Homeಮುಖಪುಟದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ  SC/ST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಹೈಕೋರ್ಟ್

ದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ  SC/ST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಹೈಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ SC/ST ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗಲಿದೆ. ಅದು ಯಾವುದೇ ರಾಜ್ಯ ಅಥವಾ  ಕೇಂದ್ರಾಡಳಿತ ಪ್ರದೇಶಕ್ಕೆ ಸೀಮಿತವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ವ್ಯಾಪ್ತಿಯು ಸೀಮಿತವಾಗಿಲ್ಲ. ನಿರ್ದಿಷ್ಟ ರಾಜ್ಯದಲ್ಲಿ  ಮಾತ್ರ  ಆ ಸಮುದಾಯದ ವ್ಯಕ್ತಿಗೆ ಅನ್ವಯಿಸುವುದಲ್ಲ, ದೇಶದಾದ್ಯಂತ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗಲಿದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ, ಭಾರತಿ ಡಾಂಗ್ರೆ ಮತ್ತು ಎನ್‌ಜೆ ಜಮಾದಾರ್ ಅವರ ತ್ರಿಸದಸ್ಯ ಪೀಠವು ತಮ್ಮ ತೀರ್ಪಿನಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಒಂದು ಸಮುದಾಯದ ಜನರಿಗೆ ಆಗುವ ಅವಮಾನ ಮತ್ತು ಕಿರುಕುಳವನ್ನು ತಡೆಯುವ ಉದ್ದೇಶವನ್ನು ಹೊಂದಿದ್ದು, ಆ ಸಮುದಾಯಕ್ಕೆ ಮೂಲಭೂತ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಹಕ್ಕುಗಳ ಭರವಸೆ ನೀಡುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.

ದೇಶದ ಯಾವುದೇ ಭಾಗದಲ್ಲಿ ಪರಿಶಿಷ್ಟ ವ್ಯಕ್ತಿ ಮೇಲೆ ದೌರ್ಜನ್ಯ ನಡೆದಿರಲಿ, ಕೃತ್ಯ ನಡೆದ ರಾಜ್ಯದಲ್ಲಿ ಆತನನ್ನು ಎಸ್‌ಸಿ ಅಥವಾ ಎಸ್‌ಟಿ ಎಂದು ಪರಿಗಣಿಸದಿದ್ದರೂ ಈ ಕಾಯ್ದೆಯಡಿ ಆ ವ್ಯಕ್ತಿಗೆ ರಕ್ಷಣೆ ನೀಡಬೇಕು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಒಬ್ಬ ವ್ಯಕ್ತಿಗೆ ಜಾತಿ ಅಥವಾ ಗುಂಪಿಗೆ ಸೇರಿದ ಇಬ್ಬರಿಗೆ ಜನಿಸಿರುವುದರಿಂದ ಜಾತಿ ತಾನಾಗಿಯೇ ಆತನಿಗೆ ಅಂಟಿಕೊಳ್ಳುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ.

ಒಬ್ಬ ವ್ಯಕ್ತಿಯು ತನ್ನ ಹುಟ್ಟಿದ ಜಾತಿಯನ್ನು  ತೊಡೆದುಹಾಕಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದಲ್ಲಿ ಜನಿಸಿದ ವ್ಯಕ್ತಿಗೆ ಅಂಟಿಕೊಂಡಿರುವ ಹಣೆಪಟ್ಟಿ ತನ್ನ ವೈಯಕ್ತಿಕ ಉನ್ನತಿ, ಸಾಮಾಜಿಕ ಉನ್ನತಿ ಏನೇ ಇರಲಿ, ಆದರೆ ಜಾತಿ ಹಣೆಪಟ್ಟಿ ಕಳಚಿಕೊಳ್ಳಲು ವ್ಯಕ್ತಿಗೆ ಸಾಧ್ಯವಾಗುವುದಿಲ್ಲ. ಇದು ವಿಚಿತ್ರವಾದುದು ಎಂದು ಕೋರ್ಟ್ ತೀರ್ಪಿನ ವೇಳೆ ಹೇಳಿದೆ.

ಇದನ್ನು ಓದಿ: ‘ಚೀನಾ’ ಎಂಬ ಪದದ ಉಚ್ಚಾರಣೆಗೂ ಪ್ರಧಾನಿ ಭಯಪಡುತ್ತಿದ್ದಾರೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...