Homeಮುಖಪುಟಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ 'ದೇಶದ್ರೋಹ' ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ...

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ ‘ದೇಶದ್ರೋಹ’ ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ ಕೇಸ್‌ಗಳು ರದ್ದು?

- Advertisement -
- Advertisement -

2015ರ ಪಾಟಿದಾರ್ ಮೀಸಲಾತಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಮತ್ತು ಇತರ ನಾಲ್ವರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಅಹಮದಾಬಾದ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುಜರಾತ್ ಸರ್ಕಾರಕ್ಕೆ ಅನುಮತಿ ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಧೀರ್ ಬ್ರಹ್ಮಭಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೀಶ್ ಪುರೋಹಿತ್ ಶನಿವಾರ (ಮಾ.1) ಈ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದ್ದಾರೆ.

“ಕಾನೂನುಬದ್ಧವಾಗಿ ಮತ್ತು ಸಾಮಾಜಿಕವಾಗಿ ಸಾಧ್ಯವಿಲ್ಲ” ಎಂದು ತಿಳಿದಿದ್ದರೂ ಸಹ, ಹಾರ್ದಿಕ್ ಪಟೇಲ್, ದಿನೇಶ್ ಬಂಭಾನಿಯಾ, ಚಿರಾಗ್ ಪಟೇಲ್, ಕೇತನ್ ಪಟೇಲ್ ಮತ್ತು ಅಲ್ಪೇಶ್ ಕಥೇರಿಯಾ ಪಾಟಿದಾರ್ ಅಥವಾ ಪಟೇಲ್ ಸಮುದಾಯದ ಸದಸ್ಯರನ್ನು ಒಬಿಸಿ ಪಟ್ಟಿಗೆ ಸೇರಿಸಲು ಆಂದೋಲನ ನಡೆಸುವಂತೆ 2015ರಲ್ಲಿ ಪ್ರಚೋದಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 121 (ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು ಅಥವಾ ಯುದ್ಧ ಮಾಡಲು ಪ್ರಯತ್ನಿಸುವುದು ಅಥವಾ ಯುದ್ಧ ಮಾಡಲು ಪ್ರೇರೇಪಿಸುವುದು), 121ಎ (ಸೆಕ್ಷನ್ 121 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಮಾಡಲು ಸಂಚು ರೂಪಿಸುವುದು), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯದ ವಿರುದ್ದ ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 153ಬಿ (ಆಪಾದನೆ, ರಾಷ್ಟ್ರೀಯ ಏಕೀಕರಣದ ವಿರುದ್ದ ಪೂರ್ವಾಗ್ರಹ ಪೀಡಿತ ಹೇಳಿಕೆಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕಳೆದ ತಿಂಗಳು ಬಿಜೆಪಿ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದ ಒಂಬತ್ತು ಪಾಟೀದಾರ್ ಕೋಟಾ ಆಂದೋಲನ ಪ್ರಕರಣಗಳಲ್ಲಿ ಇದೂ ಒಂದು. 2015 ರ ಪಾಟೀದಾರ್ ಆಂದೋಲನಕ್ಕೆ ಸಂಬಂಧಿಸಿದಂತೆ ಸುಮಾರು 300 ಪ್ರಕರಣಗಳು ದಾಖಲಾಗಿವೆ.

ಶೆಹ್ಲಾ ರಶೀದ್ ವಿರುದ್ದದ ದೇಶದ್ರೋಹ ಪ್ರಕರಣ ವಾಪಸ್!

2019ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧದ ಮೊಕದ್ದಮೆಯನ್ನು ಹಿಂಪಡೆಯಲು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ (ಫೆ.27) ಸ್ವೀಕರಿಸಿದೆ.

