Homeಮುಖಪುಟತುರ್ತು ಪರಿಸ್ಥಿತಿ ಸಮಯದಲ್ಲೂ ’ಸುಪ್ರೀಂ’ ಘನತೆ ಇಷ್ಟು ಕೆಳಗಿಳಿದಿರಲಿಲ್ಲ: ಪ್ರಶಾಂತ್‌ ಭೂಷಣ್

ತುರ್ತು ಪರಿಸ್ಥಿತಿ ಸಮಯದಲ್ಲೂ ’ಸುಪ್ರೀಂ’ ಘನತೆ ಇಷ್ಟು ಕೆಳಗಿಳಿದಿರಲಿಲ್ಲ: ಪ್ರಶಾಂತ್‌ ಭೂಷಣ್

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಘನತೆ ತುರ್ತು ಪರಿಸ್ಥಿತಿಯ ಅವಧಿಗಿಂತಲೂ ಕೆಳಕ್ಕೆ ಇಳಿದಿದೆ ಎಂದು ಸುಪ್ರೀಂಕೋರ್ಟ್‌ನ ಹಿರಿಯ ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್ ಅಭಿಪ್ರಾಯಪಟ್ಟಿದ್ದಾರೆ.

“ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸರ್ಕಾರ ಸಾಕಷ್ಟು ಹಾನಿ ಮಾಡಿದೆ. ನ್ಯಾಯಾಲಯಗಳು ಅದರಲ್ಲೂ ವಿಶೇಷವಾಗಿ ಸುಪ್ರೀಂಕೋರ್ಟ್ ಇಂತಹ ತಾರತಮ್ಯ ಹಾಗೂ ಭಿನ್ನಾಭಿಪ್ರಾಯವನ್ನು ಹಿಂಸಾತ್ಮಕವಾಗಿ ತುಳಿದು ಹಾಕುವುದನ್ನು ಮೂಕ ಪ್ರೇಕ್ಷಕನಂತೆ ನೋಡುತ್ತಿದೆ” ಎಂದು ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಷಾ ಅವರು ದಿ ಹಿಂದೂ ಪತ್ರಿಕೆಯಲ್ಲಿ ಬರೆದಿರುವ, ”ಸುಪ್ರೀಂಕೋರ್ಟ್ ಹಾಗೂ ವ್ಯಕ್ತಿ ಸ್ವಾತಂತ್ಯ್ರದ” ಬಗಿಗಿನ ಲೇಖನವನ್ನು ಪ್ರಶಾಂತ್ ಭೂಷಣ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

“ನಾನು 40 ವರ್ಷಗಳಿಗಿಂತ ಹೆಚ್ಚು ಕಾಲ ಸುಪ್ರೀಂಕೋರ್ಟ್ ಅನ್ನು ಗಮನಿಸುತ್ತಿದ್ದೇನೆ. ನಿವೃತ್ತ ನ್ಯಾಯಾಧೀಶರು, ವಕೀಲರು, ದೂರುದಾರರು ಮತ್ತು ನಾಗರಿಕರು ಸೇರಿದಂತೆ ಸುಪ್ರೀಂಕೋರ್ಟ್ ಅನ್ನು ಈ ರೀತಿಯಾಗಿ ನಿಂದಿಸುವುದನ್ನು ನಾನು ನೋಡಿರಲಿಲ್ಲ. ತುರ್ತು ಪರಿಸ್ಥಿತಿಯಲ್ಲಿಯೂ ಸುಪ್ರೀಂಕೋರ್ಟ್‌‌ನ ಘನತೆ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರಲಿಲ್ಲ ಎಂದು ಧೈರ್ಯವಾಗಿ ಹೇಳಬಲ್ಲೆ” ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಪ್ರಶಾಂತ್‌ ಭೂಷಣ್ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೋಬ್ಡೆ ಅವರನ್ನು ಟೀಕಿಸಿದ ಕಾರಣಕ್ಕೆ ಇತ್ತೀಚೆಗಷ್ಟೆ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಿ ಒಂದು ರುಪಾಯಿ ದಂಡ ಕಟ್ಟಿದ್ದರು.

ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ: ಯೋಗೇಂದ್ರ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...