Homeಮುಖಪುಟಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

ಮಧ್ಯಪ್ರದೇಶ: ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆಯೊಂದರಲ್ಲಿ ಭಾಗವಹಿಸುವವರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಜಿಲ್ಲಾಡಳಿತವು ಮಧ್ಯಪ್ರದೇಶದ ಶಾಜಾಪುರ ನಗರದ ಮೂರು ವಲಯಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿದೆ.

ಮಗರಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಸ್ಥಳೀಯರು ಮೆರವಣಿಗೆ ನಡೆಸುವಾಗ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಸೂಕ್ತ ಭದ್ರತೆ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಶಾಜಾಪುರ ಕಲೆಕ್ಟರ್ ರಿಜು ಬಫ್ನಾ ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ಮಗರಿಯಾ, ಕಚ್ಚಿವಾಡ ಮತ್ತು ಲಾಲ್ಪುರ ಪ್ರದೇಶಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಸದ್ಯ ಸ್ಥಳದಲ್ಲಿ ಶಾಂತಿಯುತ ವಾತಾವರಣವಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಘಟನೆ?

ಪ್ರಥಮ ಮಾಹಿತಿ ವರದಿಯ ಪ್ರಕಾರ, ಶಾಜಾಪುರ ನಗರದ ನಾಗ್-ನಾಗಿನ್ ರಸ್ತೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ಮೆರವಣಿಗೆ ಮಾಡುತ್ತಿದ್ದ ಗುಂಪನ್ನು ಕೆಲವರು ತಡೆದಿದ್ದಾರೆ. ಈ ಪ್ರದೇಶದಲ್ಲಿ ಮೆರವಣಿಗೆ ನಡೆಸದಂತೆ ಆಗ್ರಹಿಸಿದ್ದಾರೆ. ಈ ವೇಳೆ ಜನರ ಗುಂಪು ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಹಲ್ಲೆ ನಡೆಸಿ ಅವರ ಮೇಲೆ ಕಲ್ಲುಗಳನ್ನು ತೂರಲಾಗಿದ್ದು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ ಮತ್ತು ಮನೆಗಳ ಛಾವಣಿಗಳ ಮೇಲಿನಿಂದ ಕಲ್ಲುಗಳನ್ನು ತೂರಲಾಗಿದೆ ಎಂದು ಮೋಹಿತ್ ರಾಥೋಡ್ ಎಂಬಾತ ದೂರು ನೀಡಿದ್ದಾನೆ.

ಮೋಹಿತ್ ರಾಥೋಡ್ ನೀಡಿದ ದೂರಿನ ಮೇರೆಗೆ ಪೊಲೀಸರು 24 ಗುರುತಿಸಲ್ಪಟ್ಟ ಜನರು ಮತ್ತು 15-20 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆಯ ನಂತರ ಉಜ್ಜಯಿನಿಯ ವಿಭಾಗೀಯ ಆಯುಕ್ತ ಸಂಜಯ್ ಗೋಯಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಸಂತೋಷ್ ಕುಮಾರ್ ಸಿಂಗ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪೊಲೀಸರು ಘಟನೆ ನಡೆದ ಪ್ರದೇಶದಲ್ಲಿ ಮಾರ್ಚ್‌ ನಡೆಸುತ್ತಾ ಧ್ವನಿವರ್ಧಕಗಳ ಮೂಲಕ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ಶಾಜಾಪುರ ಶಾಸಕ ಅರುಣ್ ಭೀಮವಾಡ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ: ತನಿಖೆಯ ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...