ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿ ಬರುವ ಅಂಗಡಿಗಳ ಮಾಲೀಕರು ತಮ್ಮ ಹೆಸರು ಮತ್ತು ವಿವರಗಳನ್ನು ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಸರ್ಕಾರ ನೀಡಿದ್ದ ನಿರ್ದೇಶನ ಪ್ರಶ್ನಿಸಿ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್ ವಿ ಎನ್ ಭಟ್ಟಿ ಅವರಿರುವ ಪೀಠ ಇಂದು( ಜು.22) ಅರ್ಜಿ ವಿಚಾರಣೆ ನಡೆಸಲಿದೆ.
ಕನ್ವರ್ ಯಾತ್ರೆಯ ಮಾರ್ಗದಲ್ಲಿ ಬರುವ ಆಹಾರ ಮತ್ತು ಪಾನೀಯ ಅಂಗಡಿಗಳು ತಮ್ಮ ಸಂಸ್ಥೆಗಳ ನಿರ್ವಾಹಕರು/ಮಾಲೀಕರ ಹೆಸರು ಮತ್ತು ಗುರುತನ್ನು ಪ್ರದರ್ಶಿಸುವುದನ್ನು ಉತ್ತರ ಪ್ರದೇಶ ಸರ್ಕಾರ ಜುಲೈ 19 ರಂದು ಕಡ್ಡಾಯಗೊಳಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.
ಆದರೆ, ಈ ಆದೇಶ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಹೊರಡಿಸಲಾಗಿದೆ. ಅಲ್ಲದೆ, ಇದು ಸಮಾಜದೊಳಗೆ ತಾರತಮ್ಯ ಉಂಟುಮಾಡುತ್ತದೆ ಎಂಬ ಟೀಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ನೀಟ್ ಫಲಿತಾಂಶಗಳ ಡೇಟಾ: 700ಕ್ಕಿಂತ ಹೆಚ್ಚು ಅಂಕ ಪಡೆದ ರಾಜಸ್ಥಾನದ 15 ಕೇಂದ್ರಗಳ 2,317 ಅಭ್ಯರ್ಥಿಗಳು


