Homeಮುಖಪುಟರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ...

ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ ಅಲರ್ಟ್‌

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಮಖಂಡರು ಮತ್ತು ಕೇಂದ್ರ ಸರಕಾರದ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲಿ ಕೇಂದ್ರದ ಐದು ವರ್ಷಗಳ ಎಂಎಸ್‌ಪಿ ಗ್ಯಾರೆಂಟಿಯನ್ನು ತಿರಸ್ಕರಿಸಿ ರೈತ ಮುಖಂಡರು ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪಂಜಾಬ್-ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ. ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಹರ್ಯಾಣದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರ ಸತಾಯಗತಾಯ ಪ್ರಯತ್ನಿಸುತ್ತಿದೆ.

ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ. ದೆಹಲಿಯಲ್ಲಿ ಕೂಡ ಭಾರೀ ಜನಸಂದಣಿ ಕಂಡು ಬಂದಿದೆ. ಶಂಭು ಗಡಿಯಲ್ಲಿ 14,000 ಜನರು ಮತ್ತು 1,200 ಟ್ರಾಕ್ಟರ್‌ಗಳಿದೆ. ರೈತರ ದೆಹಲಿ ಚಲೋ ಹಿನ್ನೆಲೆ ರೈತರಿಂದ ಮಣ್ಣು ತೆಗೆಯುವ ಉಪಕರಣಗಳನ್ನು ವಶಪಡಿಸಿಕೊಳ್ಳಿ ಎಂದು ಪಂಜಾಬ್‌ ಪೊಲೀಸರಿಗೆ ಹರ್ಯಾಣ ಡಿಜಿಪಿ ಆಗ್ರಹಿಸಿದ್ದಾರೆ.

ರೈತರು ಶಂಭು ಗಡಿಯಿಂದ ದೆಹಲಿಯತ್ತ ಮೆರವಣಿಗೆ ಆರಂಭಿಸಿದಾಗ ಹರಿಯಾಣ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ 14 ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಪಟಿಯಾಲಾ ರೇಂಜ್‌ನ ಡಿಐಜಿ ಎಚ್‌ಎಸ್ ಭುಲ್ಲಾರ್ ಬುಧವಾರ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಮತ್ತೆ ರೈತ ಮುಖಂಡರನ್ನು ಎಂಎಸ್‌ಪಿ ವಿಷಯದ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ. ಐದನೇ ಸುತ್ತಿನಲ್ಲಿ ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ರೈತರ ಮೇಲಿನ ಎಫ್‌ಐಆರ್‌ ಸೇರಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಶಂಭು ಗಡಿಯಲ್ಲಿ ರೈತರೊಂದಿಗೆ ಮಾತನಾಡುತ್ತಾ, ನೀವು ಹಿಂದೆ ಇರಿ, ನಾವು ಮೆರವಣಿಗೆಯನ್ನು ಮುನ್ನಡೆಸುತ್ತೇವೆ. ಯಂತ್ರಗಳನ್ನು ನಿಲ್ಲಿಸೋಣ ಮತ್ತು ನಾವು ನಡೆಯೋಣ ಎಂದು ಹೇಳಿದ್ದಾರೆ.

ಎಲ್ಲ ಕಡೆಯೂ ರಾಜಕೀಯ ನಡೆಯುತ್ತಿದೆ. ಪಂಜಾಬ್ ಈ ಯಂತ್ರಗಳನ್ನು/ಪ್ರತಿಭಟನಕಾರರನ್ನು ಮೊದಲೇ ಏಕೆ ನಿಲ್ಲಿಸಲಿಲ್ಲ? ಎಂದು ಪಂಜಾಬ್‌ ಹರ್ಯಾಣ ಹೈಕೋರ್ಟ್‌ ಪ್ರಶ್ನಿಸಿತ್ತು. ಹರ್ಯಾಣ ಸರ್ಕಾರವು ಬುಧವಾರ ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದು, ರೈತರು ತಮ್ಮ ಉಪಕರಣಗಳೊಂದಿಗೆ ಮುಂದುವರಿಯುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿದೆ.

ಪ್ರತಿಭಟನೆಯ ಬಗ್ಗೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರಾದ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಅವರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದಾಗಿ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಬಹುದು. ಇದಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಗಡಿ ಪ್ರದೇಶವಾದ ಶಂಭು ಮತ್ತು ಖಾನೌರಿಯಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ.

ರೈತ ಸಂಘಟನೆಗಳು ದೆಹಲಿಯತ್ತ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಶಂಭು ಗಡಿಯಲ್ಲಿ ರೈತ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿವೆ. ಒಂದು ಕಡೆ, ಅಗೆಯುವ ಯಂತ್ರಗಳು ಮತ್ತು ಟ್ರ್ಯಾಕ್ಟರ್‌ಗಳ ಸಾಲು ನಿಂತಿದ್ದರೆ, ಇನ್ನೊಂದು ಕಡೆ ಬ್ಯಾರಿಕೇಡ್‌ಗಳನ್ನು ಮುರಿದು ರೈತರು ಹರ್ಯಾಣಕ್ಕೆ ಪ್ರವೇಶಿಸುವ ಬಗ್ಗೆ ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ಭಾರೀ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ದೆಹಲಿ ಪೊಲೀಸ್ ಸಿಬ್ಬಂದಿಗಳ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್‌ನಂತಹ ಐತಿಹಾಸಿಕ ಸ್ಥಳಗಳಿಗೆ ಭಾರೀ ಭದ್ರತೆ ಒದಗಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಗಡಿಗಳು ಸಂಘರ್ಷದ ಕೇಂದ್ರ ಬಿಂದುಗಳಾಗಿವೆ. ಅಗೆಯುವ ಯಂತ್ರಗಳನ್ನು ಹೊಂದಿದ ರೈತರು, ಹರ್ಯಾಣ ಭದ್ರತಾ ಸಿಬ್ಬಂದಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ಭೇದಿಸಲು ನಿರ್ಧರಿಸಿದ್ದಾರೆ.

ರೈತರ ಬೇಡಿಕೆಯೇನು? 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಫೆಬ್ರವರಿ 13ರಿಂದ ಪಂಜಾಬ್-ಹರಿಯಾಣ ಗಡಿ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರು ಉದ್ದೇಶಿಸಿದ್ದ ದೆಹಲಿ ಚಲೋಗೆ ಬಿಜೆಪಿ ಸರಕಾರ ತಡೆದಿದ್ದು, ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್ ಮತ್ತು ಘಾಜಿಪುರ ಬಾರ್ಡರ್‌ಗಳಲ್ಲಿ ಮುಳ್ಳುತಂತಿ, ಮೊಳೆಗಳು, ಸಿಮೆಂಟ್ ಮತ್ತು ಕಲ್ಲಿನ ಗೋಡೆಗಳನ್ನು, ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರೈತರು ದೆಹಲಿಗೆ ತೆರಳದಂತೆ ತಡೆದಿದ್ದರು.

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: Fact check: ರಾಜ್ಯ ಬಜೆಟ್‌ಗೆ ಕೋಮು ಬಣ್ಣ ಬಳಿದ ಸಂಪಾದಕ, ಸತ್ಯಾಂಶ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...