Homeಮುಖಪುಟಸ್ವಾತಂತ್ರ್ಯ ದಿನಕ್ಕೆ ಕೆಂಪುಕೋಟೆಗೆ ಭದ್ರತೆ: ದೊಡ್ಡ ಕಂಟೈನರ್‌ಗಳ ಮೂಲಕ ಗೋಡೆ ನಿರ್ಮಾಣ

ಸ್ವಾತಂತ್ರ್ಯ ದಿನಕ್ಕೆ ಕೆಂಪುಕೋಟೆಗೆ ಭದ್ರತೆ: ದೊಡ್ಡ ಕಂಟೈನರ್‌ಗಳ ಮೂಲಕ ಗೋಡೆ ನಿರ್ಮಾಣ

- Advertisement -
- Advertisement -

ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೆ ಐತಿಹಾಸಿನ ಕೆಂಪು ಕೋಟೆ ಪ್ರವೇಶ ರಸ್ತೆಯಲ್ಲಿ ದೊಡ್ಡ ಕಂಟೈನರ್‌ಗಳನ್ನು ನಿಲ್ಲಿಸುವ ಮೂಲಕ ಬೃಹತ್ ಗೋಡೆಗಳನ್ನು ಕಟ್ಟಿ ರಕ್ಷಣಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವರ್ಷದ ಗಣರಾಜ್ಯೋತ್ಸವದಂದು ರೈತ ಹೋರಾಟದ ಟ್ರಾಕ್ಟರ್‌ ರ್ಯಾಲಿಯಲ್ಲಿ ಘರ್ಷಣೆ ಸಂಭವಿಸಿದ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ರಕ್ಷಣೆ ಒದಗಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಜನವರಿ 26 ರಂದು ರೈತರು ಕಿಸಾನ್ ಗಣರಾಜ್ಯೋತ್ಸವ ಆಚರಿಸಲು ಕರೆ ನೀಡಿದ್ದರು. ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್ ನಡೆಯುತ್ತಿದ್ದ ಸಂದರ್ಭದಲ್ಲಿ ದೀಪ್ ಸಿಧು ಬಣದ ರೈತರು ನಿಯಮ ಉಲ್ಲಂಘಿಸಿ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದರು. ಆಗ ಘರ್ಷಣೆ ಸಂಭವಿಸಿತ್ತು.

ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ದ್ರೋಣ್ ದಾಳಿ ನಡೆದ ಹಿನ್ನೆಲೆಯಲ್ಲಿಯೂ  ಹೆಚ್ಚಿನ ಬಿಗಿ ಭದ್ರತೆ ಮಾಡಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ತಿಳಿಸಿದೆ.

ಪ್ರತಿವರ್ಷ ಕೆಂಪು ಕೋಟೆ ಮೇಲಿಂದ ದೇಶವನ್ನುದ್ದೇಶಿಸಿ ಪ್ರಧಾನ ಮಂತ್ರಿಗಳು ಭಾಷಣ ಮಾಡುತ್ತಾರೆ. ಈ ಬಾರಿ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ನರೇಂದ್ರ ಮೋದಿ ಮನವಿ ಮಾಡಿದ್ದರು.


ಇದನ್ನೂ ಓದಿ: ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...