ಕೊರೊನಾ ಕಾರಣದಿಂದ ಮುಚ್ಚಲಾಗಿರುವ ದೆಹಲಿ ಶಾಲೆಗಳಲ್ಲಿ ಈಗಲೇ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸುವ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕೋವಿಡ್ ಸೋಂಕಿನ ಮೂರನೇ ಅಲೆ ಈಗಾಗಲೇ ಸನಿಹದಲ್ಲಿದ್ದು, ಸರ್ಕಾರವು ಮಕ್ಕಳ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ನಡೆದ ಸಂವಾದಲ್ಲಿ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುತ್ತಿದ್ದು, ದೆಹಲಿಯಲ್ಲಿಯೂ ಸರ್ಕಾರವು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಯೋಜಿಸುತ್ತಿದೆಯೇ ಎಂದು ಕೇಳಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್  ಪ್ರತಿಕ್ರಿಯಿಸಿದ್ದಾರೆ.

“ಅಂತರರಾಷ್ಟ್ರೀಯ ವರದಿಗಳ ಪ್ರಕಾರ, ಕೋವಿಡ್ ಮೂರನೇ ಅಲೆ ಈಗಾಗಲೇ ಬಂದಿದೆ. ಆದ್ದರಿಂದ ಇಡೀ ದೇಶದ ಜನರಿಗೆ ಲಸಿಕೆ ನೀಡುವವರೆಗೂ ನಾವು ಮಕ್ಕಳನ್ನು ಅಪಾಯಕ್ಕೆ ಸಿಲುಕಿಸುವುದಿಲ್ಲ” ಎಂದು ಮುಖ್ಯಮಂತ್ರಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

ಕಳೆದ ಎರಡು ವಾರಗಳಿಂದ ದೆಹಲಿಯಲ್ಲಿ ದೈನಂದಿನ ಕೋವಿಡ್ ಪ್ರಕರಣಗಳು 100 ಕ್ಕಿಂತಲೂ ಕಡಿಮೆ ವರದಿಯಾಗುತ್ತಿವೆ. ಇದರಿಂದ ಎರಡನೇ ಹಂತದಲ್ಲಿ ಜಾರಿಗೆ ತಂದಿರುವ ಕೊರೊನಾ ನಿರ್ಬಂಧಗಳಿಗೆ ವಿನಾಯಿತಿ ನೀಡುವಂತೆ ಸರ್ಕಾರವನ್ನು ಪ್ರೇರೇಪಿಸಿದೆ.

ಗುರುವಾರ ಹೊರಡಿಸಲಾದ ರಾಜ್ಯ ಆರೋಗ್ಯ ಬುಲೆಟಿನ್ ಪ್ರಕಾರ, ದೆಹಲಿಯಲ್ಲಿ 72 ಹೊಸ ಕೋವಿಡ್ ಪ್ರಕರಣಗಳು, ಒಂದು ಸಾವು ಮತ್ತು ಕಳೆದ 24 ಗಂಟೆಗಳ ಅವಧಿಯಲ್ಲಿ ಶೇಕಡಾ 0.10 ರಷ್ಟು ಪಾಸಿಟಿವ್ ಪ್ರಮಾಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 671 ರಷ್ಟಿದೆ. ದೆಹಲಿಯಲ್ಲಿ ಈವರೆಗೆ 91 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಕೊರೊನಾ ಪ್ರಕರಣಗಳಲ್ಲಿನ ಇಳಿಕೆ ನಂತರ, ಹಲವಾರು ರಾಜ್ಯಗಳು ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ನಿರ್ಧರಿಸಿವೆ. ಜುಲೈ 16 ರಿಂದ 9 ರಿಂದ 12 ತರಗತಿಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಬಹುದು ಎಂದು ಹರಿಯಾಣ ರಾಜ್ಯ ಘೋಷಿಸಿದೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ ತನ್ನ ಪತ್ರಿಕಾ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here