Homeಮುಖಪುಟಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಮೂವರು ನಕ್ಸಲರ ಹತ್ಯೆ

ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಮೂವರು ನಕ್ಸಲರ ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಕರೇಗುಟ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಬೃಹತ್ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಗುರುವಾರ (ಏ.24) ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 21ರಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಛತ್ತೀಸ್‌ಗಢದ ನಾರಾಯಣಪುರದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಶರಣಾದ ಬಳಿಕ ಏಪ್ರಿಲ್ 21 ಸೋಮವಾರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಇಂಡೋ ಟಿಬೆಟಿಯನ್ ಗಡಿ ಪೊಲೀಸರು (ಐಟಿಬಿಪಿ) ತಿಳಿಸಿದ್ದಾರೆ.

ಇಲ್ಲಿಯವರೆಗೆ, ಎನ್‌ಕೌಂಟರ್ ನಡೆದ ಸ್ಥಳದಿಂದ ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಭೀಕರ ಗುಂಡಿನ ಚಕಮಕಿಯಲ್ಲಿ ಹಲವಾರು ಇತರ ಮಾವೋವಾದಿಗಳು ಸಾವನ್ನಪ್ಪಿರುವ ಶಂಕೆಯಿದೆ ಎಂದು ವರದಿಗಳು ಹೇಳಿವೆ.

ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಪ್ರಾರಂಭಿಸಲಾದ ಅತಿದೊಡ್ಡ ದಂಗೆ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ, ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌), ರಾಜ್ಯ ಪೊಲೀಸರ ಎಲ್ಲಾ ಘಟಕಗಳು, ಹಾಗೆಯೇ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಅದರ ಕಮಾಂಡೋ ಬೆಟಾಲಿಯನ್ಸ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸೇರಿದಂತೆ ವಿವಿಧ ಘಟಕಗಳಿಗೆ ಸೇರಿದ ಸುಮಾರು 10,000 ಭದ್ರತಾ ಸಿಬ್ಬಂದಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಈ ಕಾರ್ಯಾಚರಣೆಗೆ ತೆಲಂಗಾಣ ಪೊಲೀಸರು ಕೂಡ ಸಹಕಾರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

“ಮಾವೋವಾದಿಗಳ ಪ್ರಬಲ ಮಿಲಿಟರಿ ಗುಂಪಾದ ಬೆಟಾಲಿಯನ್ ನಂ.1 ಮತ್ತು ತೆಲಂಗಾಣ ರಾಜ್ಯ ಮಾವೋವಾದಿಗಳ ಸಮಿತಿಯ ಹಿರಿಯ ಕೇಡರ್‌ಗಳ ಉಪಸ್ಥಿತಿಯ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಇದು ಇನ್ನೂ ಹಲವು ದಿನಗಳವರೆಗೆ ಮುಂದುವರೆಯಲಿದೆ ಎಂದು ವರದಿಗಳು ಹೇಳಿವೆ.

“ದಟ್ಟ ಕಾಡು ಮತ್ತು ಬೆಟ್ಟಗಳಿಂದ ಆವೃತವಾದ ಪ್ರದೇಶವನ್ನು ಮಾವೋವಾದಿಗಳ ಬೆಟಾಲಿಯನ್ ನಂ. 1 ರ ನೆಲೆ ಎಂದು ಪರಿಗಣಿಸಲಾಗಿದೆ” ಎಂದು ವರದಿ ತಿಳಿಸಿದೆ.

“ಐವರು ಸಕ್ರಿಯ ನಕ್ಸಲರಾದ ದಾಸ್ರಿ ಧ್ರುವ (26), ಚನ್ನು ಗೋಟಾ (28), ಜ್ಯೋತಿ ವಡ್ಡೆ (19), ಸೀತಾ ವಡ್ಡೆ (19), ಸುನೀತಾ ವಡ್ಡೆ (25) ಶರಣಾಗಿದ್ದಾರೆ. ಅವರಿಗೆ ತಲಾ 50,000 ರೂಪಾಯಿ ಚೆಕ್ ಹಸ್ತಾಂತರಿಸಲಾಗಿದೆ,” ಎಂದು ಐಟಿಬಿಪಿ ಹೇಳಿದೆ.

ನಕ್ಸಲರ ಶರಣಾಗತಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಗಂಗಾರಾಮ್ ಚವಾಣ್, “ಶರಣಾದ ನಕ್ಸಲರು ಸರ್ಕಾರದ ಶರಣಾಗತಿ ನೀತಿಯಡಿಯಲ್ಲಿ ಎಲ್ಲಾ ಪ್ರಯೋಜನಗಳನ್ನು ಪಡೆಯಲಿದ್ದಾರೆ” ಎಂದಿದ್ದಾರೆ.

“ಶರಣಾದ ನಕ್ಸಲರು ಮಾದ್ (ಛತ್ತೀಸ್‌ಗಢ) ಮತ್ತು ನುವಾಪಾ (ಒಡಿಶಾ) ವಿಭಾಗಗಳಿಂದ ಬಂದವರು. ಸರ್ಕಾರದ ಎಲ್ಲಾ ಸವಲತ್ತುಗಳನ್ನು ಅವರಿಗೆ ನೀಡಲಾಗುವುದು. ಶರಣಾದವರಲ್ಲಿ ವಿವಿಧ ಶ್ರೇಣಿಯ ನಕ್ಸಲರಿದ್ದಾರೆ. ಕೆಲವು ನಕ್ಸಲರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿದ್ದರೆ, ಇನ್ನು ಕೆಲವರಿಗೆ 8 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ಸುಕ್ಮಾ ಎಸ್‌ಪಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ದಂತೇವಾಡದಲ್ಲಿ ಮೂವರು ನಗದು ಬಹುಮಾನ ಘೋಷಣೆಯಾದವರು ಸೇರಿದಂತೆ  26 ಮಾವೋವಾದಿಗಳು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಗಳ ಮುಂದೆ ಶರಣಾಗಿದ್ದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....