Homeಮುಖಪುಟಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

ಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆಯೊಂದರಲ್ಲಿ ಭಾಗವಹಿಸುವವರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಜಿಲ್ಲಾಡಳಿತವು ಮಧ್ಯಪ್ರದೇಶದ ಶಾಜಾಪುರ ನಗರದ ಮೂರು ವಲಯಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿದೆ.

ಮಗರಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಸ್ಥಳೀಯರು ಮೆರವಣಿಗೆ ನಡೆಸುವಾಗ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಸೂಕ್ತ ಭದ್ರತೆ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಶಾಜಾಪುರ ಕಲೆಕ್ಟರ್ ರಿಜು ಬಫ್ನಾ ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ಮಗರಿಯಾ, ಕಚ್ಚಿವಾಡ ಮತ್ತು ಲಾಲ್ಪುರ ಪ್ರದೇಶಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಸದ್ಯ ಸ್ಥಳದಲ್ಲಿ ಶಾಂತಿಯುತ ವಾತಾವರಣವಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಘಟನೆ?

ಪ್ರಥಮ ಮಾಹಿತಿ ವರದಿಯ ಪ್ರಕಾರ, ಶಾಜಾಪುರ ನಗರದ ನಾಗ್-ನಾಗಿನ್ ರಸ್ತೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಮೆರವಣಿಗೆ ಮಾಡುತ್ತಿದ್ದ ಗುಂಪನ್ನು ಕೆಲವರು ತಡೆದಿದ್ದಾರೆ. ಈ ಪ್ರದೇಶದಲ್ಲಿ ಮೆರವಣಿಗೆ ನಡೆಸದಂತೆ ಆಗ್ರಹಿಸಿದ್ದಾರೆ. ಈ ವೇಳೆ ಜನರ ಗುಂಪು ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಹಲ್ಲೆ ನಡೆಸಿ ಅವರ ಮೇಲೆ ಕಲ್ಲುಗಳನ್ನು ತೂರಲಾಗಿದ್ದು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ ಮತ್ತು ಮನೆಗಳ ಛಾವಣಿಗಳ ಮೇಲಿನಿಂದ ಕಲ್ಲುಗಳನ್ನು ತೂರಲಾಗಿದೆ ಎಂದು ಮೋಹಿತ್ ರಾಥೋಡ್ ಎಂಬಾತ ದೂರು ನೀಡಿದ್ದಾನೆ.

ಮೋಹಿತ್ ರಾಥೋಡ್ ನೀಡಿದ ದೂರಿನ ಮೇರೆಗೆ ಪೊಲೀಸರು 24 ಗುರುತಿಸಲ್ಪಟ್ಟ ಜನರು ಮತ್ತು 15-20 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆಯ ನಂತರ ಉಜ್ಜಯಿನಿಯ ವಿಭಾಗೀಯ ಆಯುಕ್ತ ಸಂಜಯ್ ಗೋಯಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಸಂತೋಷ್ ಕುಮಾರ್ ಸಿಂಗ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪೊಲೀಸರು ಘಟನೆ ನಡೆದ ಪ್ರದೇಶದಲ್ಲಿ ಮಾರ್ಚ್‌ ನಡೆಸುತ್ತಾ ಧ್ವನಿವರ್ಧಕಗಳ ಮೂಲಕ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ಶಾಜಾಪುರ ಶಾಸಕ ಅರುಣ್ ಭೀಮವಾಡ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...