Homeಮುಖಪುಟಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ತನ್ನ ಘನತೆಯನ್ನು ಕಾಪಾಡುವ ಜವಾಬ್ದಾರಿಯಿದೆ: ಕಪಿಲ್‌ ಸಿಬಲ್

- Advertisement -
- Advertisement -

ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಎಸ್‌ಬಿಐ ಕಾಲಾವಕಾಶವನ್ನು ಕೋರಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್, ತನ್ನ ಘನತೆಯನ್ನು ಕಾಪಾಡುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಮತ್ತು ಬ್ಯಾಂಕ್‌ನ ಮನವಿಯನ್ನು ಸ್ವೀಕರಿಸುವುದು ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಕಪಿಲ್‌ ಸಿಬಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಡೇಟಾವನ್ನು ಸಾರ್ವಜನಿಕಗೊಳಿಸಲು ಹಲವಾರು ವಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ಇದು ಯಾರೋ ಯಾರನ್ನೋ ರಕ್ಷಿಸಲು ಬಯಸಿದಂತಿದೆ ಎಂದು ಹೇಳಿದ್ದಾರೆ.

ಪಿಟಿಐಗೆ ನೀಡಿದ ವೀಡಿಯೊ ಸಂದರ್ಶನದಲ್ಲಿ ಮಾತನಾಡಿದ ಕಪಿಲ್‌ ಸಿಬಲ್‌, ಸರ್ಕಾರವನ್ನು ರಕ್ಷಿಸಲು ಎಸ್‌ಬಿಐ ಉದ್ದೇಶಿಸಿದೆ. ಇಲ್ಲವಾದರೆ ಏಪ್ರಿಲ್-ಮೇನಲ್ಲಿ ಚುನಾವಣೆಗಳು ನಡೆಯುವಾಗ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ವಿಸ್ತರಣೆ ಕೋರಿ ಬ್ಯಾಂಕ್ ಅರ್ಜಿ ಸಲ್ಲಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಯೋಜನೆಯನ್ನು ರದ್ದುಪಡಿಸಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ವಿಸ್ತರಣೆಯನ್ನು ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ವಿಚಾರಣೆ ಬಾಕಿ ಇರವಾಗ ಹಿರಿಯ ವಕೀಲರ ಈ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ದೇಣಿಗೆಯ ವಿವರಗಳನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಬ್ಯಾಂಕ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿದ್ದ ಪ್ರತ್ಯೇಕ ಅರ್ಜಿಯನ್ನು ಆಲಿಸಲಿದೆ. ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳನ್ನು ಸಲ್ಲಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಎಸ್‌ಬಿಐಗೆ ಹೇಳಿತ್ತು.

