Homeಕರ್ನಾಟಕರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿವರೆಗೂ ಸ್ಕಾಲರ್‌‌ಶಿಪ್‌: ಸಿಎಂ ಬೊಮ್ಮಾಯಿ ಘೋಷಣೆ

ರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿವರೆಗೂ ಸ್ಕಾಲರ್‌‌ಶಿಪ್‌: ಸಿಎಂ ಬೊಮ್ಮಾಯಿ ಘೋಷಣೆ

- Advertisement -
- Advertisement -

ರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿವರೆಗೂ ಸ್ಕಾಲರ್‌‌ಶಿಪ್‌ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಘೋಷಿಸಿದ್ದಾರೆ. ಸೆಪ್ಟೆಂಬರ್‌ 15 ರಂದು ಈ ಯೋಜನೆಗೆ ಚಾಲನೆ ನೀಡುವುದಾಗಿ ಸಿಎಂ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಎಲ್ಲಾ ಜಿಲ್ಲೆಗಳ ತಲಾ ಐದು ವಿದ್ಯಾರ್ಥಿಗಳನ್ನು ಕರೆಸಿ, ಅವರಿಗೆ ಸ್ಕಾಲರ್‌ಶಿಪ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಇದಕ್ಕಾಗಿ ಸುಮಾರು 1 ಸಾವಿರ ಕೋಟಿ ರೂ. ಗಳನ್ನು ತೆಗೆದಿಟ್ಟಿರುವುದಾಗಿ ಅವರು ಹೇಳಿದ್ದಾರೆ.

ಈ ಯೋಜನೆಯಿಂದ ಸುಮಾರು 18 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಅದೇ ರೀತಿ ಬಡವರಿಗೆ ಸಾಮಾಜಿಕ ಭದ್ರತೆ ನೀಡಬೇಕು ಎನ್ನುವ ದೃಷ್ಟಿಯಿಂದ ‘ಸಂಧ್ಯಾ ಸುರಕ್ಷಾ’ ಮಾಸಾಸನವನ್ನು ಹೆಚ್ಚು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ನೋಡಿ➤➤ ಇಂದಿರಾ ಕ್ಯಾಂಟೀನ್‌: ಜನಪರ ಯೋಜನೆಗಳನ್ನು ಜಾರಿ ಮಾಡುವುದು ಮುಖ್ಯವೇ, ಹೆಸರು ಬದಲಾವಣೆ ಮುಖ್ಯವೇ? ಜನಾಭಿಪ್ರಾಯಗಳು ಇಲ್ಲಿವೆ.

ಇದನ್ನೂ ನೋಡಿ➤➤ ತಾಲಿಬಾನರ ಆಡಳಿತದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಸ್ವಾತಂತ್ರ್ಯ….?

ವಿಡಿಯೊ ವೀಕ್ಷಿಸಿ: ರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿವರೆಗೂ ಸ್ಕಾಲರ್‌‌ಶಿಪ್‌: ಸಿಎಂ ಬೊಮ್ಮಾಯಿ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...