Homeಮುಖಪುಟಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಕಾನೂನು ಸುದ್ದಿ ವೆಬ್‌ಸೈಟ್ ಆಗಿರುವ ’ಆರ್ಟಿಕಲ್ 14’ ಜನವರಿ 1, 2010 ರಿಂದ 2020 ರ ಡಿಸೆಂಬರ್ 31 ರವರೆಗೆ ದಾಖಲಾಗಿರುವ ಎಲ್ಲಾ ದೇಶದ್ರೋಹ ಪ್ರಕರಣಗಳನ್ನು ಕಲೆಹಾಕದೆ. ಆದರೆ ವಿಪರ್ಯಾಸವೆಂದರೆ ಸರ್ಕಾರದ ವಿರುದ್ದದ ಟೀಕೆಗಳು ದೇಶದ್ರೋಹ ಆಗುವುದಿಲ್ಲ ಎಂದು ಕೋರ್ಟುಗಳು ತೀರ್ಪಿತ್ತಿವೆ. ಆದರೂ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವ ಪರಿಪಾಠ ಹೆಚ್ಚಾಗಿದೆ.

’ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಯುಪಿಎಯ ಎರಡನೆ ಅವಧಿಗೆ ಹೋಲಿಸಿದರೆ ಎನ್‌ಡಿಎ ಆಡಳಿತದಲ್ಲಿ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವುದು 28% ಹೆಚ್ಚಾಗಿದೆ. ಸಿಎಎ-ಎನ್‌ಆರ್‌ಸಿ ಆಂದೋಲನಗಳ ಸಂದರ್ಭದಲ್ಲಿ, ಹತ್ರಾಸ್ ಅತ್ಯಾಚಾರದ ನಂತರ ಹಲವಾರು ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ.

ಮೋದಿ ಸರ್ಕಾರದ ಮೊದಲ ಆರು ವರ್ಷಗಳಲ್ಲಿ 519 ದೇಶದ್ರೋಹ ಪ್ರಕರಣಗಳು ದಾಖಲಾಗಿದೆ. 2010 ರಿಂದ ಮೇ 2014 ರವರೆಗೆ ಯುಪಿಎ ಸರ್ಕಾರದ ಅವಧಿಯಲ್ಲಿ 279 ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದವು. ಈ 279 ಪ್ರಕರಣಗಳಲ್ಲಿ 39% ಪ್ರಕರಣಗಳು ತಮಿಳುನಾಡಿನ ಕೂಡಂಕುಲಂನ ಪರಮಾಣು ವಿದ್ಯುತ್ ಸ್ಥಾವರ ವಿರುದ್ಧ ನಡೆದ ಹೋರಾಟ ನಡೆದಾಗ ದಾಖಲಾದವುಗಳು ಮತ್ತು ಭಾರತದ ಕೆಲವು ಪ್ರದೇಶಗಳಲ್ಲಿ ಮಾವೋವಾದದ ಹೆಸರಲ್ಲಿ ದಾಖಲಾದ ಪ್ರಕರಣಗಳಾಗಿದೆ.

ಪ್ರಸ್ತುತ ಸಂಗ್ರಹಿಸಿದ ಮಾಹಿತಿಯಂತೆ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 6 ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. ಹತ್ರಾಸ್ ಅತ್ಯಾಚಾರದ ನಂತರ 22 ಪ್ರಕರಣಗಳು ಮತ್ತು ಸಿಎಎ-ಎನ್ಆರ್‌ಸಿ ಪ್ರತಿಭಟನೆಯ ಸಂದರ್ಭದಲ್ಲಿ 25 ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ. ಇವುಗಳು ಮಾತ್ರವಲ್ಲದೆ, ಪುಲ್ವಾಮಾ ದಾಳಿಯ ನಂತರ 27 ಪ್ರಕರಣಗಳು ದಾಖಲಾಗಿವೆ. ಸಿಎಎ-ಎನ್ಆರ್‌ಸಿ ವಿರುದ್ದ ಪ್ರತಿಭಟನೆ ನಡೆದಾಗ ದಾಖಲಾದ 25 ಪ್ರಕರಣಗಳಲ್ಲಿ 22 ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೆ ದಾಖಲಾಗಿವೆ. ಪುಲ್ವಾಮಾ ದಾಳಿಯ ನಂತರ ದಾಖಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ ಒಟ್ಟು ಐದು ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ 65% ದೇಶದ್ರೋಹ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ರಾಜ್ಯಗಳು ಬಿಜೆಪಿ ತೆಕ್ಕೆಯಲ್ಲಿದೆ. ಇವುಗಳಲ್ಲಿ 30% ಪ್ರಕರಣಗಳು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA), ಸಾರ್ವಜನಿಕ ಆಸ್ತಿಗೆ ಹಾನಿ (ತಡೆಗಟ್ಟುವಿಕೆ) ಕಾಯ್ದೆ, ಮತ್ತು ರಾಷ್ಟ್ರೀಯ ಗೌರವ ಮತ್ತು ಹಿತಾಸಕ್ತಿಗೆ ಹಾನಿಯಾಗುವುದನ್ನು ತಡೆಗಟ್ಟುವ ಕಾಯಿದೆಗಳನ್ನು ದೇಶದ್ರೋಹದ ಆರೋಪದ ಜೊತೆಗೆ ದಾಖಲಿಸಲಾಗಿದೆ.

