Homeಕರ್ನಾಟಕಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ - ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ...

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

- Advertisement -
- Advertisement -

ರಾಜ್ಯ ಸರ್ಕಾರ ಮಾರ್ಚ್ ವೇಳೆಗೆ ಮಂಡಿಸುವ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಬಾರದು ಎಂದು ಅಧಿವೇಶನ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆಯನ್ನು ಒಪ್ಪಲ್ಲ ಎಂದು ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ ಹೇಳಿದರು. ಎಸ್‌‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ನಿಲ್ಲಿಸಲು ಮತ್ತು ಕಾಯ್ದೆಯ ಆಶಯದಂತೆ ಜಾರಿಗೆ ಒತ್ತಾಯಿಸಿ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾಗೃತಿ ವೇದಿಕೆಯ ಅಡಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ಅವರು ಮಾತನಾಡುತ್ತಿದ್ದರು. ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ

ಸಮಾಜದ ಮುಖ್ಯವಾಹಿನಿಗೆ ಎಸ್ಸಿ ಮತ್ತು ಎಸ್ಟಿ ಸಮುದಾಯದ ಜನರು ಬರಬೇಕು ಎಂದಾದರೆ ಅವರಿಗೆ ಮೀಸಲಿಟ್ಟ ಹಣದ ದುರ್ಬಳಕೆ ನಿಲ್ಲಬೇಕು. ಮೀಸಲು ಅನುದಾವನ್ನು ಅವರಿಗಾಗಿ ವ್ಯಯಿಸಬೇಕು ಎಂದು ಅವರು ಹೇಳಿದರು. ದಲಿತ ಸಮುದಾಯದ ಅಂಕಿ ಅಂಶಗಳನ್ನು ಮಾತ್ರ ಸರ್ಕಾರ ಇಟ್ಟುಕೊಂಡಿದೆ, ಆದರೆ ಈ ಬೃಹತ್ ಸಮುದಾಯಕ್ಕೆ ಹೇಗೆ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.‌

“ಕಾಯ್ದೆ ಜಾರಿಯಾದ ನಂತರ ಎರಡು ಲಕ್ಷ ಕೋಟಿಗೂ ಹೆಚ್ಚು ಕೊಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈ ಹಣ ಎಸ್ಸಿ ಎಸ್ಟಿ ಸಮುದಾಯಕ್ಕೆ ತಲುಪಿದ್ದರೆ, ಅವರು ಅಭಿವೃದ್ಧಿ ಆಗುತ್ತಿದ್ದರು. ಈ ಸಮುದಾಯದ ಪರವಾಗಿ ಮಾಡಿರುವ ಯಾವುದೇ ಯೋಜನೆ ಇನ್ನೂ ಸಮುದಾಯದ ಮನೆ ಬಾಗಿಲಿಗೂ ತಲುಪಿಲ್ಲ. ಹನ್ನೆರಡು ವರ್ಷಗಳಿಂದ ಈ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಿಂದ ವಂಚಿತ ಆಗುತ್ತಿದೆ” ಎಂದು ಅವರು ಹೇಳಿದರು.

“ನಾವು ಹೆಚ್ಚಿನದೇನು ಕೇಳುತ್ತಿಲ್ಲ. ನಮ್ಮ ಹಣವನ್ನು ನಮ್ಮ ಸಮುದಾಯದ ಆರ್ಥಿಕ ಬಲಿಷ್ಠವಾಗಲು ಬಳಸಿ ಎನ್ನುತ್ತಿದ್ದೇವೆ. ಆದರೆ ಈ ಹಣ ಇದುವರೆಗೂ ಸಮುದಾಯದ 5% ಜನರಿಗೂ ತಲುಪಿಲ್ಲ. ಕಾಂಗ್ರೆಸ್ ನುಡಿದಂತೆ ನಡೆಯಬೇಕಿದ್ದು, ಮಾರ್ಚ್ ಬಜೆಟ್ ಅಧಿವೇಶನದಲ್ಲಿ ಗ್ಯಾರೆಂಟಿಗೆ ಈ ನಿಧಿಯ ಬಳಕೆ ನಿಲ್ಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ” ಎಂದು ನರಸಿಂಹಮೂರ್ತಿ ಅವರು ಹೇಳಿದರು.

