಷಣಗಳ ಮೇಲೆ FIR ಪ್ರಕರಣವನ್ನು ಶುಕ್ರವಾರ ಆಲಿಸಿ: ಹೈಕೋರ್ಟ್‌ಗೆ ಸುಪ್ರೀಂ ತಾಕೀತು..

ದ್ವೇಷ ಭಾಷಣಗಳ ಮೇಲೆ FIR ಪ್ರಕರಣವನ್ನು ಶುಕ್ರವಾರ ಆಲಿಸಿ: ಹೈಕೋರ್ಟ್‌ಗೆ ಸುಪ್ರೀಂ ತಾಕೀತು..

- Advertisement -
- Advertisement -

ದ್ವೇಷ ಭಾಷಣಗಳ ಮೇಲೆ FIR ದಾಖಲಿಸಬೇಕೆಂಬ ಪ್ರಕರಣವನ್ನು ತಿಂಗಳಾನುಗಟ್ಟಲೇ ಮುಂದೂಡುವುದು ಸರಿಯಲ್ಲ. ಈ ಶುಕ್ರವಾರ ಆಲಿಸುವಂತೆ ದೆಹಲಿ ಹೈಕೋರ್ಟ್‌‌ಗೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ.

ದೆಹಲಿಯ 10 ಗಲಭೆ ಸಂತ್ರಸ್ತರು ಮತ್ತು ಸಾಮಾಜಿಕ ಕಾರ್ಯಕರ್ತ ಹರ್ಷ್ ಮಂದರ್ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಾ ಈ ಆದೇಶ ಹೊರಡಿಸಿದೆ.

ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಮತ್ತು ಕಪಿಲ್‌ ಮಿಶ್ರಾ ಸೇರಿದಂತೆ ನಾಲ್ಕು ಜನರು ದೆಹಲಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ನ್ಯಾ.ಎಸ್‌ ಮುರಳೀಧರ್‌ FIR ದಾಖಲಿಸಲು ಸೂಚಿಸಿದ್ದರು. ಆದರೆ ಅವರ ವರ್ಗಾವಣೆಯ ನಂತರ ದೆಹಲಿ ಹೈಕೋರ್ಟ್ ತನ್ನ ವಿಚಾರಣೆಯನ್ನು ನಾಲ್ಕು ವಾರಗಳವರೆಗೆ ಮುಂದೂಡಿ, ಉತ್ತರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಈ ಕ್ರಮ ನ್ಯಾಯಸಮ್ಮತವಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಅಸಮಾಧಾನ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಅವರು ತಮ್ಮ ತೀರ್ಪಿನಲ್ಲಿ, ನಿಗದಿತ ವಿಚಾರಣೆಯ ದಿನಾಂಕವನ್ನು ಮುಂಗಡ ತಂದು ಶುಕ್ರವಾರದಂದು ವಿಚಾರಣೆ ನಡೆಸಿ ಎಫ್‌ಐಆರ್‌ಗಳ ಕೋರಿಕೆಗಳನ್ನು ಸಾಧ್ಯವಾದಷ್ಟು ಬೇಗ ತೀರ್ಮಾನಿಸುವಂತೆ ಹೈಕೋರ್ಟ್‌ಗೆ ತಿಳಿಸಿದರು.

ದ್ವೇಷ ಭಾಷಣಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಬೇಕೆಂದು ಕೋರಿರುವ ಅರ್ಜಿಗೆ ಸ್ಪಂದಿಸಲು ಹೈಕೋರ್ಟ್ ಫೆಬ್ರವರಿ 29 ರಂದು ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿತ್ತು.

ಈ ಸಮಯದಲ್ಲಿ ಪ್ರಕರಣಗಳನ್ನು ದಾಖಲಿಸಲು ವಾತಾವರಣವು ಅನುಕೂಲಕರವಾಗಿಲ್ಲ ಎಂದು ಸಾಲಿಸಿಟರ್ ಜನರಲ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯವು ಅನುಮತಿ ನೀಡಿತ್ತು.

ಸುಪ್ರೀಂ ಕೋರ್ಟ್ ಅರ್ಜಿಯನ್ನು ಆಲಿಸುತ್ತಿರುವಾಗಲೂ ಸಹ ಮೆಹ್ತಾ ಬುಧವಾರ ಇದೇ ರೀತಿಯ ಕಾಳಜಿಯನ್ನು ಪ್ರತಿಧ್ವನಿಸಿದರು. ಆದರೆ ಸುಪ್ರೀಂ ಕೋರ್ಟ್ ಅದನ್ನು ಒಪ್ಪಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...