Homeಮುಖಪುಟಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ಶಿಕ್ಷಕ ರುದ್ರ ರಾಣಾ ತನ್ನ ಬೈಕ್‌ನಲ್ಲಿ ಕಪ್ಪು ಹಲಗೆ, ಫಲಕಗಳೊಂದಿಗೆ ಹಳ್ಳಿಗಳಿಗೆ ಪ್ರಯಾಣಿಸಿ, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅಲ್ಲೇ ಪಾಠ ಮಾಡುತ್ತಾರೆ. ಈ ತರಗತಿಗಳಿಗೆ ’ಮೊಹಲ್ಲಾ’ ತರಗತಿಗಳು ಎನ್ನುತ್ತಾರೆ.

- Advertisement -
- Advertisement -

ಕೊರೊನಾ ಸಂಕಷ್ಟದಲ್ಲಿ ಶಾಲೆ-ಕಾಲೇಜುಗಳು ಬಾಗಿಲು ಮುಚ್ಚಿವೆ. ಈ ನಡುವೆ ಆನ್‌ಲೈನ್ ಶಿಕ್ಷಣ ಶುರುವಾಗಿ ಉಳ್ಳವರು ಶಿಕ್ಷಣ ಪಡೆಯುತ್ತಿದ್ದರೆ, ಉಳಿದ ಅದೇಷ್ಟೊ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಡತನ, ಲ್ಯಾಪ್‌ಟಾಪ್‌ಗಳ ಕೊರತೆ, ನೆಟ್‌ವರ್ಕ್ ಇಲ್ಲದೆ ಇರುವುದು, ಹಳ್ಳಿಗಳ ಮಕ್ಕಳಿಗೆ ಇರುವ ಸಮಸ್ಯೆಗಳು ಒಂದೆರಡಲ್ಲ.

ಈ ಎಲ್ಲದರ ನಡುವೆ ಕೆಲ ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಲು ಹಲವು ಕ್ರಮಗಳು, ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಛತ್ತಿಸ್‌ಘಡದ ಕೊರಿಯಾ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ರುದ್ರ ರಾಣಾ ಅವರು ವಿದ್ಯಾರ್ಥಿಗಳಿರುವಲ್ಲೇ ಹೋಗಿ ಪಾಠ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಶಿಕ್ಷಕ ರುದ್ರ ರಾಣಾ ತನ್ನ ಬೈಕ್‌ನಲ್ಲಿ ಕಪ್ಪು ಹಲಗೆ, ಫಲಕಗಳೊಂದಿಗೆ ಹಳ್ಳಿಗಳಿಗೆ ಪ್ರಯಾಣಿಸುತ್ತಾರೆ. ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಅಲ್ಲೇ ಪಾಠ ಮಾಡುತ್ತಾರೆ. ಈ ತರಗತಿಗಳಿಗೆ ’ಮೊಹಲ್ಲಾ’ ತರಗತಿಗಳು ಎನ್ನುತ್ತಾರೆ.

“ನಾನು, ಕಪ್ಪು ಹಲಗೆ, ಪುಸ್ತಕಗಳು ಮತ್ತು ಫಲಕಗಳನ್ನೂ ಸಹ ನನ್ನ ಬಳಿ ಇಟ್ಟುಕೊಂಡಿದ್ದೇನೆ. ಶಾಲೆಯಲ್ಲಿರುವಂತೆಯೇ ನಾನು ಗಂಟೆ ಬಾರಿಸುತ್ತೇನೆ ಮತ್ತು ನಂತರ ವಿದ್ಯಾರ್ಥಿಗಳು ಬರುತ್ತಾರೆ, ನಂತರ  ಪ್ರಾರ್ಥನೆಯನ್ನು ಮಾಡುತ್ತಾರೆ ಮತ್ತು ನಾವು ಪಠ್ಯಕ್ರಮದ ಪ್ರಕಾರ ತರಗತಿ ಪ್ರಾರಂಭಿಸುತ್ತೇವೆ” ಎಂದು ಎಎನ್‌ಐ ಜೊತೆಗೆ ಮಾತನಾಡಿದ್ದಾರೆ.

PC: ANI

“ನಾನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಪ್ರಯಾಣಿಸುತ್ತೇನೆ, ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುತ್ತೇನೆ ಮತ್ತು  ಕೊರೊನಾ ವೈರಸ್ ಮತ್ತು ಅದರ ವಿಷಯಗಳ ಬಗ್ಗೆ ಅವರಿಗೆ ಶಿಕ್ಷಣ ನೀಡುತ್ತೇನೆ. ಸ್ಥಳೀಯರು ಈ ಕ್ರಮವನ್ನು ಮೆಚ್ಚುತ್ತಿದ್ದಾರೆ. ವಿದ್ಯಾರ್ಥಿಗಳು ಸಹ ಮುಂದೆ ಬಂದು ಆಸಕ್ತಿ ತೋರಿಸುತ್ತಿದ್ದಾರೆ” ಎಂದು ರಾಣಾ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಶಿಕ್ಷಕರು ನಮಗೆ ವಿಭಿನ್ನ ವಿಚಾರಗಳನ್ನು ಕಲಿಸುತ್ತಾರೆ. ನಂತರ ನಾವು ಅವುಗಳನ್ನು ನಮ್ಮದೇ ಆದ ರೀತಿಯಲ್ಲಿ ಅಧ್ಯಯನ ಮಾಡುತ್ತೇವೆ. ನಾವು ಶಾಲೆ ಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಸರ್‌ ನಡೆಸುವ ಈ ತರಗತಿಗಳು ನಾವು ಶಾಲೆಯಲ್ಲಿದ್ದಂತೆ ಅನ್ನಿಸುತ್ತದೆ” ಎಂದು ವಿದ್ಯಾರ್ಥಿ ಸೂರಜ್ ಹೇಳಿದ್ದಾರೆ.

PC: ANI

ಕೊರೊನಾದಂತಹ ಸಾಂಕ್ರಾಮಿಕ ರೋಗದ ನಡುವೆಯೂ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗಾಗಿ ಈ ಶಿಕ್ಷಕರ ವಿಭಿನ್ನ ಪ್ರಯತ್ನ ನಿಜಕ್ಕೂ ಪ್ರಶಂಸನೀಯವಾದದ್ದು.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...