Homeಮುಖಪುಟಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡನೇ ಸಭೆ: 24 ಪಕ್ಷಗಳ ನಾಯಕರಿಗೆ ಆಹ್ವಾನ

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡನೇ ಸಭೆ: 24 ಪಕ್ಷಗಳ ನಾಯಕರಿಗೆ ಆಹ್ವಾನ

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧಪಕ್ಷಗಳು ಕಾರ್ಯತಂತ್ರ ರೂಪಿಸಲು ಮುಂದಿನ ವಾರ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಸಲಿದ್ದಾರೆ. ಈ ಸಭೆಗೆ 24 ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಿಂದ ಆಡಳಿತಾತ್ಮಕ ಸೇವೆಗಳ ನಿಯಂತ್ರಣವನ್ನು ಕಸಿದುಕೊಂಡಿರುವ ಕೇಂದ್ರದ ಸುಗ್ರೀವಾಜ್ಞೆಯ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿದ ನಂತರವೇ ಸಭೆಗೆ ಹಾಜರಾಗುವ ಬಗ್ಗೆ ನಿರ್ಧರಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.

ಜೂನ್ 23ರಂದು ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷ ಸಭೆಯಲ್ಲಿ 15 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕಾಂಗ್ರೆಸ್ ಸುಗ್ರೀವಾಜ್ಞೆಯನ್ನು ಸಾರ್ವಜನಿಕವಾಗಿ ವಿರೋಧಿಸದ ಕಾರಣ ಯಾವುದೇ ಮೈತ್ರಿಕೂಟದ ಭಾಗವಾಗಲು ”ಬಹಳ ಕಷ್ಟ” ಎಂದು ಎಎಪಿ ಘೋಷಿಸಿತ್ತು.

ಜುಲೈ 17 ರಂದು ಬೆಂಗಳೂರಿನಲ್ಲಿ ನಡೆಯುವ ಎರಡನೇ ಸಭೆಯಲ್ಲಿ ಭಾಗಿಯಾಗಲಿರುವ ಹೊಸ ಪಕ್ಷಗಳು: ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ, ವಿದುತಲೈ ಚಿರುತೈಗಲ್ ಕಚ್ಚಿ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಕೇರಳ ಕಾಂಗ್ರೆಸ್ (ಜೋಸೆಫ್) ಮತ್ತು ಕೇರಳ ಕಾಂಗ್ರೆಸ್ (ಮಣಿ)

ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ ಮತ್ತು ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ 2014ರ ಚುನಾವಣೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಾಗಿದ್ದವು.

ಮುಂದಿನ ವಾರದ ಸಭೆಯಲ್ಲಿ ಬಿಜೆಪಿಯೇತರ ಪಕ್ಷಗಳು ವಿರೋಧ ಪಕ್ಷದ ಹೆಸರು ಮತ್ತು ಸೀಟು ಹಂಚಿಕೆಯ ವಿವರಗಳನ್ನು ಚರ್ಚಿಸಬಹುದು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

24 ವಿರೋಧ ಪಕ್ಷಗಳು ಒಟ್ಟಾಗಿ ಸುಮಾರು 150 ಲೋಕಸಭಾ ಸದಸ್ಯರನ್ನು ಹೊಂದಿದ್ದು, ತಮ್ಮ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿವೆ ಎಂದು ಪಿಟಿಐ ವರದಿ ಮಾಡಿದೆ.

”ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳನ್ನು ಸೋಲಿಸುವ ವಿರೋಧ ಪಕ್ಷಗಳು ಒಂದಾಗುತ್ತಿವೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

0
ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ...