Homeರಾಷ್ಟ್ರೀಯವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ 'ಜಾತ್ಯತೀತ ಜನತಾದಳ' ನಾಯಕ ಕುಮಾರಸ್ವಾಮಿ

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

- Advertisement -
- Advertisement -

ಭಗವದ್ಗೀತೆಯನ್ನು ‘ಪವಿತ್ರ ಗ್ರಂಥ’ ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, “ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು, ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು” ಎಂದು ವಿನಂತಿಸಿದ್ದಾರೆ.

“ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು ಉತ್ಕೃಷ್ಟಗೊಳಿಸುತ್ತದೆ ಮತ್ತು ನಮ್ಮ ಯುವಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಅತ್ಯಂತ ಶ್ರೇಷ್ಠ, ಮಾನವೀಯತೆಯ ಭಾರತೀಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ ಎಂದು ನಾನು ಬಲವಾಗಿ ನಂಬಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಪತ್ರಕ್ಕೆ ಬಿಜೆಪಿ ಬೆಂಬಲಿಗರಿಂದ ಮೆಚ್ಚುಗೆ

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪತ್ರ ಬರೆದಿರುವುದಕ್ಕೆ ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯ ಹಿಂದುತ್ವವಾದ ಬೆಂಬಲಿಗರು ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಧನ್ಯವಾದಗಳು ಸರ್, ನಮ್ಮ ಸನಾತನ ಸಂಸ್ಕೃತಿ ಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರುವುದು ಉತ್ತಮ” ಎಂದು ಫೇಸ್‌ಬುಕ್‌ ಬಳಕೆದಾರರೊಬ್ಬರು ಬರೆದಿದ್ದಾರೆ.

“ನಿಮ್ಮ ಮೇಲೆ ಇದ್ದ ಅಭಿಪ್ರಾಯ ಬದಲಾಯ್ತು ಅಣ್ಣ, ನಿಮ್ಮ ಧರ್ಮ ನಿಷ್ಠೆಗೆ ನನ್ನ ನಮನಗಳು” ಎಂದು ಬಿಜೆಪಿ ಬೆಂಬಲಿಗರೊಬ್ಬರು ಮತ್ತು “ನಮ್ಮದೇಶ ಗುರುಕುಲಗಳ ತಾಣ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಪ್ರವಚನಗಳು ನಡೆಯುತ್ತಿತ್ತು. ಕುತಂತ್ರಿಗಳು ಮತ್ತು ಧರ್ಮದ್ರೋಹಿಗಳಿಂದ ನಮ್ಮ ದೇಶ ಹಾಳಾಗಿತ್ತು. ಸದ್ಯ ಈಗಲಾದರೂ ಎಲ್ಲಾ ಹಿಂದುಗಳು ಒಟ್ಟುಗೂಡಲಿ. ಅಭಿವೃದ್ಧಿಯು ನಡೆಯಲಿ ಧರ್ಮವು ಬೆಳೆಯಲಿ” ಮತ್ತೊಬ್ಬ ಬಳಕೆದಾರ ಮೆಚ್ಚುಗೆ ಸೂಚಿಸಿದ್ದಾರೆ.

ಕುಮಾರಸ್ವಾಮಿ ಪೋಸ್ಟ್‌ಗೆ ವಿರೋಧ:

ಕುಮಾರಸ್ವಾಮಿ ಅವರ ಪೋಸ್ಟ್‌ಗೆ ಬಲಪಮಥೀಯರು ವಿರೊಧ ವ್ಯಕ್ತಪಡಿಸಿದ್ದರೆ, ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ. “ಭಗವದ್ಗೀತೆ ಗಿಂತಲೂ ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂವಿಧಾನದ ಪಾಠ ಬಹಳ ಮುಖ್ಯ” ಎಂದು ಪೇಸ್‌ಬುಕ್ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಅರ್‌ಎಸ್‌ಎಸ್ ಅನ್ನು ಮೆಚ್ಚಿಸಲು ಏನೆಲ್ಲಾ ಲಾಗ ಹೋಡೆಯಬಹುದು ಎಂದು ಇದರಲ್ಲಿ ಗೊತ್ತಾಗುತ್ತೆ. ಒಂದು ನೆನಪಿಡಿ ಕುಮಾರಣ್ಣ.. ನಿಮ್ಮ ಕೈಗೆ ಕೊನೆಗೆ ಅವರು ಕೊಡೋದು ಚೆಂಬು ಮಾತ್ರ” ಎಂದು ಒಬ್ಬರು, “ಅಲ್ಪವಾದರೂ ಸ್ವಾಭಿಮಾನ ಇರಲಿ, ಒಬ್ಬ ಕನ್ನಡಿಗನಾಗಿ ಹೇಳ್ತಿದ್ದೇನೆ ಕುಮಾರಣ್ಣ… ಅಧಿಕಾರಕ್ಕಾಗಿ ನೀವೂ ಒಂದು ಪಕ್ಷಕ್ಕೆ ಇಷ್ಟೊಂದು ಬಕೇಟು ಹಿಡಿಯುತ್ತಿರುವುದು ನನಗಿಷ್ಟ ಇಲ್ಲ” ಎಂದು ಮತ್ತೊರ್ವ ಬಳಕೆದಾರ ಬೇಸರ ಹೊರಹಾಕಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...