Homeಮುಖಪುಟನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

ನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

- Advertisement -
- Advertisement -

ಸ್ವದೇಶಿ ನಿರ್ಮಿತ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯಾದ ‘ಐಎನ್‌ಎಸ್ ಕಾರಂಜ್’ ಅನ್ನು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿದೆ. ಮುಂಬೈನ ಮಜಾಗನ್ ಶಿಪ್‌ಯಾರ್ಡ್‌ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ವಿ.ಎಸ್. ಶೇಖಾವತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಏಳು ದಶಕಗಳಿಂದ ನೌಕಾಪಡೆಯು ಸ್ವದೇಶಿಕರಣ ಮತ್ತು ರಕ್ಷಣಾ ಸ್ವಾವಲಂಬನೆಗೆ ಬದ್ಧವಾಗಿದೆ ಎಂದು ಮುಖ್ಯ ಅಡ್ಮಿರಲ್ ಕರಂಬೀರ್ ಸಿಂಗ್ ಹೇಳಿದ್ದಾರೆ. ಪ್ರಸ್ತುತ, 42 ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳಿವೆ ಮತ್ತು ಅವುಗಳಲ್ಲಿ 40 ದೇಶಾದ್ಯಂತ ಹಡಗುಕಟ್ಟೆಗಳಲ್ಲಿ ನಿರ್ಮಾಣ ಹಂತದಲ್ಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೀಟು ಹಂಚಿಕೆಯಲ್ಲಿ ಭಿನ್ನಮತ: AIADMK-BJP ಮೈತ್ರಿ ತೊರೆದ ವಿಜಯಕಾಂತ್‌ರ DMDK

ಫ್ರೆಂಚ್ ಕಂಪನಿ ಡಿಸಿಎನ್‌ಎಸ್‌ನೊಂದಿಗಿನ 2005 ರ ಒಪ್ಪಂದದಡಿಯಲ್ಲಿ ನಿರ್ಮಿಸಲಾಗುವ ಆರು ಕ್ಯಾಲ್ವರಿ ವರ್ಗದ ಜಲಾಂತರ್ಗಾಮಿ ನೌಕೆಗಳಲ್ಲಿ ಐಎನ್‌ಎಸ್ ಕಾರಂಜ್ ಮೂರನೆಯದಾಗಿದೆ. ಸಮುದ್ರದಲ್ಲಿ ಜಲಾಂತರ್ಗಾಮಿ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.

ಸಮುದ್ರ ಮತ್ತು ಒಳನಾಡಿನ ಮೇಲೆ ಒಂದೇ ರೀತಿಯಲ್ಲಿ ಆಕ್ರಮಣ ಮಾಡಬಹುದು ಎಂಬುದಾಗಿದೆ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯ ವೈಶಿಷ್ಟ್ಯ. ಇದಲ್ಲದೆ, ಇದು ಇತರ ಜಲಾಂತರ್ಗಾಮಿ ನೌಕೆಗಳನ್ನು ನಾಶಪಡಿಸಲು ಮತ್ತು ಸ್ಪೋಟಕಗಳನ್ನು ಬಳಸಿ ದಾಳಿ ಕೂಡಾ ಮಾಡುತ್ತದೆ. 220 ಅಡಿ ಉದ್ದ ಮತ್ತು 40 ಅಡಿ ಎತ್ತರವಿರುವ ಈ ಜಲಾಂತರ್ಗಾಮಿಯು ಸಮುದ್ರದ ಮೇಲಿನಿಂದ 11 ನಾಟಿಕಲ್ ಮೈಲಿ ಮತ್ತು ಸಮುದ್ರದೊಳಗಿನಿಂದ 20 ನಾಟಿಕಲ್ ಮೈಲುಗಳಷ್ಟು ವೇಗದಲ್ಲಿ ಪ್ರಯಾಣಿಸುತ್ತದೆ.

ಇದನ್ನು ಡಿಸೆಂಬರ್ 2017 ರಲ್ಲಿ ಐಎನ್ಎಸ್ ಕ್ಯಾಲ್ವರಿ ಮತ್ತು ಸೆಪ್ಟೆಂಬರ್ 2019 ರಲ್ಲಿ ಐಎನ್ಎಸ್ ಖಂಡೇರಿ ನಿಯೋಜಿಸಲಾಗಿತ್ತು. ನಾಲ್ಕು ಮತ್ತು ಐದನೇ ಜಲಾಂತರ್ಗಾಮಿ ನೌಕೆಗಳಾದ ಐಎನ್‌ಎಸ್ ವೆಲಾ ಮತ್ತು ಐಎನ್‌ಎಸ್ ವ್ಯಾಗ್ಮೀರ್ ಸಮುದ್ರದಲ್ಲಿ ಪರೀಕ್ಷೆಯಲ್ಲಿದ್ದು ಹಾಗೂ ಆರನೆಯ ಐಎನ್‌ಎಸ್ ವಾಗ್‌ಶೀರ್ ನಿರ್ಮಾಣ ಹಂತದಲ್ಲಿದೆ.

ಇದನ್ನೂ ಓದಿ: ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...