Homeಕರ್ನಾಟಕಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

- Advertisement -
- Advertisement -

ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ತಿಳಿಸಿದ್ದಾರೆ.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ವಿವರಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್. ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದು ಮಾಹಿತಿ ನೀಡಿದ್ದಾರೆ.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂದಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್‌ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ? ಎಂದು ಕೇಳಿದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...