Homeಮುಖಪುಟದಲಿತ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಮುಖ್ಯ ಶಿಕ್ಷಕಿ ಬಂಧನ

ದಲಿತ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಮುಖ್ಯ ಶಿಕ್ಷಕಿ ಬಂಧನ

- Advertisement -
- Advertisement -

ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿನಿಯರಲ್ಲಿ ಶೌಚಾಲಯ ಶುಚಿಗೊಳಿಸಿದ ಆರೋಪದಲ್ಲಿ ತಿರುಪ್ಪೂರ್ ಜಿಲ್ಲೆಯ ಧಾರಾಪುರಂ ತಾಲ್ಲೂಕಿನ ಸರ್ಕಾರಿ ಮಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಅಮಾನತು ಮಾಡಲಾಗಿದೆ.

ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ಅರುಂತಥಿಯಾರ್ ಸಮುದಾಯದ ಇಬ್ಬರು ವಿದ್ಯಾರ್ಥಿನಿಯರಲ್ಲಿ ಮುಖ್ಯೋಪಾಧ್ಯಾಯಿನಿ ಇಳಮತಿ ಈಶ್ವರಿ ಅವರು ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಹೇಳಿದ್ದರು. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ಅಂಬೇಡ್ಕರ್ ಪಡಿಪ್ಪಗಂ(ಗ್ರಂಥಾಲಯ)ದ ಪಾಲಕರೊಬ್ಬರು ರೆಕಾರ್ಡ್ ಮಾಡಿದ್ದಾರೆ ಎಂದು ಹೇಳಲಾದ ವೀಡಿಯೊದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಮುಖ್ಯ ಶಿಕ್ಷಕಿ ಇಳಮತಿ ಈಶ್ವರಿ ಇದೇ ತಿಂಗಳು ನಿವೃತ್ತಿಯಾಗಲಿದ್ದರು, ಅವರು ಕೂಡ ಪರಿಶಿಷ್ಟ ಜಾತಿಗೆ ಸೇರಿದ ಪೆರಿಯಾರ್ ಸಮುದಾಯಕ್ಕೆ ಸೇರಿದವರಾಗಿದ್ದರು. ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ ಶಿಕ್ಷಕಿ, ಬಾಹ್ಯ ವ್ಯಕ್ತಿಗಳು ತನ್ನ ವಿರುದ್ಧ ಆರೋಪ ಮಾಡಲು ಇಬ್ಬರು ಬಾಲಕಿಯರನ್ನು ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕಿ ಇಳಮತಿ ಈಶ್ವರಿ ಅವರನ್ನು ಅಮಾನತುಗೊಳಿಸಿದೆ. ಆದರೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಾಲೆಯ ಇತರ ಸಿಬ್ಬಂದಿಗಳು ಮುಖ್ಯೋಪಾಧ್ಯಾಯಿನಿಯ ಪರ ನಿಂತಿದ್ದಾರೆ ಎಂದು ಅಧಿಕಾರಿಗಳು ವಿಚಾರಣೆಯ ವೇಳೆ ತಿಳಿದುಕೊಂಡಿದ್ದಾರೆ. ಮುಖ್ಯೋಪಾಧ್ಯಾಯಿನಿಯನ್ನು ಗುರಿಯಾಗಿಸುವ ಪ್ರಯತ್ನದ ಭಾಗವಾಗಿ ಆರೋಪವನ್ನು ಮಾಡಲಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ಮತ್ತು ಇತರ ಸಿಬ್ಬಂದಿಗಳು ಹೇಳಿದ್ದಾರೆ.

ಕರ್ನಾಟಕದಲ್ಲಿ ಈ ಮೊದಲು ವಿದ್ಯಾರ್ಥಿಗಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವ ಘಟನೆ ಭಾರೀ ಸದ್ದು ಮಾಡಿದ್ದವು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಕುರಿತು ಪೋಟೋಗಳು ವೈರಲ್ ಆಗಿದ್ದವು.  ಇದರ ಬೆನ್ನಲ್ಲಿ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಮಾಡಿಸಿದ ಪ್ರಕರಣ ನಡೆದಿತ್ತು. ಇದಾದ ಬಳಿಕ ರಾಜ್ಯ ಸರಕಾರ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.

ಇದನ್ನು ಓದಿ: ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...