Homeಕರ್ನಾಟಕಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

ಕೊಡಗಿನಲ್ಲಿ 4 ದಿನ ನಿಷೇಧಾಜ್ಞೆ; ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌

- Advertisement -
- Advertisement -

ಕೊಡಗು ಜಿಲ್ಲೆಯಾದ್ಯಂತ ಬುಧವಾರ (ಆಗಸ್ಟ್‌ 24) ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್‌ 27 ಸಂಜೆ ಆರು ಗಂಟೆವರೆಗೆ 144 ಸೆಕ್ಷನ್‌ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆ ಸಮಯದಲ್ಲಿ ಯಾವುದೇ ಪ್ರತಿಭಟನೆ ಜಾಥಾ, ಕಪ್ಪು ಬಟ್ಟೆ ಪ್ರದರ್ಶನ ಹಾಗೂ ಐದು ಜನಕ್ಕಿಂತ ಹೆಚ್ಚಿನ ಜನ ಒಂದೆಡೆ ಗುಂಪು ಸೇರದಂತೆ ಮತ್ತು ಓಡಾಡದಂತೆ ನಿರ್ಬಂಧಿಸಲಾಗಿದೆ.

ಇದೇ ಅಗಸ್ಟ್‌ 26ರಂದು ಮಡಿಕೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಡಿಕೇರಿ ಚಲೋ ಮತ್ತು ರಾಜ್ಯ ಸರ್ಕಾರ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಈಗ ಅವೆರಡೂ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಹಿಂದುತ್ವ ಸಂಘಟನೆಯ ಕಾರ್ಯಕರ್ತ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಡಿಕೇರಿ ಪೊಲೀಸ್ ಆಯುಕ್ತ ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆ ಕುರಿತು ಲಕ್ಷಾಂತರ ಜನ ಕಾಂಗ್ರೆಸ್ ಕಾರ್ಯಕರ್ತರು ಕೊಡಗಿಗೆ ಆಗಮಿಸುತ್ತಿದ್ದರು.

ಮತ್ತೊಂದಡೆ ರಾಜ್ಯ ಸರ್ಕಾರ ಸಹಿತ ತಮ್ಮ ಸರ್ಕರ ಸಾಧನೆಗಳನ್ನು ತಿಳಿಸಲು ಜನೋತ್ಸವವನ್ನು ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದವು. ಆದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಜಿಲ್ಲಾ ಎಸ್‌ಪಿ ಅಯ್ಯಪ್ಪ ಅವರ ಮನವಿ ಮೇರೆಗೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮೊಟ್ಟೆ ಎಸೆದವನು ಯಾವ ಪಕ್ಷದ ಕಾರ್ಯಕರ್ತ?

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡಿದ್ದಾರೆ.

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ. ಮಾಧ್ಯಮ ಜೊತೆ ಮಾತನಾಡಿರುವ ಸಂಪತ್‌, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಮೊಟ್ಟೆ ಪ್ರಕರಣದ ಬಳಿಕ ಕೊಡಗು ರಾಜಕೀಯ ವಿದ್ಯಮಾನಗಳ ಕೇಂದ್ರವಾಗಿದೆ. ಈಗ ಉಭಯ ಪಕ್ಷಗಳ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...