Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...