Homeಮುಖಪುಟಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯ ಆನೈವಾರಿ ಜಲಪಾತದ ಬಳಿ ಸಿಲುಕಿದ್ದ ಮಹಿಳೆ ಮತ್ತು ಮಗುವನ್ನು ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಿಸುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡಾ ಈ ವಿಡಿಯೊ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಇಬ್ಬರ ಜೀವ ಉಳಿಸಿದವರನ್ನು ಸರ್ಕಾರದ ವತಿಯಿಂದ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯು ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಸ್ಥಳವಾಗಿರುವ ಆನೈವಾರಿ ಜಲಪಾತ ಪ್ರದೇಶವನ್ನು ಕೊರೊನಾ ಲಾಕ್‌ಡೌನ್‌ ನಂತರ ಎರಡು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ತೆರೆಯಲಾಗಿತ್ತು. ಇಲ್ಲಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯು ಆಕಸ್ಮಿಕವಾಗಿ ಅಲ್ಲಿ ಸಿಲುಕಿ ಬಿದ್ದಿದ್ದರು. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ವೀಡಿಯೊದಲ್ಲಿ, ಇನ್ನೊಂದು ಬದಿಯಲ್ಲಿ ಇರುವ ಜನರು, “ಮೇಲೆ ಹತ್ತಬೇಡಿ ಬೀಳಬಹುದು, ಅಲ್ಲೇ ನಿಲ್ಲಿ ಎಂದು” ಕಿರುಚುತ್ತಾರೆ. ಅದಾಗಿಯೂ ಹಗ್ಗವನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಮೊದಲಿಗೆ ಮಗುವನ್ನು, ನಂತರ ಮಹಿಳೆಯನ್ನು ಎಚ್ಚರಿಕೆಯಿಂದ ಮೇಲಕ್ಕೆತ್ತುತ್ತಾರೆ. ತಾಯಿ ಮತ್ತು ಮಗು ಅಪಾಯದಿಂದ ಪಾರಾದ ನಂತರ ರಕ್ಷಣಾ ಕಾರ್ಯದಲ್ಲಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಸಮತೋಲನ ಕಳೆದುಕೊಂಡು ನೀರಿಗೆ ಬೀಳುತ್ತಾರೆ.

ವೈರಲ್‌ ವಿಡಿಯೊ ಈ ಹಂತದಲ್ಲಿ ಕೊನೆಗೊಂಡರೂ, ಆಯಾತಪ್ಪಿ ನೀರಿಗೆ ಬಿದ್ದವರು ನದಿಯನ್ನು ಈಜಿ ಯಾವುದೆ ಅಪಾಯವಿಲ್ಲದೆ ದಡ ತಲುಪಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಗು ಮಾತ್ರವಲ್ಲದೆ ಇನ್ನೂ ಕೆಲವರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯದ ವರದಿಯಾಗಿಲ್ಲ ಎಂದು ಸೇಲಂ ಜಿಲ್ಲಾ ಅರಣ್ಯಾಧಿಕಾರಿ ಕೆ ಗೌತಮ್ ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅನೈವಾರಿ ಜಲಪಾತವು ಗುರುತಿಸಲ್ಪಟ್ಟ ಪರಿಸರ ಪ್ರವಾಸೋದ್ಯಮ ತಾಣವಾಗಿದೆ. ಕಲ್ಲವರಾಯನ ಬೆಟ್ಟಗಳಿಂದ ಬರುವ ಮಳೆ ನೀರು ಇಲ್ಲಿ ಜಲಪಾತವಾಗಿ ಪರಿವರ್ತನೆಯಾಗುತ್ತದೆ. ಇದು ಅತ್ತೂರು ಪ್ರದೇಶವಾಗಿದ್ದು; ಈ ಬೆಟ್ಟದ ಇನ್ನೊಂದು ಬದಿಯಲ್ಲಿರುವ ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾದರೆ, ಅದು ಇಲ್ಲಿನ ಜನರಿಗೆ ತಿಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾಗಿ 20-30 ನಿಮಿಷಗಳಲ್ಲಿ, ಪ್ರವಾಹದ ನೀರು ಈ ಪ್ರದೇಶವನ್ನು ತಲುಪುತ್ತದೆ. ಇದು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ನೀರಿನ ಪ್ರಮಾಣ ಹೆಚ್ಚಿದೆ. ಇದು ತಿಳಿದಿರದ ಜನರು ಆ ಬದಿಯಲ್ಲಿ ಸಿಕ್ಕಿಬಿದ್ದರು. ಇನ್ನೊಂದು ಬದಿಗೆ ಬರಲು ಯಾವುದೇ ದಾರಿ ಇರುವುದಿಲ್ಲ. ಅಲ್ಲಿರುವವರು ಹಗ್ಗವನ್ನು ಬಳಸಿ ಮಾತ್ರ ಇನ್ನೊಂದು ಬದಿಯನ್ನು ತಲುಪಬಹುದು. ನಮ್ಮ ಜನರು ಈಗಾಗಲೇ ಅಂತಹ ಸಂದರ್ಭಗಳ ಬಗ್ಗೆ ತರಬೇತಿ ಪಡೆದಿದ್ದರಿಂದ, ಅವರು ಸಾರ್ವಜನಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು. ನಾವು ತಕ್ಷಣ ಜನರನ್ನು ಖಾಲಿ ಮಾಡಿದ್ದೇವೆ ಮತ್ತು ಪ್ರದೇಶವನ್ನು ಮುಚ್ಚಲು ಆದೇಶಿಸಿದ್ದೇವೆ” ಎಂದು ಕೆ. ಗೌತಮ್ ಹೇಳಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಆನೈವಾರಿ ಜಲಪಾತಗಳು, ವಳುಕ್ಕುಪರೈ ಮತ್ತು ಯೆರ್ಕಾಡ್‌ನ ಮತ್ತೊಂದು ಪ್ರವಾಸೋದ್ಯಮ ಸ್ಥಳವನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಡಿಎಫ್‌ಒ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

“ಘಟನೆಯ ವರದಿ ಇನ್ನೂ ನನಗೆ ತಲುಪಿಲ್ಲ. ಆ ಬಳಿಕವಷ್ಟೇ ರಕ್ಷಿಸಿದವರ ವಿವರ ತಿಳಿಯಲಿದೆ” ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಾಯಿ ಮತ್ತು ಮಗಳನ್ನು ರಕ್ಷಿಸಿದವರ ಧೈರ್ಯದ ಕಾರ್ಯ ಶ್ಲಾಘನೀಯ; ಅವರನ್ನು ಸರ್ಕಾರದಿಂದ ಗುರುತಿಸಿ  ಗೌರವಿಸಲಾಗುವುದು. ತಮ್ಮ ಪ್ರಾಣವನ್ನು ಲೆಕ್ಕಿಸದೆ ಇತರರ ಪ್ರಾಣವನ್ನು ಉಳಿಸುವ ಧೈರ್ಯ ತೋರುವವರಲ್ಲಿ ಮಾನವೀಯತೆ ಬೆಳಗುತ್ತಿದೆ! ದುರಂತದ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ಸಭ್ಯ ಜಗತ್ತು.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...