Homeಮುಖಪುಟಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ...10 ಪಾಯಿಂಟ್ಸ್‌‌

ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಪ್ರತಿಭಟನೆಗಳ ಮಧ್ಯೆ ಪಂಜಾಬ್‌‌ ಚುನಾವಣಾ ಪ್ರಚಾರ ರ್‍ಯಾಲಿಯನ್ನು ರದ್ದುಗೊಳಿಸಿ ವಾಪಾಸಾಗಿದ್ದಾರೆ. ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಇದನ್ನು ‘ಭದ್ರತಾ ಲೋಪ’ ಎಂದು ಕರೆದಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ದೂರಿದೆ. ಆದರೆ ಇದನ್ನು ನಿರಾಕರಿಸಿರುವ ಪಂಜಾಬ್‌ ಮುಖ್ಯಮಂತ್ರಿ, ತಮ್ಮ ಸರ್ಕಾರದ ಕಡೆಯಿಂದ ಯಾವುದೇ ಭದ್ರತಾ ಲೋಪ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದೀಗ ವಿವಾದ ಸುಪ್ರೀಂ ಕೋರ್ಟ್‌ಗೆ ತಲುಪಿದ್ದು, ಶುಕ್ರವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಈ ಮಧ್ಯೆ, ರಾಜ್ಯ ಸರ್ಕಾರವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.

ಸುದ್ದಿಯ ಟಾಪ್ 10 ಅಂಶಗಳು ಹೀಗಿವೆ:

  • ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಘಟನೆಗೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ, ತಕ್ಷಣವೇ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ಕ್ರಮ ಗೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮುಂದಕ್ಕೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
  • ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಅರ್ಜಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಮಣಿಂದರ್‌‌ ಸಿಂಗ್ ಅವರನ್ನು ಕೇಳಿದ್ದು, ಅರ್ಜಿಯನ್ನು ನಾಳೆ (ಶುಕ್ರವಾರ) ವಿಚಾರಣೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

  • ಪಂಜಾಬ್ ಸರ್ಕಾರ ಕೂಡಾ ಘಟನೆಯ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮೆಹ್ತಾಬ್ ಗಿಲ್ ಹಾಗೂ ಗೃಹ ವ್ಯವಹಾರಗಳು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಈ ಸಮಿತಿಯಲ್ಲಿದ್ದು ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದ್ದಾರೆ.
  • ಚುನಾವಣಾ ರ್‍ಯಾಲಿಗಾಗಿ ತೆರಳುತ್ತಿದ್ದ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ 20 ನಿಮಿಷಗಳ ಕಾಲ ತಡೆಯಲ್ಪಟ್ಟಿದ್ದರು.
  • ಈ ಮೊದಲು ಹೆಲಿಕಾಪ್ಟರ್ ಮೂಲಕ ರ್‍ಯಾಲಿಗೆ ತೆರಳುವುದು ಎಂದು ನಿರ್ಧರಿಸಲಾಗಿತ್ತು. ಆದರೆ ಮೋಡ ಕವಿದ ವಾತಾವರಣದ ಕಾರಣ ಅದನ್ನು ಕೈಬಿಟ್ಟು, ಸುಮಾರು ಎರಡು ಗಂಟೆಗಳ ಕಾಲ 111 ಕಿಮೀ ರಸ್ತೆ ಮಾರ್ಗದಿಂದ ತೆರಳುವುದಾಗಿ ನಿರ್ಧರಿಸಲಾಗಿತ್ತು. ಆದರೆ ಅವರ ಬೆಂಗಾವಲನ್ನು ರ್‍ಯಾಲಿಗಿಂತ 10 ಕಿ.ಮೀ ದೂರದಲ್ಲಿ ತಡೆಯಲಾಗಿತ್ತು.
  • ಪ್ರಧಾನಿಯ ಕಾರು ಫ್ಲೈಓವರ್‌ನಲ್ಲಿ ಕಾಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ, ಬಿಜೆಪಿಯ ದ್ವಜವನ್ನು ಬೀಸುತ್ತಾ, ನರೇಂದ್ರ ಮೋದಿ ಜಿಂದಾಬಾದ್ ಎಂದು ಘೋಷಣೆ ಕೂಗುವ ಗುಂಪೊಂದು ಪ್ರಧಾನಿಯ ಕಾರಿನ ಹತ್ತಿರದಲ್ಲೇ ಇರುವುದನ್ನು ಕಾಣಬಹುದು.

ಇದನ್ನೂ ಓದಿ:ಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

  • ವಿಶೇಷ ರಕ್ಷಣಾ ಗುಂಪಿನ ಸದಸ್ಯರು ವಾಹನದ ಸುತ್ತಲೂ ವೃತ್ತಾಕಾರದಲ್ಲಿ ನಿಂತಿದ್ದರೆ, ಪ್ರಧಾನಿ ಒಳಗೆ ಕುಳಿತಿರುವುದನ್ನು ಕಾಣಬಹುದು. ಪ್ರಧಾನ ಮಂತ್ರಿಯವರ ಕಾರಿಗೆ ರಕ್ಷಣೆಯ ಮತ್ತೊಂದು ಪದರವನ್ನು ರೂಪಿಸಲು ಮೋಟಾರ್‌ಕೇಡ್‌ನಲ್ಲಿರುವ ಇತರ ಕಾರುಗಳನ್ನು ಸ್ಥಳಾಂತರಿಸಲಾಯಿತು.
  • ಪ್ರೋಟೋಕಾಲ್‌ಗೆ ಅನುಗುಣವಾಗಿ ಪ್ರಧಾನಿ ಭೇಟಿಗೆ ಆಕಸ್ಮಿಕ ಮಾರ್ಗವನ್ನು ಸಿದ್ಧಪಡಿಸುವಲ್ಲಿ ಪಂಜಾಬ್ ಪೊಲೀಸರು ವಿಫಲವಾಗಿದ್ದಾರೆ ಎಂದು ಗೃಹ ಸಚಿವಾಲಯ ಟೀಕಿಸಿದೆ.
  • ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್‌ ಪಕ್ಷವು ಪ್ರಧಾನಿಯನ್ನು ಕೊಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
  • ಆದರೆ ಇದನ್ನು ಕಾಂಗ್ರೆಸ್ ನಿರಾಕರಿಸಿದ್ದು, ರ್‍ಯಾಲಿಗೆ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ ರಸ್ತೆ ಮಾರ್ಗವು ಅವರ ಮೂಲ ವೇಳಾಪಟ್ಟಿಯ ಭಾಗವಾಗಿ ಇರಲಿಲ್ಲ ಎಂದು ಹೇಳಿದೆ.
  • ಪಂಜಾಬ್ ಮುಖ್ಯಮಂತ್ರಿ ಚನ್ನಿ ಅವರು, “ಒಬ್ಬ ಪಂಜಾಬಿಯಾಗಿ, ಪ್ರಧಾನಿಯನ್ನು ರಕ್ಷಿಸಲು ನಾನು ಪ್ರಾಣ ಕೊಡಲು ತಯಾರಿದ್ದೇನೆ. …ಆದರೆ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಯಾವುದೇ ಭದ್ರತಾ ಲೋಪವಾಗಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...