ಜನರನ್ನು ಹೆದರಿಸಿ, ಸಂವಿಧಾನಿಕ ಸಂಸ್ಥೆಗಳನ್ನು ಧ್ವಂಸಗೊಳಿಸಿ ನಂತರ ಶಿವಾಜಿ ಮಹಾರಾಜರ ಮುಂದೆ ತಲೆಬಾಗಿ ಯಾವುದೇ ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿಯ ಪ್ರತಿಮೆಯನ್ನು ರಾಹುಲ್ ಗಾಂಧಿ ಶನಿವಾರ ಅನಾವರಣಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರತಿಮೆಯನ್ನು ಅನಾವರಣಗೊಳಿಸುವ ಮೊದಲು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆಯ ಕುಸಿತದ ಬಗ್ಗೆ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡು, ಬಿಜೆಪಿಯ ಸಿದ್ಧಾಂತ ಸರಿಯಿಲ್ಲ ಎಂದು ಹೇಳಿದ್ದಾರೆ.ಜನರನ್ನು ಹೆದರಿಸಿ
ಇದನ್ನೂಓದಿ: ಪಶ್ಚಿಮ ಬಂಗಾಳ: 10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಜನರನ್ನು ಹೆದರಿಸಿ, ದೇಶದ ಸಂವಿಧಾನಿಕ ಸಂಸ್ಥೆಗಳನ್ನು ಧ್ವಂಸಗೊಳಿಸಿದ ನಂತರ ಶಿವಾಜಿ ಪ್ರತಿಮೆಯ ಮುಂದೆ ನಮಸ್ಕರಿದರೆ ಯಾವುದೇ ಪ್ರಯೋಜನವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಶಿವಾಜಿ ಪ್ರತಿಮೆ ಕುಸಿತಕ್ಕೆ ಕ್ಷಮೆಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಪಕ್ಷ ನಾಯಕ ಗುರಿಯಾಗಿಸಿದರು.
“ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಂದು ಹೆಸರಲ್ಲ ಅಥವಾ ರಾಜನಲ್ಲ. ನಮಗೆ ಅವರು ನಮ್ಮ ಆರಾಧ್ಯ ದೈವ. ಇಂದು ನಾನು ಅವರ ಪಾದಗಳಿಗೆ ತಲೆಬಾಗಿ ನನ್ನ ದೇವರಲ್ಲಿ ಕ್ಷಮೆಯಾಚಿಸುತ್ತೇನೆ” ಎಂದು ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮೋದಿ ಹೇಳಿದ್ದರು. ಆಗಸ್ಟ್ 26 ರಂದು ಬಿದ್ದ 35 ಅಡಿ ಪ್ರತಿಮೆಯನ್ನು 2023 ರ ಡಿಸೆಂಬರ್ 4 ರಂದು ನೌಕಾಪಡೆಯ ದಿನದ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದ್ದರು.
ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು


