Homeಮುಖಪುಟಕಾಲೇಜುಗಳಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮೋದಿಯ ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ!

ಕಾಲೇಜುಗಳಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮೋದಿಯ ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸುತ್ತೋಲೆ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ ಗೋವಾದ ಮಾರ್ಗೋವಾ ಪ್ರದೇಶದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ಕೂಡ ಅರ್ಧ ದಿನ ರಜೆ ಘೋಷಿಸಲಾಗಿದ್ದು, ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಲು ಕಾಲೇಜುಗಳಿಗೆ ಸೂಚಿಸಿರುವ ಬಗ್ಗೆ ವರದಿಯಾಗಿದೆ.

ದಕ್ಷಿಣ ಗೋವಾದ ಮಾರ್ಗೋವಾ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಮಂಗಳವಾರ  ಮಧ್ಯಾಹ್ನದ ವೇಳೆಗೆ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಗೋವಾ ಸರ್ಕಾರ ಘೋಷಿಸಿದೆ. ಕಳೆದ ವಾರ  ಮಾರ್ಗೋವ್‌ನ ಎಲ್ಲಾ ಶಾಲೆಗಳನ್ನು ಮುಚ್ಚಲಾಗುವುದು ಎಂದು ಘೋಷಿಸಲಾಗಿತ್ತು.

ದಿನಾಂಕ 06/02/2024ರಂದು ಭಾರತದ ಪ್ರಧಾನ ಮಂತ್ರಿಗಳ ಭೇಟಿಯನ್ನು ಗಮನದಲ್ಲಿಟ್ಟುಕೊಂಡು, ಮಾರ್ಗಾವೊದಲ್ಲಿನ ಎಲ್ಲಾ ಕಾಲೇಜುಗಳನ್ನು ಮಧ್ಯಾಹ್ನ 12 ಗಂಟೆವರೆಗೆ ಮುಚ್ಚಲಾಗುತ್ತದೆ. ಈ ಸಂಬಂಧವಾಗಿ ಪ್ರಧಾನ ಮಂತ್ರಿಗಳ ಸಭೆಗೆ ಹಾಜರಾಗಲು ಪ್ರಾಂಶುಪಾಲರು ತಮ್ಮ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಮಧ್ಯಾಹ್ನ 1 ಗಂಟೆಯೊಳಗೆ ಮಾರ್ಗೋವ್ ಕೆಟಿಸಿ ಬಸ್ ನಿಲ್ದಾಣಕ್ಕೆ ಕಳುಹಿಸಿಕೊಡಬೇಕು ಎಂದು ಗೋವಾ ಸರಕಾರದ ಉನ್ನತ ಶಿಕ್ಷಣ ನಿರ್ದೇಶನಾಲಯ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.

ಈ ಬಗ್ಗೆ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಈ ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯುವಂತೆ ನಾವು ಉನ್ನತ ಶಿಕ್ಷಣ ನಿರ್ದೇಶನಾಲಯಕ್ಕೆ ಮನವಿ ಮಾಡುತ್ತೇವೆ. ಇದು ಸರಕಾರಿ ಯಂತ್ರದ ದುರ್ಬಳಕೆಯಾಗಿದೆ. ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸರ್ಕಾರ ಹೇಳುತ್ತಿದೆ. ಕೆಲ ವಿದ್ಯಾರ್ಥಿಗಳು ಹಾಜರಾಗಲು ಬಯಸುತ್ತಾರೆ, ಆದರೆ ಅದು ಯಾವುದೇ ಬಲವಂತವಾಗಿರಬಾರದು ಎಂದು NSUIನ ಗೋವಾ ಅಧ್ಯಕ್ಷ ನೌಶಾದ್ ಚೌಧರಿ ಅವರು ಹೇಳಿದ್ದಾರೆ.

ಮಾರ್ಗೋದಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ಭಾಷಣಕ್ಕೆ ಸಿದ್ಧತೆ ವಿಚಾರವು ಈ ಮೊದಲು ವಿವಾದಕ್ಕೆ ಕಾರಣವಾಗಿತ್ತು. ಹಳೆಯ ಮರಗಳನ್ನು ಕಡಿದು ಮೋದಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ದತೆ ಪಡಿಸಲಾಗಿದೆ ಎಂದು ಆರೋಪ ಕೇಳಿ ಬಂದಿತ್ತು.

ರಾಮಮಂದಿರ ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಹಾದಿಯಾಗಿ ಕೇಂದ್ರ ಸರಕಾರ ಮತ್ತು ಇಡೀ ಆಡಳಿತ ಯಂತ್ರ ತೊಡಗಿಸಿಕೊಂಡಿತ್ತು. ಧಾರ್ಮಿಕ ಕಾರ್ಯಕ್ರಮದಲ್ಲಿ ಸರಕಾರಿ ಆಡಳಿತ ತೊಡಗಿಸಿರುವುದು ಸಂವಿಧಾನ ಬಾಹಿರವಾಗಿದೆ. ಈ ಬಗ್ಗೆ ಪ್ರತಿಪಕ್ಷಗಳು ವ್ಯಾಪಕವಾಗಿ ಟೀಕೆಯನ್ನು ವ್ಯಕ್ತಪಡಿಸಿದ್ದರು. ಇದಲ್ಲದೆ ಕೇಂದ್ರ ಸರಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ‘ಇಡಿ’, ‘ಐಟಿ’ ದಾಳಿಯನ್ನು ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದವು. ಇದೀಗ ಪ್ರಧಾನಿ ಕಾರ್ಯಕ್ರಮದ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ಕೂಡ ರಜೆ ಘೋಷಿಸಲಾಗಿದ್ದು, ವ್ಯಾಪಕವಾದ ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...