Homeಕರ್ನಾಟಕಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

- Advertisement -
- Advertisement -

‘ಮತೀಯವಾದಿಗಳು ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ, ಅವರಲ್ಲಿ ಮಾತಿಗೆ ಅವಕಾಶವಿಲ್ಲದಷ್ಟು ಪಾಂಡಿತ್ಯ, ಓದು, ವಿವೇಕ ಇತ್ತು; ಸಾಕಷ್ಟು ಇಂಗ್ಲಿಷ್ ಸಾಹಿತ್ಯವನ್ನೂ ಓದಿಕೊಂಡಿದ್ದರು. ಹಾಗಾಗಿಯೇ ಅವರು ಮತ-ಮೌಢ್ಯಗಳನ್ನು ವಿರೋಧಿಸಿದ್ದರು’ ಎಂದು ಬಿ.ಟಿ. ಲಲಿತಾ ನಾಯಕ್ ಹೇಳಿದರು.

ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬಿದ್ದು, ಈ ನೆನಪಿನಲ್ಲಿ ‘ಜಾಗೃತ ಕರ್ನಾಟಕ’ ಸಂಘಟನೆ ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ–50’ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾಕವಿ ಕುವೆಂಪು ಅವರ ಸಂದೇಶಗಳನ್ನು ಓದಿ, ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಅಸಮಾನತೆ, ಅಸಹಿಷ್ಣುತೆ, ಮೂಡನಂಬಿಕೆ, ಅನಾಚಾರದಂತಹ ಮಾನವ ವಿರೋಧಿ ಅನಿಷ್ಟ ಮತ್ತು ಮೌಢ್ಯಗಳಿಂದ ಹೊರಬರಲು ಸಾಧ್ಯ’ ಎಂದು ಅವರು ಪ್ರತಿಪಾದಿಸಿದರು.

‘ನಮ್ಮ ದೇಶದಲ್ಲಿರುವ ಅಷ್ಟೂ ಜನರು ಕುವೆಂಪು ಅವರ ಒಂದೊಂದು ಸಾಲು ಓದಿದರೂ ಇನ್ನೂ ಉಳಿಯಬಹುದಾದಷ್ಟು ಸಾಕಷ್ಟು ವಿಚಾರ ಕುವೆಂಪುರವರ ಬರಹದಲ್ಲಿವೆ. 50 ವರ್ಷಗಳ ಹಿಂದೆ ನಮ್ಮ ಮುಂದಿಟ್ಟ ಕ್ರಾಂತಿಕಾರಿ ಚಿಂತನೆಗಳು ಈಗಲೂ ಪ್ರಸ್ತುತ’ ಎಂದು ಲಲಿತಾ ನಾಯಕ್‌ ಹೇಳಿದರು.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸಿ ಆತಂಕ ಸೃಷ್ಟಿಸಿದ ಘಟನೆಯನ್ನು ಖಂಡಿಸಿದ ಅವರು, ‘ಇದರಲ್ಲಿ ಭಾಗಿಯಾದವರು ನಮ್ಮ ಶೂದ್ರ ಯುವಜನರು. ಆ ಯುವಕರು ಕುವೆಂಪು, ಅಂಬೇಡ್ಕರ್, ಲೋಹಿಯಾರವರನ್ನು ಓದಿಕೊಂಡಿದ್ದರೆ ಆ ರೀತಿ ಮಾಡುತ್ತಿರಲಿಲ್ಲ. ಕುವೆಂಪುರವರನ್ನು ಆಸ್ತಿಯನ್ನಾಗಿ, ಸಂಪತ್ತಾಗಿ ಮಾಡಕೊಳ್ಳದಿದ್ದರೆ ನಾವು ಹಿಮ್ಮುಖವಾಗಿ ಚಲಿಸುತ್ತೇವೆ. ಮೌಢ್ಯ ಅಳಿಯಬೇಕು ಎಂದಾದರೆ ಕುವೆಂಪು ಅವರ ಸಂದೇಶಗಳನ್ನು ಪಾಲಿಸೋಣ’ ಎಂದು ಕರೆಕೊಟ್ಟರು.

‘ಕುವೆಂಪು ಕ್ರಾಂತಿ ಕಹಳೆ’ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಜನ ಸಮೂಹ

‘ಕುವೆಂಪು ಕ್ರಾಂತಿ ಕಹಳೆ–50, ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಕೆ.ವಿ. ನಾರಾಯಣ ವಹಿಸಿದ್ದರು. ಚಿಂತಕರಾದ ಎಲ್. ಎನ್. ಮುಕುಂದರಾಜ್, ಡಾಲಿ ಧನಂಜಯ್ ಯುವ ಪ್ರತಿನಿಧಿಗಳಾದ ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ.ಮುಸ್ತಫಾ ಕೆ.ಎಚ್., ಮಹೇಶ ಸಿ., ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ, ಅಹಿಂದ ಜವರಪ್ಪ, ಪ್ರಸನ್ನ ಗೌಡ ಮತ್ತು ಜಾಗೃತ ಕರ್ನಾಟಕದ ಸಂಚಾಲಕ ಬಿ.ಸಿ. ಬಸವರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಲಿತ ವಿದ್ಯಾರ್ಥಿ ಒಕ್ಕೂಟ, ಮಾನಸ ಗಂಗೋತ್ರಿ; ಮೈಸೂರು ವಿವಿ ಸಂಶೋಧಕರ ಸಂಘ, ಸಮಾಜ ಪರಿವರ್ತನ ಜನಾಂದೋಲನ, ಮೈಸೂರು; ಕರುನಾಡ ರಕ್ಷಣಾ ವೇದಿಕೆ, ಮೈಸೂರು; ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ (ರಿ), ಕರ್ನಾಟಕ ಕಾವಲು ಪಡೆ (ರಿ), ಆಕೃತಿ ಪುಸ್ತಕ, ಬೆಂಗಳೂರು ಮತ್ತು ಜಂಗಮ ಕಲೆಕ್ಟಿವ್, ಬೆಂಗಳೂರು ಇವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆದಿದೆ.

ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭಕ್ಕೂ ಮೊದಲು ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...