ಎಸ್‌ಬಿಐಗೆ ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ಎಂದು ತಿಳಿದಿದೆ. ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಾರ್ವಜನಿಕಗೊಳಿಸಿದರೆ ಅದು ಸಾರ್ವಜನಿಕ ಚರ್ಚೆಯ ವಿಷಯವಾಗಲಿದೆ ಎಂದು ಎಸ್‌ಬಿಐಗೆ ಗೊತ್ತಿದೆ. ಅವರು ಸಮಯವನ್ನು ಕೇಳುತ್ತಿದ್ದಾರೆ. ನ್ಯಾಯಾಲಯವು ಇದನ್ನು ಪರಿಗಣಿಸಲಿದೆ ಎಂದು ನಾನು ಬಯಸುತ್ತೇನೆ, ಯಾರು ಯಾರಿಗೆ ಹಣ ಕೊಟ್ಟಿದ್ದಾರೆ ಎಂಬುವುದನ್ನು ಪತ್ತೆ ಹಚ್ಚಲು ನಾವು ಮಾಹಿತಿಗಳನ್ನು ಒಟ್ಟುಗೂಡಿಸಬೇಕು, ಫೈಲ್‌ಗಳನ್ನು ಸಂಗ್ರಹಿಸಬೇಕು ಎಂದು ಎಸ್‌ಬಿಐ ಹೇಳುವುದು ಪುರಾತನವಾಗಿದೆ. ಇದು 21ನೇ ಶತಮಾನ ಮತ್ತು ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಎಲ್ಲವನ್ನೂ ಡಿಜಿಟಲೀಕರಣದ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಕೇಳಲಾದ ಪ್ರಶ್ನೆಗೆ ಸಿಬಲ್, ಇವುಗಳು ನ್ಯಾಯಾಂಗ ನಿಂದನೆ ವಿಷಯಗಳಾಗಿವೆ. ಇದು ನ್ಯಾಯಾಲಯದ ಘನತೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಘನತೆಯನ್ನು ಕಾಪಾಡುವ ಜವಾಬ್ದಾರಿ ನ್ಯಾಯಾಲಯದ ಮೇಲಿದೆ. ಎಸ್‌ಬಿಐ ನೀಡಿದ ಈ ವಿಶೇಷವಾದ ವಿವರಣೆಯನ್ನು ನ್ಯಾಯಾಲಯವು ಒಪ್ಪಿಕೊಳ್ಳುತ್ತಿದೆ ಎಂದಾದರೆ, ಇದು ನಗುವ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಎಸ್‌ಬಿಐ ಸ್ವತಃ ಅರ್ಜಿಯನ್ನು ಸಲ್ಲಿಸಿರುವುದು ಬಹುಶಃ ನ್ಯಾಯಾಲಯವು ಮನವಿ ಸ್ವೀಕರಿಸುತ್ತದೆ ಎಂಬ ಭರವಸೆಯ ಕಾರಣದಿಂದಾಗಿರಬಹುದು, ಆದರೆ ನನ್ನ ತಿಳುವಳಿಕೆ ಏನೆಂದರೆ, ಒಮ್ಮೆ ಸಾಂವಿಧಾನಿಕ ಪೀಠವು ತೀರ್ಪು ನೀಡಿದ ನಂತರ, ನ್ಯಾಯಾಲಯವು ಆ ರೀತಿ ಹೇಳುವುದು ಸುಲಭವಲ್ಲ ಎಂದು ಸಿಬಲ್ ಹೇಳಿದ್ದಾರೆ.

ಇಡೀ ಯೋಜನೆಯನ್ನು ಬಿಜೆಪಿಯ ಆಸ್ತಿಯನ್ನು ಹೆಚ್ಚಿಸುವ ಮತ್ತು ವಿಶ್ವದ ಶ್ರೀಮಂತ ಪಕ್ಷವನ್ನಾಗಿ ಮಾಡುವ ರಾಜಕೀಯ ಉದ್ದೇಶದಿಂದ ರೂಪಿಸಲಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಬೊಕ್ಕಸಕ್ಕೆ ಹಣ ಬರುವಂತೆ ನೋಡಿಕೊಳ್ಳುವುದು 2017ರಲ್ಲಿ ನಿಗದಿಪಡಿಸಿದ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳು ಕಳೆದ ಕೆಲವು ವರ್ಷಗಳಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ, ಜೂನ್‌ಗಿಂತ ಮೊದಲು ಚುನಾವಣಾ ಬಾಂಡ್‌ಗಳ ವಿವರಗಳು ಹೊರಬಂದ ನಂತರ ಅವರು ವಿರೋಧ ಪಕ್ಷಗಳು ಮತ್ತು ನಾಯಕರನ್ನು ಗುರಿಯಾಗಿಸುತ್ತಾರೆ ಎಂದು ಸಿಬಲ್ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣಾ ಬಾಂಡ್‌ಗಳ ವಿಷಯದ ಬಗ್ಗೆ ಧ್ವನಿ ಎತ್ತಬೇಕು ಎಂದು ಸಿಬಲ್ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...