Homeಕರ್ನಾಟಕಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಇಂದಿನಿಂದ (ಮೇ.5) ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಶುರುವಾಗಲಿದೆ. ಮೂರೂ ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ” ಎಂದರು.

“ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಆಯೋಗ ವರದಿ ನೀಡಿದೆ.”

“ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡುವ ಸಲುವಾಗಿ ದತ್ತಾಂಶ ಸಂಗ್ರಹಿಸಲು ಹೊಸ ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ”

“2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆ” ಎಂದು ಸಿಎಂ ವಿವರಿಸಿದರು.

ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯಗಳಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ಹೇಳಿದರು.

“ಮೊದಲ ಹಂತದಲ್ಲಿ, ಇವತ್ತಿನಿಂದ (5 ಮೇ 2025 ರಿಂದ 17 ಮೇ 2025) ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗುತ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ.”

“ಎರಡನೇ ಹಂತದಲ್ಲಿ, (19 ಮೇ 2025 ರಿಂದ 21 ಮೇ 2025) ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.”

“ಮೂರನೇ ಹಂತದಲ್ಲಿ, (19 ಮೇ 2025 ರಿಂದ 22 ಮೇ 2025) ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡುತ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.
ಎಂದು ಸಿಎಂ ಮಾಹಿತಿ ನೀಡಿದರು.

ಮೊಬೈಲ್ ಆ್ಯಪ್‌ 

ಮೊಬೈಲ್ ಆ್ಯಪ್‌ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆ್ಯಪ್‌ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದು ಸಿಎಂ ಹೇಳಿದರು.

ಸಹಾಯವಾಣಿ ಸಂಖ್ಯೆ


ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಕಲಾ ಶಶಿಧರ್, ವಿಧಾನಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...