Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು ಮತ್ತು ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ದಿನಚರಿಯಲ್ಲಿ ಶುಚಿಗೊಳಿಸುವ ಕೆಲಸಗಳನ್ನು ಸೇರಿಸುವಂತೆ ಶಾಲಾ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಆಡಿಯೊ ಕ್ಲಿಪ್ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ನೋಟಿಸ್ ನೀಡಲಾಗಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಪರಿಶಿಷ್ಟ ಜಾತಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ.

ಸಮಾಜ ಕಲ್ಯಾಣ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಂತ ಬಡ ಹಿನ್ನೆಲೆಯಿಂದ ಬಂದವರು. ಹಾಗಾಗಿ, ಅವರು ಮನೆಯಲ್ಲಿದ್ದಾಗಲೂ ತಮ್ಮನ್ನು ತಾವು ಹೇಗೆ ನೋಡಿಕೊಳ್ಳಬೇಕೆಂದು ಕಲಿಯಬೇಕಾಗಿದೆ ಎಂದು ವರ್ಷಿಣಿ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಅವರು (ವಿದ್ಯಾರ್ಥಿಗಳು) ತಮ್ಮ ಕೊಠಡಿ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಕೊಠಡಿಗಳನ್ನು ಯಾರು ಸ್ವಚ್ಛಗೊಳಿಸುತ್ತಾರೆ? ಒಬ್ಬರು ಕಸ ಗುಡಿಸುವರು ಒಂದು ಸಲ ಸ್ವಚ್ಛ ಮಾಡಿದರೆ, ಇತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಏಕೆ ಸ್ವಚ್ಛ ಮಾಡಬಾರದು? ಅವರು ತಮ್ಮ ಶೌಚಾಲಯಗಳನ್ನು ಏಕೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ? ಅದರಲ್ಲಿ ತಪ್ಪೇನು?” ಎಂದು ವರ್ಷಿಣಿ ಹೇಳಿರುವುದಾಗಿ ಆರೋಪಿಸಲಾಗಿದೆ.

ತನ್ನ ನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸುವ ಪೋಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ವರ್ಷಿಣಿ ಹೇಳಿದ್ದಾರೆ ಎನ್ನಲಾಗಿದೆ.

ವರ್ಷಿಣಿ ಅವರ ಮಾತು ಬೆಳಕಿಗೆ ಬಂದ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಮತ್ತು ಸಂಘದ ಮಾಜಿ ಕಾರ್ಯದರ್ಶಿ ಆರ್.ಎಸ್. ಪ್ರವೀಣ್ ಕುಮಾರ್, ವರ್ಷಿಣಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಈ ಸಂಪೂರ್ಣ ಶಿಕ್ಷಣ ಪ್ರಯೋಗ” ಸೋ ಕಾಲ್ಡ್ ಶ್ರೀಮಂತ ಸಮಾಜ ಎಂದು ಕರೆಯಲ್ಪಡುವವರಿಂದ ಮತ್ತು ಅವರ ಮಕ್ಕಳ ಪ್ರೀತಿಯ ಮನೆ, ಅಂತಾರಾಷ್ಟ್ರೀಯ ಶಾಲೆಗಳಿಂದ ಪ್ರಾರಂಭವಾಗಬೇಕು. ಅಲ್ಲದೆ ಬಡ ಮಕ್ಕಳಿಂದ ಅಲ್ಲ” ಎಂದು ಪ್ರವೀಣ್ ಕುಮಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿದ್ದಾರೆ.

“ದಮನಿತ ಸಮುದಾಯಗಳು/ಕುಟುಂಬಗಳ ಮಕ್ಕಳು ಪ್ರತಿದಿನ ತೊಟ್ಟಿಲಿನಿಂದ ಸಮಾಧಿಯವರೆಗೆ ಪ್ರತಿದಿನ ತಮ್ಮನ್ನು ತಾವು ಸಹಾಯ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದಾರೆ. ಏಕೆಂದರೆ, ಅವರಿಗೆ ತಮ್ಮ ಹೊರೆಯನ್ನು ಬೇರೆಯವರ ಮೇಲೆ ಹೊರಿಸಲು ಇಷ್ಟವಿಲ್ಲ” ಎಂದಿದ್ದಾರೆ.

“ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿ ತಮ್ಮ ಮಕ್ಕಳನ್ನು ಒಂದು ತಿಂಗಳ ಕಾಲ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಇರಿಸಿ, ಮೊದಲು ಅವರಿಂದ ಈ ಸ್ವ-ಸಹಾಯವನ್ನು ಮಾಡಿಸಲಿ. ಬಡವರಿಗೆ ಧರ್ಮೋಪದೇಶ ಮಾಡುವುದು ತುಂಬಾ ಸುಲಭ. ಏಕೆಂದರೆ ಅವರಿಗೆ ಬೇರೆ ಆಯ್ಕೆ ಇಲ್ಲದ ಕಾರಣ ಅವರು ಪ್ರತಿಯಾಗಿ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದು ಕುಮಾರ್ ಹೇಳಿದ್ದಾರೆ.