ಸೆಪ್ಟೆಂಬರ್ 2019ರಲ್ಲಿ, ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ರಶೀದ್ ವಿರುದ್ಧ ದೇಶದ್ರೋಹ ಮತ್ತು ಇತರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿತ್ತು.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು), 504 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡಿದ್ದ 370ನೇ ವಿಧಿಯನ್ನು ಆಗಸ್ಟ್ 18, 2019ರಂದು ರದ್ದುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆಯಲ್ಲಿ ಮಕ್ಕಳು ಮತ್ತು ಯುವಕರ ಮೇಲೆ ಸಶಸ್ತ್ರ ಪಡೆಗಳು ದೌರ್ಜನ್ಯವೆಸಗಿವೆ ಎಂದು ರಶೀದ್ ಆರೋಪಿಸಿದ್ದರು.

ಜೈಲಿನಲ್ಲಿ ಕೊಳೆಯುತ್ತಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ 

ಬಿಜೆಪಿ ಬೆಂಬಲಿಸಿದವರ ವಿರುದ್ದದ ದೇಶದ್ರೋಹಗಳಂತಹ ಗಂಭೀರ ಪ್ರಕರಣಗಳು ರದ್ದಾಗುತ್ತಿದೆ. ಆದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ನಂತವರು ಕಳೆದ 4-5 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

2020ರ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ. ಇದೇ ರೀತಿ ಸಿಎಎ ವಿರುದ್ದದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ದವೂ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಇವರಿಬ್ಬರ ಜಾಮೀನು ಅರ್ಜಿಗಳನ್ನು ಅನೇಕ ಬಾರಿ ತಿರಸ್ಕರಿಸಲಾಗಿದೆ. ವಿಶೇಷವೆಂದರೆ, ವಿಚಾರಣೆಯೇ ಪ್ರಾರಂಭಿಸದೆ, ಆರೋಪ ಸಾಬೀತಾಗದೆ ಜೈಲಿನಲ್ಲಿಡಲಾಗಿದೆ.

ಒಂದು ಕಡೆಗೆ ಬದಲಾಗಿ ಎಲ್ಲವೂ ಒಳ್ಳೆಯದಾಗುತ್ತದೆ : ರಾಜ್‌ದೀಪ್ ಸರ್ದೇಸಾಯಿ 

“ಶೆಹ್ಲಾ ರಶೀದ್ ವಿರುದ್ಧದ 2019ರ ದೇಶದ್ರೋಹ ಪ್ರಕರಣವನ್ನು ದೆಹಲಿ ಪೊಲೀಸರು ಹಿಂತೆಗೆದುಕೊಂಡಿದ್ದಾರೆ; ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಗುಜರಾತ್ ಸರ್ಕಾರಕ್ಕೆ ಅಹಮದಾಬಾದ್ ನ್ಯಾಯಾಲಯ ಅನುಮತಿ ನೀಡಿದೆ. ಉಮರ್ ಖಾಲಿದ್‌ನಂತೆ ಬಾಗಲು ನಿರಾಕರಿಸಿದವರು ಇನ್ನೂ 5 ವರ್ಷಗಳಿಂದ ಜಾಮೀನು ಸಹ ಇಲ್ಲದೆ ಜೈಲಿನಲ್ಲಿದ್ದಾರೆ. ಕಾನೂನು ತನ್ನದೇ ಆದ ಹಾದಿ ಹಿಡಿಯುತ್ತಿದೆಯೇ ಅಥವಾ ‘ವಾಷಿಂಗ್ ಮೆಷಿನ್’ ಪಾತ್ರವನ್ನು ನಿರ್ವಹಿಸುತ್ತಿರುವ ರಾಜಕೀಯವೇ? ಸಂದೇಶವು ಸ್ಪಷ್ಟವಾಗಿದೆ: ಬದಿಗಳನ್ನು ಬದಲಾಯಿಸಿ ಎಲ್ಲವೂ ಒಳ್ಳೆಯದಾಗುತ್ತದೆ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

 

“ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ”

“ಶೆಹ್ಲಾ ರಶೀದ್ ಮತ್ತು ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸಂದೇಶ ಸ್ಪಷ್ಟವಾಗಿದೆ. ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ” ಎಂದು ಹೋರಾಟಗಾರ ತರುಣ್ ಗೌತಮ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ಹಿನ್ನೆಲೆ 

ಹಾರ್ದಿಕ್ ಪಟೇಲ್ : ಗುಜರಾತ್‌ನ ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಯುವಜನರನ್ನು ಒಟ್ಟುಗೂಡಿಸಿ ಧೀರ್ಘ ಕಾಲ ಪ್ರತಿಭಟಿಸಿದ ಹಾರ್ದಿಕ್ ಪಟೇಲ್, ಅಲ್ಲಿನ ಯುವನಾಯಕನಾಗಿ ಬೆಳೆದಿದ್ದರು. ಕಳೆದ 20 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಅವರ ಪ್ರತಿಭಟನೆಗೆ ಭರಪೂರ ಬೆಂಬಲ ವ್ಯಕ್ತವಾಗಿತ್ತು. 2017ರಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಹೋರಾಟ ಮುಂದುವರೆಸಿದ್ದರು. ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಎಂಬ ಮೂವರು ಯುವಜನರು ಬಿಜೆಪಿಯ ಎದೆ ನಡುಗಿಸಿದ್ದರು. ಆ ಚುನಾವಣೆಯಲ್ಲಿ ಸೋಲಿನ ದವಡೆಗೆ ಸಿಲುಕಿದ್ದ ಬಿಜೆಪಿ ಅಲ್ಪದರಲ್ಲೇ ಸರಳ ಬಹುಮತ ಪಡೆದು ಪಾರಾಗಿತ್ತು. ಆನಂತರ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಮೇಲೆ ಬಿಜೆಪಿ ದೇಶದ್ರೋಹ ಸೇರಿ ಇತರ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ಕೊಟ್ಟಿತ್ತು. ಅವರಿಬ್ಬರೂ ಬಿಜೆಪಿ ಸೇರಿ ಆರೋಪ ಮುಕ್ತರಾದರು. ಅವರ ಮೇಲಿನ ಪ್ರಕರಣ ಹಿಂಪಡೆಯಲಾಗಿದೆ. ಜಿಗ್ನೇಶ್ ಮೇಲೆ ಹಲವು ಪ್ರಕರಣಗಳಿದ್ದು ತನಿಖೆ ಎದುರಿಸುತ್ತಿದ್ದಾರೆ.

ಶೆಹ್ಲಾ ರಶೀದ್  : ಕಾಶ್ಮೀರದ ಈ ಯುವತಿ ಜೆಎನ್‌ಯೂನಲ್ಲಿ ಓದುತ್ತಿದ್ದಾಗ ಬಿಜೆಪಿಯ ಕಡು ವಿರೋಧಿಯಾಗಿದ್ದರು. 2018ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಯ್ಯ, ಜಿಗ್ನೇಶ್, ಉಮರ್ ಖಾಲಿದ್ ಮತ್ತು ಪ್ರಕಾಶ್ ರಾಜ್‌ರವರ ಜೊತೆ ಫೋಟೊ ತೆಗೆಸಿಕೊಂಡಿದ್ದರು. ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ಅನ್ನುವ ಪಕ್ಷ/ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2019ರಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ, ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಭಾರತೀಯ ಸೇನೆಯು ಜನರನ್ನು ಕರೆದೊಯ್ದು ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದರು. ಆ ಕಾರಣಕ್ಕೆ ಅವರ ಮೇಲೆ ಉದ್ದೇಶಪೂರ್ವಕ ಹಿಂಸೆಗೆ ಪ್ರಚೋದನೆ ಮತ್ತು ಸೇನೆಗೆ ಕೆಟ್ಟ ಹೆಸರು ತರುತ್ತಿದ್ದಾರೆಂದು ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಆನಂತರ, ನಿಧಾನಕ್ಕೆ ಶೆಹ್ಲಾ ರಶೀದ್ ಬದಲಾದರು. ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು, ಬಿಜೆಪಿ ಪರ ಟ್ವೀಟ್ ಮಾಡಿದರು. ಈಗ ಅವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ.

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...