Homeಮುಖಪುಟ2020ರ ದೇಶದ್ರೋಹ ಪ್ರಕರಣ: ವಿದ್ಯಾರ್ಥಿ ಹೋರಾಟಗಾರ ಶರ್ಜೀಲ್ ಇಮಾಮ್‌ಗೆ ಜಾಮೀನು

2020ರ ದೇಶದ್ರೋಹ ಪ್ರಕರಣ: ವಿದ್ಯಾರ್ಥಿ ಹೋರಾಟಗಾರ ಶರ್ಜೀಲ್ ಇಮಾಮ್‌ಗೆ ಜಾಮೀನು

- Advertisement -
- Advertisement -

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಸುಮಾರು ನಾಲ್ಕೂವರೆ ವರ್ಷಗಳ ನಂತರ, ವಿದ್ಯಾರ್ಥಿ ಸಂಘಟನೆ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನೀಡಿದೆ. ತನಗೆ ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಶರ್ಜೀಲ್ ಇಮಾಮ್ ಪ್ರಶ್ನಿಸಿದ್ದರು ಮತ್ತು ಪ್ರಕರಣದಲ್ಲಿ ತಾನು ಅಪರಾಧಿಯಾಗಿದ್ದರೆ ನೀಡಬಹುದಾದ ಗರಿಷ್ಠ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಶಿಕ್ಷೆಯನ್ನು ಈಗಾಗಲೇ ಅನುಭವಿಸಿದ್ದೇನೆ ಎಂದು ವಾದಿಸಿದ್ದರು.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಅವರನ್ನು ದೇಶದ್ರೋಹದ ಪ್ರಕರಣ ದಾಖಲಿಸಿದ ನಂತರ ಜನವರಿ 2020 ರಲ್ಲಿ ಬಂಧಿಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ನಡುವೆಯೇ ಅವರು ನೀಡಿದ ಹೇಳಿಕೆ ವಿರುದ್ಧ ಕೇಸ್ ದಾಖಲಾಗಿತ್ತು. ದೆಹಲಿ, ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಮಾಮ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ದೆಹಲಿ ಪೊಲೀಸರ ಪ್ರಕಾರ, ಶರ್ಜೀಲ್ ಇಮಾಮ್ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ವಿಭಜನೆಯ ಭಾಷಣಗಳನ್ನು ಮಾಡಿದ್ದಾರೆ. ಹೊಸ ಪೌರತ್ವ ಕಾನೂನಿನ ವಿರುದ್ಧ ದೆಹಲಿಯ ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆಯ ಸಂಘಟಕರಲ್ಲಿ ಒಬ್ಬರು ಎಂದು ಹೇಳಲಾಗಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಮತ್ತು ನ್ಯಾಯಮೂರ್ತಿ ಮನೋಜ್ ಜೈನ್ ಅವರ ಹೈಕೋರ್ಟ್ ಪೀಠದ ಮುಂದೆ ವಾದ ಮಂಡಿಸಿದ ಪ್ರಾಸಿಕ್ಯೂಷನ್, ಶಾರ್ಜೀಲ್ ಇಮಾಮ್ ತಮ್ಮ ಭಾಷಣಗಳಲ್ಲಿ ಈಶಾನ್ಯವನ್ನು ದೇಶದಿಂದ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು. ಇಮಾಮ್ ವಿರುದ್ಧ ದೇಶದ್ರೋಹಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ ಅಡಿಯಲ್ಲಿ ಆರೋಪ ಹೊರಿಸಲಾಯಿತು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 13 ಅನ್ನು ಸಹ ಅನ್ವಯಿಸಲಾಯಿತು.

ಜಾಮೀನು ಕೋರಿ, ಇಮಾಮ್ ಅವರು ಯುಎಪಿಎ ಸೆಕ್ಷನ್ 13ರ ಅಡಿಯಲ್ಲಿ ಗರಿಷ್ಠ ಶಿಕ್ಷೆ ಏಳು ವರ್ಷಗಳು ಮತ್ತು ಅವರು ಈಗಾಗಲೇ ನಾಲ್ಕಕ್ಕೂ ಹೆಚ್ಚು ಕಾಲ ಕಸ್ಟಡಿಯಲ್ಲಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ವಿಚಾರಣಾ ನ್ಯಾಯಾಲಯವು ಈ ಹಿಂದೆ ಅವರಿಗೆ ಜಾಮೀನು ನಿರಾಕರಿಸಿತ್ತು, “ಅಸಾಧಾರಣ ಸಂದರ್ಭಗಳಲ್ಲಿ” ಆರೋಪಿಯ ಕಸ್ಟಡಿಯನ್ನು ವಿಸ್ತರಿಸಬಹುದು ಎಂದು ಗಮನಿಸಿ.

ಈಶಾನ್ಯ ದೆಹಲಿಯಲ್ಲಿ 2020 ರ ಗಲಭೆಗೆ ಸಂಬಂಧಿಸಿದ ಹಲವಾರು ಪ್ರಕರಣಗಳಲ್ಲಿ ಇಮಾಮ್ ಕೂಡ ಆರೋಪಿಯಾಗಿದ್ದಾರೆ.

ಇದನ್ನೂ ಓದಿ; ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...