Homeಕರ್ನಾಟಕ''ಪುರುಷರಿಗೆ ಸೀಟು ಬಿಟ್ಟುಕೊಡಿ'' - ವಿಚಿತ್ರ ಆದೇಶ ಹೊರಡಿಸಿದ ಕೆಎಸ್‌ಆರ್‌ಟಿಸಿ!

”ಪುರುಷರಿಗೆ ಸೀಟು ಬಿಟ್ಟುಕೊಡಿ” – ವಿಚಿತ್ರ ಆದೇಶ ಹೊರಡಿಸಿದ ಕೆಎಸ್‌ಆರ್‌ಟಿಸಿ!

- Advertisement -
- Advertisement -

ದೇಶಾದ್ಯಂತ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗಾಗಿ ‘ಮಹಿಳಾ ಮೀಸಲು’ ಸೀಟುಗಳಿದ್ದು, ಆ ಸೀಟುಗಳನ್ನು ಮಹಿಳೆಯರಿಗೆ ಬಿಟ್ಟುಕೊಡಬೇಕು ಎಂಬ ನಿಯಮವಿದೆ. ಆದರೆ, ಕೆಎಸ್‌ಆರ್‌ಟಿಸಿಯ ಮೈಸೂರು ವಿಭಾಗವು ಸಾರಿಗೆ ಬಸ್‌ಗಳಲ್ಲಿ ಪುರುಷರಿಗೆ ಸೀಟುಗಳನ್ನು ಬಿಟ್ಟುಕೊಡಿ ಎಂಬ ವಿಚಿತ್ರ ಆದೇಶ ಹೊರಡಿಸಿದ್ದು, ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಬಸ್‌ಗಳಲ್ಲಿ ಪುರುಷರಿಗೆ ಸೀಟು ಬಿಟ್ಟುಕೊಡುವಂತೆ ಆದೇಶ ಹೊರಡಿಸಿರುವ ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ, “ಮೈಸೂರು ನಗರ ಸಾರಿಗೆ ವಾಹನಗಳಲ್ಲಿ ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿದ್ದು, ಪುರುಷ ಪ್ರಯಾಣಿಕರಿಗೆ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ವಿಷ್ಣುವರ್ಧನ ಎಸ್ ಎಂಬವರು ಕೇಂದ್ರ ಕಚೇರಿಗೆ ದೂರು ಸಲ್ಲಿಸಿದ್ದಾರೆ.” ಎಂದು ಆದೇಶದಲ್ಲಿ ಹೇಳಿದ್ದಾರೆ. ಆದರೆ, ಯಾವುದೆ ಕೆಎಸ್‌ಆರ್‌ಟಿಯಾಗಲಿ ಅಥವಾ ಯಾವುದೇ ಸಾರಿಗೆಗಳಲ್ಲಿ ಪುರುಷರಿಗೆ ಮೀಸಲು ಸೀಟುಗಳಿಲ್ಲ.

“ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ. ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು” ಎಂದು ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶಿಸಿದ್ದಾರೆ. ವಿಚಿತ್ರ ಆದೇಶ

ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದ ನಂತರ ಮಹಿಳೆಯರು ಮಹಿಳಾ ಮೀಸಲು ಸೀಟುಗಳನ್ನು ಬಿಟ್ಟು ಬೇರೆ ಸೀಟುಗಳಲ್ಲಿ ಕೂತರೆ ಅವರನ್ನು ಅವಹೇಳನ ಮಾಡುವ, ಬೆದರಿಸುವ ಹಲವಾರು ಘಟನೆಗಳು ವರದಿಯಾಗಿತ್ತು. ಈ ಅಪಪ್ರಚಾಕ್ಕೆ ಬೆದರಿ ಕೆಎಸ್‌ಆರ್‌ಟಿಸಿ ಪ್ರಸ್ತುತ ವಿವಾದಾತ್ಮಕ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

ಆದೇಶದ ಪ್ರತಿ ವೈರಲ್ ಆಗುತ್ತಿದ್ದಂತೆ, ಪುರುಷ ಮೀಸಲು ಸೀಟುಗಳು ಇಲ್ಲ ಎಂಬ ಕನಿಷ್ಠ ಜ್ಞಾನವೂ ಇಲ್ಲದವರು ಕೆಎಸ್‌ಆರ್‌ಟಿಸಿಯ ಒಂದು ವಿಭಾಗದ ನಿಯಂತ್ರಣಾಧಿಕಾರಿಯಾಗಿದ್ದಾರೆ. ಅವರಿಗೆ ಬಸ್‌ ಪ್ರಯಾಣ ಮತ್ತು ಸೀಟುಗಳ ಬಗ್ಗೆ ಮೊದಲು ಅರಿವು ಮೂಡಿಸಬೇಕಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...