Homeಕರೋನಾ ತಲ್ಲಣಮುಂದಿನವಾರ 2-6 ವರ್ಷದ ಮಕ್ಕಳಿಗೆ ಕೋವಾಕ್ಸಿನ್‌ 2ನೇ ಡೋಸ್‌ ಪ್ರಯೋಗ

ಮುಂದಿನವಾರ 2-6 ವರ್ಷದ ಮಕ್ಕಳಿಗೆ ಕೋವಾಕ್ಸಿನ್‌ 2ನೇ ಡೋಸ್‌ ಪ್ರಯೋಗ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ 2 ರಿಂದ 6 ವರ್ಷದ ಮಕ್ಕಳಿಗೆ ನೀಡಲಾಗುತ್ತಿರುವ ಭಾರತ್‌ ಬಯೋಟಿಕ್‌ ಉತ್ಪಾದಿಸಿರುವ ಕೋವಾಕ್ಸಿನ್‌ ಲಸಿಕೆಯ ಎರಡನೇ ಡೋಸ್‌ನ ಪ್ರಯೋಗವನ್ನು ಮುಂದಿನವಾರ ಆರಂಭಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಈಗಾಗಲೇ ಈ ವಯಸ್ಸಿನ ಮಕ್ಕಳು ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ ಎಂದು ಹೇಳಲಾಗಿದೆ. 6 ರಿಂದ 12 ವರ್ಷದ ಮಕ್ಕಳಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಾಕ್ಸಿನ್‌ ಲಸಿಕೆಯ ಎರಡನೇ ಡೋಸ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ.

ದೆಹಲಿಯ ಏಮ್ಸ್ ಆಸ್ಪತ್ರೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡುವ ಪ್ರಯೋಗ ಕೇಂದ್ರಗಳಲ್ಲಿ ಒಂದಾಗಿದೆ. ಎಲ್ಲಾ ವಯೋಮಾನದವರಿಗೂ ಲಸಿಕೆ ನೀಡಲು ಪ್ರಯೋಗಗಳು ಪೂರ್ಣಗೊಂಡ ನಂತರ ಒಂದು ತಿಂಗಳಲ್ಲಿ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳು ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ಮಕ್ಕಳನ್ನು ವಯಸ್ಸಿನ ಆಧಾರದ ಮೇಲೆ ವಿಂಗಡಿಸಿ, ಮೂರು ಹಂತಗಳಲ್ಲಿ ಲಸಿಕಾ ಪ್ರಯೋಗವನ್ನು ನಡೆಸಲಾಗುತ್ತದೆ. ಮೊದಲ ಪ್ರಯೋಗವನ್ನು 12 ರಿಂದ 18 ವರ್ಷ ವಯಸ್ಸಿನವರಲ್ಲಿ ಪ್ರಾರಂಭಿಸಲಾಗಿತ್ತು. 2ನೇ ಹಂತದಲ್ಲಿ 6 ರಿಂದ 12 ವರ್ಷಗಳ ಮಕ್ಕಳ ಮೇಲೆ ನಡೆಸಿದ್ದು, ಇದೀಗ 3ನೇ ಹಂತದಲ್ಲಿ 2 ರಿಂದ 6 ವರ್ಷ ವಯಸ್ಸಿನ ಮಕ್ಕಳ ಮೇಲೆ ಪ್ರಯೋಗಗಳು ನಡೆಯುತ್ತಿವೆ.

ಭಾರತ್ ಬಯೋಟೆಕ್‌ನ ಸ್ವದೇಶಿ ನಿರ್ಮಿತ ಮಕ್ಕಳ ಲಸಿಕೆಯ ಕ್ಲಿನಿಕಲ್ ಟ್ರಯಲ್‌ಗಳು ಆರಂಭವಾಗಿವೆ. ಸೆಪ್ಟೆಂಬರ್ ಹೊತ್ತಿಗೆ ಲಸಿಕೆ ಪರಿಣಾಮಗಳ ಮಾಹಿತಿ ಸಿಗಲಿದೆ. 2022 ರ ಜನವರಿ ಫೆಬ್ರವರಿ ಹೊತ್ತಿಗೆ ಸ್ವದೇಶಿ ನಿರ್ಮಿತ ಮಕ್ಕಳ ಲಸಿಕೆ ಮುಕ್ತ ಮಾರುಕಟ್ಟೆಯಲ್ಲಿ ಸಿಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಅರೋರಾ ಈ ಹಿಂದೆ ತಿಳಿಸಿದ್ದರು.

ಇನ್ನು, ಸೆಪ್ಟೆಂಬರ್‌ ಹೊತ್ತಿಗೆ  12 ರಿಂದ 18 ವಯೋಮಾನದ ಮಕ್ಕಳಿಗೆ ಝೈಡಸ್‌ ಕ್ಯಾಡಿಲಾ ಲಸಿಕೆ ಸಿಗಲಿದೆ ಎಂದು ರಾಷ್ಟ್ರೀಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಎನ್‌.ಕೆ. ಅರೋರಾ ತಿಳಿಸಿದ್ದರು.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ ಎಂದು ಇತ್ತೀಚೆಗೆ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.


ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...