ನಿವೃತ್ತ ಕೆಪಿಎಸ್‌ ಅಧಿಕಾರಿ ಭೀಮಾಶಂಕರ ಮಾತನಾಡಿ, “ಪ್ರತಿವರ್ಷ ಸರಾಸರಿ 22 ಸಾವಿರ ಕೋಟಿ ಹಣ ಇದಕ್ಕಾಗಿ ಮೀಸಲಿಡಲಾಗುತ್ತದೆ. ಈ ಹಣವನ್ನು ಸಮುದಾಯಕ್ಕೆ ಬಳಸಿದ್ಜರೆ ಸಮುದಾಯದ ಪ್ರತಿ ಕುಟುಂಬ ಇಷ್ಟು ಹೊತ್ತಿಗೆ ಅಭಿವೃದ್ಧಿ ಹೊಂದಬೇಕಿತ್ತು. ಸಮುದಾಯದ ಯುವಜನರು ಉದ್ಯಮಿಗಳು ಆಗಬೇಕಿತ್ತು.” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಯೋಜನೆಯ ಕೇವಲ 8% ಅಷ್ಟೇ ಸಮುದಾಯಕ್ಕೆ ಸಿಕ್ಕಿದೆ. ಉಳಿದವುಗಳು ರಸ್ತೆ, ಸೇತುವೆ, ಅಣೆಕಟ್ಟು ಸೇರಿದಂತೆ ಇತರ ಕಾರ್ಯಗಳಿಗೆ ಸರ್ಕಾರ ಬಳಸುತ್ತಿದೆ” ಎಂದು ಈ ಹಣವನ್ನು ಆರ್ಥಿಕ ಮತ್ತು ಶೈಕ್ಷಣಿಕ ಕಾರಣಗಳಿಗಾಗಿ ಖರ್ಚು ಮಾಡಬೇಕು ಎಂದು ಕಾನೂನು ಹೇಳುತ್ತದೆ.‌ ಹೆಚ್ಚಿನ ಅನುದಾನವನ್ನು ಸಾಮಾನ್ಯ ಯೋಜನೆಗೆ ಸರ್ಕಾರ ಬಳಸುತ್ತಿದೆ. ಇದು ಅನ್ಯಾಯ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಚಿಂತಕ ಶಿವಸುಂದರ್ ಮಾತನಾಡಿ, ಬೇರೆ ಸಮುದಾಯದ ಬಡತನಕ್ಕೂ ಎಸ್ಸಿ ಎಸ್ಟಿ ಸಮುದಾಯದ ಬಡತನಕ್ಕೂ ಅಂತರವಿದೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರೆಂಟಿ ಯೋಜನೆಗಾಗಿ ಹಣ ಉಪಯೋಗ ಮಾಡುತ್ತೇವೆ ಎಂದು ಸಮರ್ಥನೆ ಮಾಡುವುದು ಈ ನಿಧಿಯ ಉದ್ದೇಶದ ಬಗ್ಗೆ ಏನೂ ತಿಳಿಯದವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವು ಎಸ್ಸಿ/ಎಸ್ಟಿ ಸಮುದಾಯಕ್ಕೆ ನೀಡುತ್ತಿರುವ ದಾನವಲ್ಲ. ಅದು ಅವರ ಹಕ್ಕು. ಗ್ಯಾರಂಟಿ ಯೋಜನೆಯನ್ನು ನಿಲ್ಲಿಸದೆ ಈ ಹಣವನ್ನು ಸಮುದಾಯಕ್ಕೆ ನೀಡಬೇಕು. ಸರ್ಕಾರದ ಬಳಿ ದುಡ್ಡು ಇಲ್ಲ ಎಂದರೆ ಶ್ರೀಮಂತರಿಗೆ ತೆರಿಗೆ ಹಾಕಿ ಹಣ ಸಂಗ್ರಹಿಸಬೇಕು. ಅದು ಬಿಟ್ಟು ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಸುವುದು ಸರಿಯಲ್ಲ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ 7ಸಿಯನ್ನು ಕೂಡಾ ಕಿತ್ತೊಗೆಯಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಮ್ಮನ್ನು ಹಿಂದೂ ಧರ್ಮಕ್ಕೆ ಮತಾಂತರವಾಗಲು ತೀವ್ರ ಒತ್ತಡ ಹಾಕಲಾಗುತ್ತಿದೆ: ಮುಸ್ಲಿಮ್ ಸಮುದಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...