Homeಮುಖಪುಟದೇಶದ್ರೋಹ ಪ್ರಕರಣ: ಆಯಿಷಾ ಸುಲ್ತಾನಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್‌

ದೇಶದ್ರೋಹ ಪ್ರಕರಣ: ಆಯಿಷಾ ಸುಲ್ತಾನಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್‌

- Advertisement -
- Advertisement -

ತನ್ನ ವಿರುದ್ಧ ದಾಖಲಾದ ದೇಶದ್ರೋಹ ಪ್ರಕರಣದಲ್ಲಿ ಲಕ್ಷದ್ವೀಪ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಅವರಿಗೆ ಕೇರಳ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ನೀಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿ ಒಂದು ವಾರ ಬಂಧನದಿಂದ ರಕ್ಷಣೆ ನೀಡಿತ್ತು. ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಆಯಿಷಾ ಸುಲ್ತಾನ ಅವರ ಹೇಳಿಕೆಯನ್ನು ವಿವಾದವನ್ನಾಗಿಸಿದ ಬಿಜೆಪಿ ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿ ದೂರು ನೀಡಿತ್ತು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಆಯಿಷಾ ಸುಲ್ತಾನಾ ವಿರುದ್ದ ದೇಶದ್ರೋಹ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬಿಜೆಪಿಯ ಒಳಗೆ ಪ್ರತಿಭಟನೆ ಪ್ರಾರಂಭವಾಗಿ, ಹದಿನೈದು ನಾಯಕರು ಸೇರಿದಂತೆ ಹಲವು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು. “ಪ್ರಸ್ತುತ ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್ ಅವರ ಕ್ರಮಗಳು ಜನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಮತ್ತು ಜನರಲ್ಲಿ ತೀವ್ರ ಸಂಕಟವನ್ನು ಉಂಟುಮಾಡುತ್ತವೆ” ಎಂದು ಬರೆದಿದ್ದ ರಾಜಿನಾಮೆ ಪತ್ರದಲ್ಲಿ,  ಬಿಜೆಪಿಯ 12 ನಾಯಕರು ಸಹಿ ಮಾಡಿದ್ದರು.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ.

ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ, ಹಲವು ತಿಂಗಳಿನಿಂದ ದ್ವೀಪವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...