Homeಕರ್ನಾಟಕರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

- Advertisement -
- Advertisement -

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್‌‌ ಚುನಾವಣೆಯ ಹಿನ್ನೆಲೆಯಲ್ಲಿ ಜೂನ್ 13 ರಂದು 11 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಕರ್ನಾಟಕ ಸರ್ಕಾರ ರಜೆ ಘೋಷಿಸಿದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಇರಲಿದೆ.

ಮತ ಚಲಾಯಿಸುವುದಕ್ಕಾಗಿ ಸರ್ಕಾರಿ ಅನುದಾನಿತ, ಅನುದಾನರಹಿತ, ಖಾಸಗಿ ಶಾಲಾ-ಕಾಲೇಜುಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು, ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳು, ಸಹಕಾರ ಸಂಘಗಳು ಮತ್ತು ಇತರ ಎಲ್ಲ ಸಂಸ್ಥೆಗಳಿಗೆ ಸೇರಿದ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್ 13 ರಂದು ಒಂದು ದಿನದ ರಜೆ ನೀಡಬೇಕು ಎಂದು ಸರ್ಕಾರ ಸೂಚಿಸಿದೆ.

ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಪೈಕಿ ಮೂರರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ನಾಲ್ಕು ಸ್ಥಾನಗಳಲ್ಲೂ ಜೆಡಿಎಸ್‌‌ ಕಣದಲ್ಲಿದೆ. ವಾಯುವ್ಯ ಪದವೀಧರರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.

ಅರುಣ್ ಶಹಪುರ್, ಕೆ.ಟಿ.ಶ್ರೀಕಂಠೇಗೌಡ ಮತ್ತು ಹನುಮನಾಥ್ ಆರ್ ನಿರಾಣಿ ಅವರ ಅಧಿಕಾರಾವಧಿ ಜುಲೈ 4 ರಂದು ಮುಕ್ತಾಯವಾಗಿದೆ. ಜು.4ಕ್ಕೆ ಬಸವರಾಜ ಹೊರಟ್ಟಿ ಅವರ ಅಧಿಕಾರವಧಿಯೂ ಮುಗಿಯಲಿದ್ದು, ಬಿಜೆಪಿಗೆ ಸೇರ್ಪಡೆಯಾದ ಬಳಿಕ ರಾಜೀನಾಮೆ ನೀಡಿದ್ದಾರೆ. ಮೇಲ್ಮನೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಹೊರಟ್ಟಿ ಅವರು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿ ಗೆಲುವು ಸಾಧಿಸಿ ಗೆಲುವಿನ ಗುರಿ ಹೊಂದಿದ್ದಾರೆ. ಹೊರಟ್ಟಿಯವರು ತಮ್ಮ ನಿಕಟವರ್ತಿ ಜೆಡಿಎಸ್‌ನ ಶ್ರೀಶೈಲ ಜಿ. ಹಾಗೂ ಒಂದು ಕಾಲದ ಬೆಂಬಲಿಗ ಕಾಂಗ್ರೆಸ್‌ನ ಬಸವರಾಜ ಗುರಿಕಾರ ವಿರುದ್ಧ ಸ್ಪರ್ಧಿಸಿದ್ದಾರೆ.

ಕರ್ನಾಟಕ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್ ಶಹಾಪುರ ಎರಡನೇ ಅವಧಿಗೆ ಸ್ಪರ್ಧಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ಕಣಕ್ಕಿಳಿದಿದ್ದಾರೆ.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಕಿರಿಯ ಸಹೋದರ, ಬಿಜೆಪಿ ಅಭ್ಯರ್ಥಿ, ಹಾಲಿ ಎಂಎಲ್‌ಸಿ ಹನುಮಂತ್ ಆರ್ ನಿರಾಣಿ ಅವರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸುಂಕ್ ಅವರನ್ನು ವಾಯವ್ಯ ಪದವೀಧರರ ಕ್ಷೇತ್ರದಲ್ಲಿ ಎದುರಿಸಲಿದ್ದಾರೆ.

ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿರುವ ಜನತಾದಳ (ಜಾತ್ಯತೀತ) ತನ್ನ ಹಾಲಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಬದಲಿಗೆ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್.ಕೆ.ರಾಮು ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಮಧು ಮಾದೇಗೌಡ ಸ್ಪರ್ಧಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆರ್‌ಟಿಐ ಕಾರ್ಯಕರ್ತ ಅಮಿತ್ ಜೇತ್ವಾ ಹತ್ಯೆ ಪ್ರಕರಣ: ಬಿಜೆಪಿಯ ಮಾಜಿ ಸಂಸದ ಸೇರಿ ಎಲ್ಲಾ...

0
ಆರ್‌ಟಿಐ ಕಾರ್ಯಕರ್ತ ಮತ್ತು ಪರಿಸರವಾದಿ ಅಮಿತ್ ಜೇತ್ವಾ ಹತ್ಯೆ ಪ್ರಕರಣದಲ್ಲಿ ಜುನಾಗಡದ ಬಿಜೆಪಿಯ ಮಾಜಿ ಸಂಸದ ದಿನು ಬೋಘಾ ಸೋಲಂಕಿ ಮತ್ತು ಇತರ ಆರು ಜನರನ್ನು ಗುಜರಾತ್ ಹೈಕೋರ್ಟ್‌ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ...