Homeಕರ್ನಾಟಕಕುಡುಬಿ ಬುಡಕಟ್ಟಿನ ಬಡ ಕೂಲಿಕಾರರ ಹೆಣ್ಣು ಮಕ್ಕಳಿಗೆ ವಿಜ್ಞಾನ ರಾಷ್ಟ್ರ ಪ್ರಶಸ್ತಿ

ಕುಡುಬಿ ಬುಡಕಟ್ಟಿನ ಬಡ ಕೂಲಿಕಾರರ ಹೆಣ್ಣು ಮಕ್ಕಳಿಗೆ ವಿಜ್ಞಾನ ರಾಷ್ಟ್ರ ಪ್ರಶಸ್ತಿ

- Advertisement -
- Advertisement -

ಕುಂದಾಪುರದ ಅಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಇಬ್ಬರು ಹೆಣ್ಣು ಮಕ್ಕಳು ರಾಷ್ಟ್ರ ಮಟ್ಟದ ವಿಜ್ಞಾನ ಪ್ರಶಸ್ತಿ ಪಡೆದು ಅಸಾಧಾರಾಣ ಪ್ರತಿಭಾವಂತರೆಂಬ ಪ್ರಶಂಸಗೆ ಪಾತ್ರರಾಗಿದ್ದಾರೆ!

10ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಿತಾ ನಾಯ್ಕ್ ಮತ್ತು ಅನುಷಾ ನಾಯ್ಕ್ ರವರಿಗೆ ರಾಷ್ಟ್ರ ಮಟ್ಟದಲ್ಲಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ನಡೆಸುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೌನ್ಸಿಲ್ [ಸಿಎಸ್‌ಐಆರ್] ರಾಷ್ಟ್ರೀಯ ನೂತನ ವಿಜ್ಞಾನ ಆವಿಷ್ಕಾರ ಸ್ಪರ್ಧೆಯ-ಅನ್ವೇ಼ಷಣಾ ಪ್ರಶಸ್ತಿ 2021 ಸಿಕ್ಕಿದೆ.

ಈ ಹುಡುಗಿಯರು ಸಂಶೋಧಿಸಿದ ಹೊಸ ವಿಜ್ಞಾನ ಆವಿಷ್ಕಾರ- ಗ್ಯಾಸ್ ಉಳಿತಾಯದ ಕಿಟ್ [ಜಿಎಸ್‌ಕೆ]ಗೆ ದೇಶದಲ್ಲಿ ನಾಲ್ಕನೇ ಸ್ಥಾನ ಬಂದಿದೆ. ಅನುಷಾ ಮತ್ತು ರಕ್ಷಿತಾ ಇಬ್ಬರೂ ಕಾಡಲ್ಲಿ ನೆಲೆ ಕಂಡುಕೊಂಡಿರುವ ತೀರಾ ಹಿಂದುಳಿದ ಕುಡುಬಿ ಸಮುದಯದ ಬಾಲಕಿಯರು. ಇವರು ವಾಸಿಸುವ ಹಳ್ಳಿ ಮಡಾಮಕ್ಕಿಯೂ ಹಿಂದುಳಿದ ಗ್ರಾಮೀಣ ಪ್ರದೇಶ. ಪಾಲಕರು ಕೂಲಿ ಕಾರ್ಮಿಕರು.

ಮಡಾಮಕ್ಕಿ ಗ್ರಾಮದ ಮಾರಾಡಿ ಮಾರ್ಕೈನ ಅನುಷಾ ತಂದೆ ಅಣ್ಣಯ್ಯ ನಾಯ್ಕ್, ತಾಯಿ ಪಾರ್ವತಿ ಗಾರೆ ಕೆಲಸ ಮಾಡಿ ಸಂಸಾರ ನಡೆಸಿಕೊಂಡಿದ್ದಾರೆ. ಮಡಾಮಕ್ಕಿಯ ಬಡಾ ಬೆಪ್ಪ ನಿವಾಸಿ ರಕ್ಷಿತಾ ತಂದೆ ರವಿ ನಾಯ್ಕ್- ತಾಯಿ ಜಲಜಾ ಶಾಮಿಯಾನ ಹಾಕುವುದು, ಗಾರೆ ಕೆಲಸಕ್ಕೆ ಹೋಗುತ್ತಾರೆ. ತಳ ಸಮುದಾಯದ ಈ ಮಕ್ಕಳು ರಾಷ್ಟ್ರ ಪ್ರಶಸ್ತಿ ತಂದಿರುವುದು ಪ್ರತಿಭಾವಂತಿಕೆ-ಹೆಮ್ಮೆಯ ಸಂಗತಿಯೆಂದು ಎಲ್ಲೆಡೆಯಿಂದ ಪ್ರಶಂಸೆ ಬರುತ್ತಿದೆ.

ಶಿಕ್ಷಣ ಇಲಾಖೆಯ ಆಯುಕ್ತರು ಅನುಷಾ ಮತ್ತು ರಕ್ಷತಾರಿಗೆ ತಲಾ 10 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ. ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳು ವಿಧ್ಯಾರ್ಥಿನಿಯರ ಮನೆಗೆ ಹೋಗಿ ಗೌರವಿಸಿ, ಪಾಲಕರಿಗೆ ಅಬಿನಂದಿಸಿದ್ದಾರೆ. ವಿದ್ಯಾರ್ಥಿನಿಯರ ಹೈಸ್ಕೂಲಿಗೆ ತೆರಳಿ ಶಿಕ್ಷಕ ಸಮುದಾಯವನ್ನು ಅಭಿನಂದಿಸಿದ್ದಾರೆ.

ಈ ಹಳ್ಳಿಗಾಡಿನ ಬುಡಕಟ್ಟು ಸಮುದಾಯದ ಜಾಣ ಹುಡುಗಿಯರು ಪಡೆದ ಪ್ರಶಸ್ತಿ ವಿಶೇಷವೂ ಹೌದು. ಸಿಎಸ್‌ಐಆರ್ ಪ್ರಶಸ್ತಿಗೆ ಆಯ್ಕೆಯಾಗಿರುವ ದೇಶದ ಒಟ್ಟು 14 ಶಾಲೆಗಳ ಸ್ಪರ್ಧಿಗಳಲ್ಲಿ ಸರಕಾರಿ ಶಾಲೆಯಿಂದ ಭಾಗವಹಿಸಿದ್ದ ಮಕ್ಕಳೆಂದರೆ ರಕ್ಷತಾ ಮತ್ತು ಅನುಷಾ ಮಾತ್ರ!

ಸಮಾಜಿಕ-ಶೈಕ್ಷಣಿಕವಾಗಿ ತೀರಾ ಹಿಂದುಳಿದ ಸಮುದಾಯ ಹೆಣ್ಣು ಮಕ್ಕಳು ವಿಜ್ಞಾನದಲ್ಲಿ ರಾಷ್ಟ್ರ ಪ್ರಶಸ್ತಿ ತಂದಿರುವುದು ಕರಾವಳಿಯ ಶೈಕ್ಷಣಿಕ ವಲಯದಲ್ಲಿ ಸಂಚಲನ ಮೂಡಿಸಿದೆ. ಅವರಿಗೆ ಅಭಿನಂದನೆಗಳು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...