Homeಮುಖಪುಟಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

ಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

- Advertisement -
- Advertisement -

ಉದ್ಯಮಿ ಗೌತಮ್ ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ದಂಪತಿಯ ಪಾಲುದಾರಿಕೆ ಇದೆ ಎಂಬ ಹಿಂಡೆನ್‌ಬರ್ಗ್ ವರದಿ ಸಂಚಲನ ಸೃಷ್ಟಿಸಿರುವ ನಡುವೆ, ಸುಪ್ರೀಂ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.

ಈ ಹಿಂದೆ, 2023ರಲ್ಲಿ ಅದಾನಿ ಶೇರು ಹಗರಣ ಸಂಬಂಧ ತನಿಖೆ ಕೋರಿ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಈ ಬಾರಿಯೂ ಅರ್ಜಿ ಸಲ್ಲಿಸಿದ್ದು, ಅದಾನಿ ಸಮೂಹ ಸಂಸ್ಥೆಗಳ ಕುರಿತ ತನಿಖೆ ಪೂರ್ಣಗೊಳಿಸುವಂತೆ ಸೆಬಿಗೆ ನಿರ್ದೇಶಿಸಲು ಕೋರಿದ್ದಾರೆ.

ಅದಾನಿ ಸಮೂಹದ ಸಂಸ್ಥೆಗಳ ಲೆಕ್ಕಪತ್ರ ವಂಚನೆ ಮತ್ತು ಷೇರು ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಗೆ ಆದೇಶಿಸಲು ವಕೀಲ ವಿಶಾಲ್ ತಿವಾರಿ ನವೆಂಬರ್ 24, 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು.

ಸೆಬಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿತ್ತು.

ಈ ವೇಳೆ ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿತ್ತು. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿತ್ತು.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿತ್ತು. ಆಧಾರ ರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

ನಂತರ, ಈ ವರ್ಷದ ಜೂನ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದ್ದ ವಿಶಾಲ್ ತಿವಾರಿ, ಜನವರಿಯಲ್ಲಿ ನೀಡಿದ ಆದೇಶದಂತೆ ಕಾಲಾವಧಿಯ ಒಳಗೆ ತನಿಖೆ ಪೂರ್ಣಗೊಳಿಸಲು ಸೆಬಿಗೆ ನಿರ್ದೇಶಿಸುವಂತೆ ಕೋರಿದ್ದರು. ಆದರೆ, ಈ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ (ಲಿಸ್ಟಿಂಗ್‌), ನ್ಯಾಯಾಲಯ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಿಲ್ಲ ಎಂದಿದ್ದರು.

ಇದೀಗ ಅದಾನಿ ಸಮೂಹಕ್ಕೆ ಸಂಬಂಧಪಟ್ಟಂತೆ ಸೆಬಿ ಅಧ್ಯಕ್ಷೆಯ ವಿರುದ್ದವೇ ಹಿಂಡನ್‌ಬರ್ಗ್‌ ಆರೋಪ ಮಾಡಿರುವ ಹಿನ್ನೆಲೆ, ತನಿಖೆ ಪೂರ್ಣಗೊಳಿಸುವಂತೆ ಸೆಬಿಗೆ ನಿರ್ದೇಶಿಸಲು ವಿಶಾಲ್ ತಿವಾರಿ ಮತ್ತೊಮ್ಮೆ ನ್ಯಾಯಾಲಯವನ್ನು ಕೋರಿದ್ದಾರೆ.

ಪ್ರಕರಣದ ಹಿನ್ನೆಲೆ

ಅದಾನಿ ಸಮೂಹ ತನ್ನ ಷೇರು ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು  ಆರೋಪಿಸಿ ಜನವರಿ 24,2023ರಂದು, ಹಿಂಡೆನ್‌ಬರ್ಗ್ ರಿಸರ್ಚ್ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂ.ಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ : ಪತಂಜಲಿ ದಾರಿತಪ್ಪಿಸುವ ಜಾಹೀರಾತು ಪ್ರಕರಣ: ರಾಮ್‌ದೇವ್, ಎಂಡಿ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...