Homeಮುಖಪುಟಮೋದಿ ರೋಡ್‌ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆ: ಕೇಸರಿ ಬಟ್ಟೆ ಧರಿಸಿ ಶಾಲಾ ಮಕ್ಕಳು ಭಾಗಿ

ಮೋದಿ ರೋಡ್‌ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆ: ಕೇಸರಿ ಬಟ್ಟೆ ಧರಿಸಿ ಶಾಲಾ ಮಕ್ಕಳು ಭಾಗಿ

- Advertisement -
- Advertisement -

ಕೊಯಮತ್ತೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋನಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದು, ಈ ಕುರಿತು ಕೊಯಮತ್ತೂರು ಜಿಲ್ಲಾ ಶಿಕ್ಷಣಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.

ಮೋದಿ ರೋಡ್‌ಶೋನಲ್ಲಿ ಭಾಗವಹಿಸಲು ಶಾಲಾ ಮಕ್ಕಳನ್ನು ಕರೆತಂದ ಸರ್ಕಾರಿ ಅನುದಾನಿತ ಶಾಲೆಯ ಆಡಳಿತ ಮಂಡಳಿ ವಿರುದ್ಧ ಸಾಯಿಬಾಬಾ ಕಾಲೋನಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೊಯಮತ್ತೂರಿನಲ್ಲಿ ಮೆಟ್ಟುಪಾಳ್ಯಂ ರಸ್ತೆಯಲ್ಲಿರುವ ಗಂಗಾ ಆಸ್ಪತ್ರೆ ಮತ್ತು ಆರ್ ಎಸ್ ಪುರಂನಲ್ಲಿರುವ ಹೆಡ್ ಪೋಸ್ಟ್ ಆಫೀಸ್ ನಡುವೆ ಮೋದಿ ನಾಲ್ಕು ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ರೋಡ್ ಶೋ ನಡೆಸಿದ್ದರು. ಕಾರ್ಯಕ್ರಮದಲ್ಲಿ ಸರ್ಕಾರಿ ಅನುದಾನಿತ ಶ್ರೀ ಸಾಯಿಬಾಬಾ ವಿದ್ಯಾಲಯ ಅನುದಾನಿತ ಮಾಧ್ಯಮಿಕ ಶಾಲೆಯ 14 ವರ್ಷದೊಳಗಿನ ಮಕ್ಕಳು ಪಕ್ಷದ ಚಿಹ್ನೆಗಳನ್ನು ಹೊಂದಿರುವ ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸಿ ಭಾಗವಹಿಸಿರುವುದು ಮತ್ತು ರೋಡ್‌ಶೋ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಏರ್ಪಡಿಸಿದ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿರುವುದು ಕಂಡು ಬಂದಿದೆ.

ರಾಜಕೀಯ ರ್ಯಾಲಿಗಳಲ್ಲಿ ಮಕ್ಕಳು ಭಾಗವಹಿಸುವುದು ಭಾರತದ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ. ಆದ್ದರಿಂದ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ಘಟನೆಯ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ಅಧಿಕಾರಿಗಳು ಶಾಲಾ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತರು ಮತ್ತು ಮುಖ್ಯ ಶಿಕ್ಷಣಾಧಿಕಾರಿಗಳಿಂದಲೂ ಪ್ರತ್ಯೇಕ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ನಾವು ಈ ವಿಚಾರವನ್ನು ತಿಳಿದಿದ್ದೇವೆ ಮತ್ತು ಇಲಾಖೆಗಳಿಂದ ವರದಿಗಳನ್ನು ಕೇಳಲಾಗಿದೆ. ಈ ಕುರಿತ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಯಮತ್ತೂರು ಜಿಲ್ಲಾಧಿಕಾರಿ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮುಖ್ಯ ಶಿಕ್ಷಣಾಧಿಕಾರಿ ಎಂ.ಬಾಲಮುರಳಿ ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಕಾರ್ಯಕ್ರಮಕ್ಕೆ ಮೊದಲೇ ಚುನಾವಣಾ ಕಾರ್ಯಕ್ರಮಗಳಿಂದ ದೂರವಿರಲು ಎಲ್ಲಾ ಶಾಲೆಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿತ್ತು ಎಂದು ಹೇಳಿದ್ದಾರೆ. ಸಹಾಯಕ ಚುನಾವಣಾಧಿಕಾರಿ ಪಿ.ಸುರೇಶ್ ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ್ದು, ಪ್ರಕರಣದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವುದು ಖಚಿತವಾಗಿದೆ. ವಿಚಾರಣೆ ಮುಗಿದ ನಂತರ ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ವರದಿ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಲು ಶಾಲಾ ಮುಖ್ಯೋಪಾಧ್ಯಾಯರು ಲಭ್ಯರಿಲ್ಲದೆ ಇದ್ದರೂ ರೋಡ್‌ ಶೋನಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಪ್ರಕಾರ ಅವರಿಗೆ ಕಾರ್ಯಕ್ರಮದ ಎರಡು ಗಂಟೆ ಮುಂಚಿತವಾಗಿ ಸಾಯಿ ಬಾಬಾ ಕಾಲನಿ ಜಂಕ್ಷನ್‌ನಲ್ಲಿರುವಂತೆ ಶಾಲಾಡಳಿತ ಸೂಚಿಸಿತ್ತು.

ಇದನ್ನು ಓದಿ: ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...