Homeಕರ್ನಾಟಕಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ...

ಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ ರೋಚಕ ತಿರುವು

- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂಬ ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ನದಿಯ ದಡದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯು ಇದೀಗ ಐದನೇ ದಿನಕ್ಕೆ ತಲುಪಿದೆ. ಇಷ್ಟು ದಿನ ಯಾವುದೇ ಮಹತ್ವದ ಸುಳಿವು ಸಿಗದೇ ಇದ್ದ ತನಿಖಾ ತಂಡಕ್ಕೆ, ಶೋಧ ಕಾರ್ಯದ 4ನೇ ದಿನವಾದ ನಿನ್ನೆ (ಗುರುವಾರ) 6ನೇ ಪಾಯಿಂಟ್‌ನಲ್ಲಿ ದೊರೆತ ಮಾನವ ಅವಶೇಷಗಳು ಹೊಸ ಹುರುಪು ತಂದಿದ್ದು, ಈ ಪ್ರಕರಣಕ್ಕೆ ರೋಚಕ ತಿರುವು ನೀಡಿವೆ.

ಪ್ರವಾಹ ಮತ್ತು ನಿರ್ಮಾಣ ಕಾರ್ಯಗಳಿಂದ ಸವಾಲು:

ಸೋಮವಾರದಿಂದ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ ಮೊದಲ 3 ದಿನಗಳಲ್ಲಿ ಶವ ಶೋಧ ತಂಡವು ನದಿಯ ಬಲ ದಡದಲ್ಲಿರುವ 1 ರಿಂದ 5 ಪಾಯಿಂಟ್‌ಗಳಲ್ಲಿ ತೀವ್ರ ಶೋಧ ನಡೆಸಿತ್ತು. ಆದರೆ, 2014ರ ನಂತರ ನೇತ್ರಾವತಿ ನದಿಯಲ್ಲಿ ಉಂಟಾದ ಭಾರಿ ಪ್ರವಾಹ, ಭೂಕುಸಿತ ಮತ್ತು ನದಿ ನೀರಿನ ಹರಿವಿನಿಂದಾಗಿ ಅನೇಕ ಶವಗಳು ಕೊಚ್ಚಿಕೊಂಡು ಹೋಗಿರಬಹುದು ಎಂದು ತಜ್ಞರು ಮತ್ತು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ದೂರುದಾರ ಗುರುತಿಸಿದ ಹಲವು ಸ್ಥಳಗಳಲ್ಲಿ ಸ್ನಾನಘಟ್ಟಗಳು, ಶೌಚಾಲಯಗಳು ಮತ್ತು ಇತರ ನಿರ್ಮಾಣ ಕಾರ್ಯಗಳು ನಡೆದಿರುವುದರಿಂದಲೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಈ ಪ್ರದೇಶವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ, ಇಂಚಿಂಚು ಶೋಧ ಮಾಡುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಮತ್ತು ಇದಕ್ಕೆ ಹೆಚ್ಚಿನ ಸಮಯ ಹಾಗೂ ವಿಶೇಷ ಅನುಮತಿಗಳ ಅಗತ್ಯವಿದೆ.

ನಿರೀಕ್ಷೆ ಹುಟ್ಟಿಸಿದ 13ನೇ ಪಾಯಿಂಟ್:

ಪ್ರಕರಣದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವುದು ನೇತ್ರಾವತಿ ಸ್ನಾನಘಟ್ಟದ ಎಡಭಾಗದಲ್ಲಿರುವ 13ನೇ ಪಾಯಿಂಟ್. ಇಲ್ಲಿ 10ಕ್ಕೂ ಹೆಚ್ಚು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಹೇಳಿದ್ದಾನೆ. ಶವಗಳನ್ನು ಹೂಳಿದ್ದ ಜಾಗದಲ್ಲಿ ಮೊದಲು 5ರಿಂದ 6 ಅಡಿ ಗುಂಡಿ ಇತ್ತಂತೆ. ಈಗ ಆ ಜಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದ್ದು, ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಸ್ಥಳೀಯರ ಪ್ರಕಾರ, ಈ ಸ್ಥಳದಲ್ಲಿ 5-6 ಅಡಿ ಆಳದಲ್ಲಿ ಶವಗಳು ಸಿಗುವುದು ಕಷ್ಟ. ಹಾಗಾಗಿ 10-15 ಅಡಿ ಆಳದವರೆಗೆ ಅಗೆಯುವುದು ಅವಶ್ಯಕ ಎಂದು ವಾದಿಸಿದ್ದಾರೆ. ಈ ಪಾಯಿಂಟ್‌ಗಳ ಪ್ರದೇಶವು ಭೂಕುಸಿತ ಮತ್ತು ನೆರೆ ಸಂಭವಿಸಿರುವುದು ಕಡಿಮೆ ಇರುವುದರಿಂದ, ಇಲ್ಲಿ ಶವಗಳು ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಕಾರ್ಯಾಚರಣೆ ಮತ್ತು ಮಹತ್ವದ ಸುಳಿವು:

ಗುರುವಾರದಂದು ನೇತ್ರಾವತಿ ಸೇತುವೆಯ ಮುಖ್ಯರಸ್ತೆಯಿಂದ ಸುಮಾರು 300 ಮೀಟರ್ ಒಳಗೆ ಇರುವ 6ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆ ಕಡಿಮೆ ಇರುವುದರಿಂದ, ತನಿಖಾ ತಂಡವು ಇಲ್ಲಿಗೆ ಹೆಚ್ಚಿನ ಗಮನ ನೀಡಿತ್ತು. ನಿನ್ನೆ ಬೆಳಿಗ್ಗೆ 11.30ಕ್ಕೆ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾನವ ಅವಶೇಷಗಳು ಪತ್ತೆಯಾಗಿವೆ. ಈ ಮಹತ್ವದ ಬೆಳವಣಿಗೆಯಿಂದ ಎಸ್‌ಐಟಿ ತಂಡ ತಕ್ಷಣವೇ ಪೂರ್ಣ ಎಚ್ಚರಿಕೆ ವಹಿಸಿತು. ಎಫ್‌ಎಸ್‌ಎಲ್ ತಜ್ಞರೊಂದಿಗೆ ಉಪವಿಭಾಗಾಧಿಕಾರಿ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಉಪಸ್ಥಿತರಿದ್ದರು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಸಂಜೆ 7.30ರವರೆಗೆ ಮುಂದುವರೆಯಿತು.

ಸಿಕ್ಕ ಅವಶೇಷಗಳನ್ನು ಅತಿ ಸೂಕ್ಷ್ಮವಾಗಿ ಸಂಗ್ರಹಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಹಾಕಿ ಸೀಲ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಮತ್ತು ಎಸ್‌ಐಟಿ ತಂಡದವರು ಈ ಕಾರ್ಯವನ್ನು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಅವಶೇಷಗಳನ್ನು ಈಗ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿಎನ್‌ಎ ಪರೀಕ್ಷೆ ಮತ್ತು ಇತರ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ, ಸಿಕ್ಕ ಅವಶೇಷಗಳು ಮಹಿಳೆಯದ್ದೋ ಅಥವಾ ಪುರುಷರದ್ದೋ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸ್ಥಳೀಯ ಕಾರ್ಮಿಕರನ್ನು ಹೊರಗಿಟ್ಟ ಕಾರ್ಯಾಚರಣೆ:

ಶೋಧ ಕಾರ್ಯಾಚರಣೆಯ ಮತ್ತೊಂದು ಗಮನಾರ್ಹ ಅಂಶವೆಂದರೆ, ಸ್ಥಳೀಯ ಕಾರ್ಮಿಕರ ಬದಲಿಗೆ ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಈ ನಿರ್ಧಾರದ ಹಿಂದೆ ಹಲವು ಕಾರಣಗಳಿರಬಹುದು ಎಂದು ಅಂದಾಜಿಸಲಾಗಿದೆ. ಇಡೀ ಪ್ರದೇಶವು ಅರಣ್ಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ, ಇಂಚಿಂಚು ಶೋಧ ಮಾಡುವುದು ಕಷ್ಟಕರ. ಆದರೂ, ಶೋಧ ಕಾರ್ಯಕ್ಕೆ ಲೀಡ್ ಸಿಕ್ಕಿರುವುದು, ತನಿಖೆಗೆ ಹೊಸ ಆಯಾಮ ನೀಡಿದೆ.

ಈ ಪ್ರಕರಣವು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ನಡೆದಿರುವುದರಿಂದ ಎಲ್ಲೆಡೆ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯದ ವರದಿಗಳು ಬಂದ ನಂತರವೇ, ಈ ಅವಶೇಷಗಳ ಮೂಲ, ಹಿನ್ನೆಲೆ ಮತ್ತು ಹೂಳಿದ ಉದ್ದೇಶದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದು, ಈ ಪ್ರಕರಣದ ಅಂತ್ಯ ಏನಾಗಲಿದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

ತನಿಖೆಗೆ ಒಳಪಟ್ಟಿರುವ ಸ್ಥಳಗಳಿಗೆ ಪೊಲೀಸ್ ಭದ್ರತೆ, ಶೆಡ್‌ಗಳ ರಕ್ಷಣೆ

ಎಸ್‌ಐಟಿ ತಂಡವು ದೂರುದಾರರು ಸೂಚಿಸಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇವುಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿವೆ.

ಮುಂದಿನ ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಹಾಗೂ ಮಳೆಯಿಂದಾಗಿ ಅವಶೇಷಗಳಿಗೆ ಹಾನಿಯಾಗದಂತೆ ತಡೆಯಲು, ಆ ಸ್ಥಳದ ಸುತ್ತ ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಿ ರಕ್ಷಣೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸ್ಥಳಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಯಾವುದೇ ಅನಗತ್ಯ ಚಟುವಟಿಕೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮಗಳು ತನಿಖೆಯ ಮಹತ್ವವನ್ನು ಸೂಚಿಸುತ್ತವೆ ಮತ್ತು ಭವಿಷ್ಯದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿಡಲು ಸಹಕಾರಿಯಾಗಿವೆ.

ವಿಶೇಷ ವರದಿ: ರವಿ ಈಚಲಮರ

ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...