ಆಡಿಯೋ ಕ್ಲಿಪ್ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ, “ಐಎಎಸ್ ಅಧಿಕಾರಿಯ ಆಘಾತಕಾರಿ ನಡವಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಡವರ ವಿರೋಧಿ ನಡೆ ಕಾಣುತ್ತಿದೆ” ಎಂದಿದ್ದಾರೆ.

“ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿ ಸಮಾಜ ಕಲ್ಯಾಣ ಶಾಲೆಗೆ ಶುಚಿಗೊಳಿಸುವ ಕಾರ್ಯಗಳಿಗಾಗಿ ನಾಲ್ಕು ತಾತ್ಕಾಲಿಕ ಕಾರ್ಮಿಕರನ್ನು ನೇಮಿಸಿಕೊಳ್ಳಲು ತಿಂಗಳಿಗೆ 40,000 ರೂ.ಗಳನ್ನು ನೀಡಲಾಗುತ್ತಿತ್ತು” ಎಂದು ಕವಿತಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. “ಈ ವರ್ಷದ ಮೇ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ” ಎಂದಿದ್ದಾರೆ.

“ರಾಜ್ಯ ಸರ್ಕಾರವು 240 ಶಾಲೆಗಳಲ್ಲಿ ಸಹಾಯಕ ಪಾಲಕರನ್ನು ಹೊಂದುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಾರ್ಡನ್‌ಗಳ ಜವಾಬ್ದಾರಿ ತೆಗೆದುಕೊಳ್ಳಲು ಮತ್ತು ಅಡುಗೆಮನೆಗಳನ್ನು ನಿರ್ವಹಿಸಲು ಒತ್ತಾಯಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಈಗ ಅಧಿಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಅವರ ಹೇಳಿಕೆಯು ತಳ ಸಮುದಾಯಗಳ ವಿದ್ಯಾರ್ಥಿಗಳನ್ನು ಜಾತಿ ಮತ್ತು ವರ್ಗ ಪಕ್ಷಪಾತದಿಂದ ರಕ್ಷಿಸಲು ಗುರುಕುಲಗಳನ್ನು ಸ್ಥಾಪಿಸುವ ಪರಿಕಲ್ಪನೆಗೆ ವಿರುದ್ಧವಾಗಿದೆ. ಈ ನಡವಳಿಕೆಯು ತಾರತಮ್ಯ, ಶೋಷಣೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಘನತೆಯ ಮೂಲ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಕವಿತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಯನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಐಎಎಸ್ ಅಧಿಕಾರಿ ವರ್ಷಿಣಿ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಮತ್ತೊಂದು ಆಡಿಯೋ ಕ್ಲಿಪ್‌ನಲ್ಲಿ, “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನನ್ನ ಮಾತುಗಳನ್ನು ತಿರುಚಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಲೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ ಇಲ್ಲ ಎಂಬ ಆರೋಪಗಳು ಆಧಾರರಹಿತವೆಂದು ಅವರು ಹೇಳಿಕೊಂಡಿದ್ದು, ಮನೆಯಲ್ಲಿ ಪೋಷಕರಿಗೆ ಮಕ್ಕಳು ಸಹಾಯ ಮಾಡುವುದು ‘ಸಾಮಾನ್ಯ ದಿನನಿತ್ಯದ ಚಟುವಟಿಕೆ’. ಅದು ಅವರು ‘ಜಾಗೃತ ವ್ಯಕ್ತಿ’ ಯಾಗಿ ಬೆಳೆಯಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ನೀವು ವಿದೇಶಕ್ಕೆ ಹೋದರೆ ಅಥವಾ ಬೇರೆ ರಾಜ್ಯಕ್ಕೆ ಹೋದರೆ, ನಿಮ್ಮ ದೈನಂದಿನ ಕೆಲಸವನ್ನು ನೀವೇ ಮಾಡಬೇಕು. ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಸ್ನಾನಗೃಹಗಳನ್ನು ತೊಳೆಯುವುದು ಮತ್ತು ಬಟ್ಟೆ ಒಗೆಯುವುದು ಸ್ವತಃ ಮಾಡಬೇಕಾಗಿದೆ. ಜೊತೆಗೆ ಅಧ್ಯಯನದತ್ತ ಗಮನ ಹರಿಸಬೇಕು. ಹಠಾತ್ ರೂಪಾಂತರವು ಸಾಮಾನ್ಯವಾಗಿ ಮಕ್ಕಳಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...