Homeಮುಖಪುಟಪುಲ್ವಾಮಾ ಬಳಿ 2019ರ ಮಾದರಿಯ ಸ್ಪೋಟಕ ದಾಳಿಯನ್ನು ವಿಫಲಗೊಳಿಸಿದ ಭದ್ರತಾ ಪಡೆ

ಪುಲ್ವಾಮಾ ಬಳಿ 2019ರ ಮಾದರಿಯ ಸ್ಪೋಟಕ ದಾಳಿಯನ್ನು ವಿಫಲಗೊಳಿಸಿದ ಭದ್ರತಾ ಪಡೆ

ಕಳೆದ ವರ್ಷ ಫೆಬ್ರವರಿ 14 ರಂದು ಪುಲ್ವಾಮ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಭಯೋತ್ಪಾದಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಸಿಎಆರ್‌ಪಿಎಫ್ ಸೈನಿಕರು ಸಾವನ್ನಪ್ಪಿದ್ದರು. 

- Advertisement -
- Advertisement -

ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 2019 ಮಾದರಿಯ ಕಾರ್‌ಬಾಂಬ್ ದಾಳಿಯ ಸಂಚನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಕಾರಿನಲ್ಲಿ 20 ಕೆಜಿಗಿಂತ ಅಧಿಕ ತೂಕದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸಾಗಿಸಲಾಗುತ್ತಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬುಧವಾರ ರಾತ್ರಿ ನಕಲಿ ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಿಳಿ ಹ್ಯುಂಡೈ ಸ್ಯಾಂಟ್ರೊ ಕಾರನ್ನು ಚೆಕ್ ಪಾಯಿಂಟ್‌ನಲ್ಲಿ ನಿಲ್ಲಿಸಲು ಭದ್ರತಾ ಪಡೆಗಳು ಸೂಚಿಸಿದ್ದರು. ಆದರೆ ಕಾರು ತನ್ನ ವೇಗವನ್ನು ಹೆಚ್ಚಿಸಿ ಬ್ಯಾರಿಕೇಡ್ ಅನ್ನು ತಳ್ಳಿಕೊಂಡು ಹೋಗಲು ಪ್ರಯತ್ನಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

“ಭದ್ರತಾ ಪಡೆಗಳು ಗುಂಡು ಹಾರಿಸಿದವು. ಆದರೆ ಚಾಲಕ ತಪ್ಪಿಸಿಕೊಂಡಿದ್ದಾನೆ, ಸಂಭವನೀಯ ದಾಳಿಯ ಬಗ್ಗೆ ನಮಗೆ ಗುಪ್ತಚರದಿಂದ ಮಾಹಿತಿ ಸಿಕ್ಕಿದೆ. ನಾವು ನಿನ್ನೆಯಿಂದ ಐಇಡಿ ಹೊಂದಿರುವ ವಾಹನವನ್ನು ಹುಡುಕುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.

ಆ ನಂತರ ಬಾಂಬ್ ನಿಷ್ಕ್ರಿಯ ದಳ ಐಇಡಿ ಹಾಗೂ ಕಾರನ್ನು ಸ್ಪೋಟಿಸಿತಾದರೂ, ಭಾರಿ ಸ್ಫೋಟದಿಂದಾಗಿ ಈ ಪ್ರದೇಶದ ಹಲವಾರು ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.

ಕಾರ್ಯಾಚರಣೆಯಲ್ಲಿ ಸೇನೆ, ಪೊಲೀಸ್ ಮತ್ತು ಅರೆಸೈನಿಕ ಪಡೆಗಳ ಭಾಗವಹಿಸಿದ್ದವು ಎಂದು ವಿಜಯ್ ಕುಮಾರ್‌ ಹೇಳಿದರು.

ಕಳೆದ ವರ್ಷ ಫೆಬ್ರವರಿ 14 ರಂದು ಪುಲ್ವಾಮ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಸಿಎಆರ್‌ಪಿಎಫ್ ಸೈನಿಕರು ಸಾವನ್ನಪ್ಪಿದ್ದರು

ಕಳೆದ ಎರಡು ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯು ಹೆಚ್ಚಾಗಿದ್ದು; ಅಧಿಕಾರಿಗಳು ಸೇರಿದಂತೆ 30 ಭದ್ರತಾ ಪಡೆಗಳ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.


ಓದಿ: ಪುಲ್ವಾಮಾ ದಾಳಿ: ಮೂರು ಪ್ರಶ್ನೆಗಳನ್ನು ಎತ್ತಿದ ರಾಹುಲ್‌ ಗಾಂಧಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...