Homeಮುಖಪುಟಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆಯಲ್ಲಿ ಸೀಟ್‌ ಹಂಚಿಕೆ ಬಗ್ಗೆ ಚರ್ಚೆ

ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆಯಲ್ಲಿ ಸೀಟ್‌ ಹಂಚಿಕೆ ಬಗ್ಗೆ ಚರ್ಚೆ

- Advertisement -
- Advertisement -

ಇಂಡಿಯಾ ಮೈತ್ರಿಕೂಟದ ಮೊದಲ ಸಮನ್ವಯ ಸಮಿತಿ ಸಭೆಯಲ್ಲಿ ಸೀಟ್‌ ಹಂಚಿಕೆ ಬಗ್ಗೆ ಮಾತುಕತೆ ನಡೆಯಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

ಮೊದಲ ಸಮನ್ವಯ ಸಭೆ ನಾಳೆ (ಸೆ.13)ರಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆಯಲಿದೆ. ಸೆ.1ರಂದು ಮುಂಬೈನಲ್ಲಿ ನಡೆದ ಮೂರನೇ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟ 14 ಸದಸ್ಯರ ಸಮನ್ವಯ ಸಮಿತಿಯನ್ನು ಘೋಷಿಸಿತ್ತು.

ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯಲ್ಲಿ ಶರದ್ ಪವಾರ್,  ಕಾಂಗ್ರೆಸ್‌ನ ಕೆಸಿ ವೇಣುಗೋಪಾಲ್, ಡಿಎಂಕೆಯ ಟಿಆರ್ ಬಾಲು, ಜೆಎಂಎಂನ ಹೇಮಂತ್ ಸೊರೆನ್, ಶಿವಸೇನೆಯ ಸಂಜಯ್ ರಾವತ್, ಆರ್‌ಜೆಡಿಯ ತೇಜಸ್ವಿ ಯಾದವ್, ತೃಣಮೂಲ ಕಾಂಗ್ರೆಸ್‌ನ ಅಭಿಷೇಕ್ ಬ್ಯಾನರ್ಜಿ, ಎಎಪಿಯ ರಾಘವ್ ಚಡ್ಡಾ, ಸಮಾಜವಾದಿ ಪಕ್ಷದ ಜಾವೆದ್ ಅಲಿ ಖಾನ್‌, ಸಿಪಿಐನ ಡಿ ರಾಜಾ, ನ್ಯಾಷನಲ್ ಕಾನ್ಫರೆನ್ಸ್ ಒಮರ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ ಸದಸ್ಯರಾಗಿದ್ದಾರೆ.

ಸಮಿತಿಗೆ ಸಿಪಿಐಎಂ ಇನ್ನೂ ತಮ್ಮ ಪಕ್ಷದ ನಾಯಕರ ಹೆಸರನ್ನು ಅಂತಿಮಗೊಳಿಸಿಲ್ಲ. ಇಂಡಿಯಾ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಸೀಟು ಹಂಚಿಕೆ ವಿಷಯ ಚರ್ಚೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ನಡೆದ ಮೂರು ಸಭೆಗಳಲ್ಲಿ ಇಲ್ಲಿಯವರೆಗೂ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ನಾಯಕರು ಒಂದೇ ಒಂದು ಚರ್ಚೆಯನ್ನೂ ನಡೆಸಿಲ್ಲ. ನಾಳಿನ ಸಭೆಯಲ್ಲಿ ಬಿಹಾರ, ಉತ್ತರ ಪ್ರದೇಶ ಪ.ಬಂಗಾಳ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಚರ್ಚೆಯು  ಅಜೆಂಡಾದಲ್ಲಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ: ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣ: ಸ್ವಯಂಘೋಷಿತ ಗೋರಕ್ಷಕ ಮೋನು ಮಾನೇಸರ್‌ ಅರೆಸ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...