Homeಕರೋನಾ ತಲ್ಲಣಜನವರಿ 1 ರಿಂದ ಶಾಲೆ ಆರಂಭ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ

ಜನವರಿ 1 ರಿಂದ ಶಾಲೆ ಆರಂಭ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ

2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ತೀರ್ಮಾನ"

- Advertisement -
- Advertisement -

ಕೊರೊನಾ ಕಾರಣದಿಂದ ಸುಮಾರು 9 ತಿಂಗಳಿನಿಂದ ಮುಚ್ಚಿದ್ದ ಶಾಲೆಗಳನ್ನು 2021ರ ಜನವರಿ 1 ರಿಂದ ತೆರೆಯಲು ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, 6 ನೇ ತರಗತಿಯಿಂದ ಪಿಯುಸಿಯವರೆಗೆ ತೆರೆಯಲು ಸೂಚನೆ ನೀಡಲಾಗಿದೆ.

ಈ ಕುರಿತು ಮುಖ್ಯಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದ “2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

“ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ” ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ.

ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.


ಇದನ್ನೂ ಓದಿ: ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...