ದೇಶದ್ರೋಹ ಎಂಬುದು ತನ್ನ ವಿರುದ್ದ ಟೀಕೆ ಮತ್ತು ವಿರೋಧ ಮಾಡುವವರ ವಿರುದ್ದ ದಾಖಲಿಸಬಹುದಾದ ಸರ್ಕಾರಗಳಿಗೆ ಅತಿ ಪ್ರಿಯವಾದ ಒಂದು ಕಾನೂನಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಎರಡೂ ಆಡಳಿತದ ಅವಧಿಯಲ್ಲಿ ಇದು ಸಂಭವಿಸಿದೆ. ಅಸೀಮ್ ತ್ರಿವೇದಿ, ಅರುಂಧತಿ ರಾಯ್ ಯುಪಿಎ ಸರ್ಕಾರವು ದೇಶದ್ರೋಹಿ ಎಂದು ಹಣೆಪಟ್ಟಿ ಕಟ್ಟಿದ ಕೆಲವು ವ್ಯಕ್ತಿಗಳಾಗಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

ಗಣರಾಜ್ಯೋತ್ಸವದಂದು ಸಂಭವಿಸಿದ ಅಹಿತಕರ ಘಟನೆಯ ನಂತರ ಕಾಂಗ್ರೆಸ್ ಸಂಸದ ಶಶಿ ತರೂರ್, ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ನ್ಯಾಷನಲ್‌ ಹೆರಾಲ್ಡ್‌ನ ಹಿರಿಯ ಸಲಹಾ ಸಂಪಾದಕ ಮೃಣಾಲ್ ಪಾಂಡೆ ಮುಂತಾದವರ ಮೇಲೆ ದೇಶದ್ರೋಹದ ಪ್ರಕರಣಗಳು ದಾಖಲಾಗಿದೆ. ಇವರುಗಳ ಜೊತೆಗೆ, ನ್ಯಾಷನಲ್ ಹೆರಾಲ್ಡ್‌ನ ಸಂಪಾದಕ ಜಾಫರ್ ಆಗಾ, ದಿ ಕಾರವಾನ್‌ನ ಸಂಸ್ಥಾಪಕ ಮತ್ತು ಸಂಪಾದಕ ಪರೇಶ್ ನಾಥ್ ಮತ್ತು ಅನಂತ್ ನಾಥ್, ಮತ್ತು ಕಾರ್ಯನಿರ್ವಾಹಕ ಸಂಪಾದಕ ವಿನೋದ್ ಕೆ ಜೋಸ್ ಅವರ ಮೇಲೆ ಕೂಡಾ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ.

‘ಆರ್ಟಿಕಲ್ 14’ ವೆಬ್‌ಸೈಟ್ ಪ್ರಕಾರ, ಪ್ರಧಾನಿ ಮೋದಿಯವರ ವಿರುದ್ಧ ‘ಅನುಚಿತ’ ಅಥವಾ ‘ಅವಮಾನಕರ’ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸುಮಾರು 149 ಜನರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದಕ್ಕಾಗಿ ಒಟ್ಟು 144 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ರಾಜದ್ರೋಹ ಕಾಯ್ದೆಯ ಇತಿಹಾಸ : ತಿಲಕ್‌ & ಗಾಂಧಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತೇಕೆ?

ಕೃಪೆ: ಜನಪತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...