Homeಚಳವಳಿರೈತರ ಹತ್ಯಾಕಾಂಡ: ಮಾ.11ಕ್ಕೆ ಆರೋಪಿ ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಅರ್ಜಿ ವಿಚಾರಣೆ

ರೈತರ ಹತ್ಯಾಕಾಂಡ: ಮಾ.11ಕ್ಕೆ ಆರೋಪಿ ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಅರ್ಜಿ ವಿಚಾರಣೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ನೀಡಲಾದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಂತ್ರಸ್ತ ರೈತರ ಕುಟುಂಬಗಳು ಸಲ್ಲಿಸಿರುವ ಅರ್ಜಿಯನ್ನು ಮಾರ್ಚ್ 11 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿತೆಗೆದುಕೊಂಡ ಲಖಿಂಪುರ್‌ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

ಈ ಪ್ರಕರಣದ ಹೆಚ್ಚಿನ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್‌ಗೆ ಬರುತ್ತಿದ್ದಾರೆ. ಇದರಿಂದ ಸಾಕ್ಷ್ಯ ಹಾಳೂ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಇದನ್ನು ನಿಲ್ಲಿಸಬೇಕು ಎಂದು ವಕೀಲ ಪ್ರಶಾಂತ್ ಭೂಷಣ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದರಿಂದ ಮಾರ್ಚ್ 11 ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ತಿಳಿಸಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

“ಲಖಿಂಪುರ ಖೇರಿ ಪ್ರಕರಣದ ಇತರ ಆರೋಪಿಗಳು ಈ ಆರೋಪಿಗೆ (ಆಶಿಶ್ ಮಿಶ್ರಾ) ಜಾಮೀನು ಮಂಜೂರು ಮಾಡಿದ ನಂತರ ಜಾಮೀನು ಕೋರುತ್ತಿದ್ದಾರೆ. ಇದು ಸಾಕ್ಷ್ಯವನ್ನು ಹಾಳುಮಾಡುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಪಾಯವಿದೆ. ಸದ್ಯಕ್ಕೆ ಇತರೆ ಆರೋಪಿಗಳ ಜಾಮೀನು ಅರ್ಜಿಯನ್ನು ಪರಿಗಣಿಸದಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಬೇಕು” ಎಂದು ಪ್ರಶಾಂತ್ ಭೂಷಣ್‌ ಕೋರಿದ್ದರು.

“ಮಾರ್ಚ್ 11 ರಂದು ನಾವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೈಕೋರ್ಟ್‌ಗೆ ಮೆಮೊ ಸಲ್ಲಿಸಿ” ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠ ತಿಳಿಸಿದೆ.

ರೈತರ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ ರೈತರ ಕುಟುಂಬ ಸದಸ್ಯರು ಫೆಬ್ರವರಿ 10 ರಂದು ಹೈಕೋರ್ಟ್‌ನ ಜಾಮೀನು ಆದೇಶಕ್ಕೆ ತಡೆಯಾಜ್ಞೆ ಕೋರಿದ್ದಾರೆ. ಈ ತೀರ್ಪು ಕಾನೂನಿನ ದೃಷ್ಟಿಯಲ್ಲಿ ಸಮರ್ಥನೀಯವಲ್ಲ ಎಂದು ಮನವಿ ಮಾಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...